ಚುನಾವಣೆ
ಅಯೋಧ್ಯೆಯಂತೆ ಗುಜರಾತ್‌ನಲ್ಲೂ ಬಿಜೆಪಿ ಸೋಲಿಸುತ್ತೇವೆ: ರಾಹುಲ್ ಗಾಂಧಿ ಶಪಥ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯನ್ನು (Ayodhya) ಬಿಜೆಪಿಯನ್ನು ಸೋಲಿಸಿದಂತೆ, ಮುಂಬರುವ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸೋಲಿಸಲಾಗುವುದು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ತಿಳಿಸಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕರು ಈ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು ನಮಗೆ ಬೆದರಿಕೆ ಹಾಕಿ, ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ. ನಮ್ಮ ಕಚೇರಿಗೆ ಹಾನಿ ಮಾಡಿದಂತೆ ಅವರ ಸರ್ಕಾರವನ್ನು ಒಡೆಯಲು ಹೊರಟಿದ್ದೇವೆ ಎಂದು ನಾನು ನಿಮಗೆ ಹೇಳುತ್ತೇನೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ. ನರೇಂದ್ರ ಮೋದಿಯನ್ನು ಸೋಲಿಸುತ್ತದೆ ಎಂಬುದನ್ನು ಬರೆದಿಟ್ಟುಕೊಳ್ಳಿ. ನಾವು ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್‌ನಲ್ಲಿ ಬಿಜೆಪಿ ಸೋಲಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಗುಜರಾತ್ ಅನ್ನು ಗೆಲ್ಲುತ್ತದೆ. ರಾಜ್ಯದಿಂದ ಹೊಸ ಆರಂಭವನ್ನು ಮಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್‌ನ ಪಾಲ್ಡಿ ಪ್ರದೇಶದಲ್ಲಿ ಜುಲೈ 2 ರಂದು ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಚೇರಿಯಾದ ರಾಜೀವ್ ಗಾಂಧಿ ಭವನದ ಹೊರಗೆ ಬಿಜೆಪಿಯ ಯುವ ಘಟಕದ ಸದಸ್ಯರು, ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಲು ಜಮಾಯಿಸಿದ್ದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಸದಸ್ಯರ ನಡುವೆ ನಡೆದ ಘರ್ಷಣೆಯನ್ನು ರಾಹುಲ್ ಗಾಂಧಿ ಇದೇ ವೇಳೆ ಉಲ್ಲೇಖಿಸಿದ್ದರು.
ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯ ಫೈಜಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದರು. ಈ ವಿಚಾರವಾಗಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಒಬ್ಬನೇ ಒಬ್ಬ ಸ್ಥಳೀಯ ವ್ಯಕ್ತಿಯನ್ನು ಆಹ್ವಾನಿಸದಿರುವುದನ್ನು ಕಂಡು ಅಯೋಧ್ಯೆಯ ಜನರು ಕೋಪಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಅಯೋಧ್ಯೆಯಿಂದಲೇ ಸ್ಪರ್ಧಿಸಲು ಬಯಸಿದ್ದರು. ಆದರೆ ಕ್ಷೇತ್ರದ ಸರ್ವೇ ನಡೆಸಿದವರು, ಸ್ಪರ್ಧೆ ಮಾಡದಂತೆ ತಿಳಿಸಿದ್ದಾರೆ. ನೀವು ಸ್ಪರ್ಧಿಸಿದರೆ ಸೋಲುತ್ತೀರಿ. ನಿಮ್ಮ ರಾಜಕೀಯ ಜೀವನ ಕೊನೆಗೊಳ್ಳುತ್ತದೆ ಎಂದು ಸಲಹೆ ನೀಡಿದ್ದರು ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.
ಚುನಾವಣೆ
ನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
ಭೋಪಾಲ್: ಮಧ್ಯಪ್ರದೇಶದ ದತಿಯಾ ವಿಧಾನಸಭಾ ಉಪಚುನಾವಣೆಗೆ ಮಾಜಿ ಗೃಹಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬಿಜೆಪಿ ಟಿಕೆಟ್ ನೀಡದೆ, ಅವರ ಬದಲಿಗೆ ಅಶುತೋಷ್ ತಿವಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ದತಿಯಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ರಘುವೀರ್ ಶರಣ್ ಸೇರಿದಂತೆ ಹಲವು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಟಿಕೆಟ್ ನಿರಾಕರಣೆಯ ಸುದ್ದಿ ಹೊರಬಿದ್ದ ತಕ್ಷಣ ಸಾವಿರಾರು ಬೆಂಬಲಿಗರು NH-44 ಝಾನ್ಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಸುಮಾರು 15 ಕಿಲೋಮೀಟರ್‌ಗಳಷ್ಟು ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಯಿತು.
ದತಿಯಾ ಎಸ್‌ಪಿ ಮಯೂರ್ ಖಾಂಡೇಲ್ವಾಲ್ ಅವರ ಪ್ರಕಾರ, 3,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಾರುಕಟ್ಟೆ ಬಂದ್ ಮಾಡಲು ಯತ್ನಿಸಿದ್ದು, ಹಲವು ಬಾರಿ ಮನವಿ ಮಾಡಿದರೂ ರಸ್ತೆ ತಡೆ ಹಿಂಪಡೆಯಲಿಲ್ಲ. ಬಳಿಕ ಪೊಲೀಸರು ಅಶ್ರುವಾಯು ಬಳಸಿದರೂ ಕಲ್ಲು ತೂರಾಟ ಮತ್ತಷ್ಟು ತೀವ್ರಗೊಂಡಿತು. ಘಟನೆಯಲ್ಲಿ ಆರುಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚುವರಿ ಎಸ್‌ಪಿ ಹಾಗೂ ಎಸ್‌ಪಿಗೂ ಗಾಯಗಳಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಯಾರು ನರೋತ್ತಮ್ ಮಿಶ್ರಾ?
ನರೋತ್ತಮ್ ಮಿಶ್ರಾ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಗೃಹಸಚಿವರಾಗಿದ್ದಾರೆ. 2008ರಿಂದ ದತಿಯಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಅವರು ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಜಲಸಂಪನ್ಮೂಲ, ನಗರಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ನಿರ್ವಹಿಸಿದ್ದರು.
ಉಪಚುನಾವಣೆ ಏಕೆ ನಡೆಯುತ್ತಿದೆ?
ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರತಿ ವಿರುದ್ಧ ವಂಚನೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಇದರ ಪರಿಣಾಮವಾಗಿ ದತಿಯಾ ಕ್ಷೇತ್ರಕ್ಕೆ ಜುಲೈ 30ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಿಜೆಪಿ ಒಳಜಗಳ ತೀವ್ರಗೊಂಡಿರುವುದು ಚುನಾವಣೆಗೆ ಹೊಸ ತಿರುವು ನೀಡಿದೆ.
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್‌ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
-
ದೇಶ23 hours agoಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ
-
ದೇಶ23 hours agoಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ ಹಿನ್ನಡೆ: ದೆಹಲಿ ಕೋರ್ಟ್ ಮಹತ್ವದ ತೀರ್ಪು
-
ದೇಶ6 hours agoಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!
-
ದೇಶ5 hours ago20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
-
ದೇಶ6 hours agoIran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
-
ದೇಶ6 hours ago40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್ಗೆ; FTA ಮೂಲಕ ಹೊಸ ಅಧ್ಯಾಯ
-
ದೇಶ7 hours agoಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್ನಲ್ಲಿ ಖಲಿಸ್ತಾನಿ ಘೋಷಣೆ
-
ದೇಶ4 hours ago14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
