ದೇಶ
ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕೆಂಬ ಬಿಜೆಪಿ ಶಾಸಕನ ಹೇಳಿಕೆಗೆ ಕಾಂಗ್ರೆಸ್ ಖಂಡನೆ – Ramanath Rai
ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್ ಶೆಟ್ಟಿ ವಿರುದ್ದ ಸುಮೋಟೋ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ.
ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸುವ ವೇಳೆ, ರಾಹುಲ್ ಗಾಂಧಿಗೆ ಸಂಸತ್ತಿಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಎಂದು ಹೇಳಿದ್ದರು.
ಈ ಹೇಳಿಕೆ ಇದೀಗ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಶಾಸಕ ಭರತ್ ಶೆಟ್ಟಿ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
”ಭರತ್ ಶೆಟ್ಟಿ ಅವರಿಗೆ ತಾಕತ್ತಿದ್ದರೆ, ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ. ಆಮೇಲೆ ನೋಡೋಣ. ಸಂಸತ್ತಿನ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದ ರಾಹುಲ್ ದೇಶಕ್ಕೆ ಪ್ರಾಣ ಕೊಟ್ಟ ನೆಹರೂ, ಇಂದಿರಾ ಗಾಂಧಿಯವರ ಕುಡಿ. ರಾಹುಲ್ ಹೇಳಿಕೆಯನ್ನು ಕೆಟ್ಟದಾಗಿ ಪ್ರತಿಬಿಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಭರತ್ ಶಾಸಕನಾಗಲು ಯೋಗ್ಯತೆ ಇಲ್ಲದ ಮನುಷ್ಯ. ಅಮರನಾಥ್ ಶೆಟ್ಟಿಯವರ ಕೃಪಾಕಟಾಕ್ಷದಿಂದ ರಾಜಕೀಯದಲ್ಲಿ ಮೇಲೆ ಬಂದು ಅವರಿಗೆ ಕೈ ಕೊಟ್ಟಿದ್ದಾನೆ. ರಾಹುಲ್ ಬಗ್ಗೆ ಏಕವಚನದಲ್ಲಿ ಕೆಟ್ಟದಾಗಿ ಮಾತನಾಡುವುದು ಶೋಭೆ ತರುವುದಿಲ್ಲ. ರಾಹುಲ್ ಅವರನ್ನು ಭರತ್ ಶೆಟ್ಟಿ ಹುಚ್ಚ ಎಂದು ಹೇಳಿದ್ದು, ಆ ಹುಚ್ಚ ಯಾರು ಎಂದು ಅವರ ನಾಯಕರ ಕಟೌಟ್ನಲ್ಲಿ ಅವರ ವೇಷಭೂಷಣ ನೋಡಿದಾಗ ತಿಳಿಯುತ್ತೆ” ಎಂದು ವಾಗ್ದಾಳಿ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ”ಲೋಕಸಭೆಯಲ್ಲಿ ಪ್ರಧಾನಿ ಎದುರೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಮೋದಿಗೆ ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಲು ಆಗಿಲ್ಲ. ಇನ್ನು ಭರತ್ ಶೆಟ್ಟಿ ಯಾವ ಲೆಕ್ಕ. ಅವರು ಚಿಲ್ಲರೆ ರಾಜಕಾರಣಿ. ಅವರು ಶಾಸಕರುಗಳ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ. ಅವರಿಗೆ ಸಮಾಜ ಬಹಿಷ್ಕಾರ ಹಾಕಬೇಕು. ವೈದ್ಯರಾಗಿ ಅವರು ನೀಡಿರುವ ಹೇಳಿಕೆ ಘೋರ ಅಪರಾಧ. ಶಸ್ತ್ರಾಸ್ತ್ರ ತೆಗೆಯಲಾಗುವುದು ಎಂದು ಹೇಳಿಕೆ ನೀಡಿರುವ ಭರತ್ ಶೆಟ್ಟಿ ವಿರುದ್ದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಮೋಟೋ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಆಗ್ರಹಿಸಿದರು.
ಕೆಪಿಸಿಸಿ ರಾಜ್ಯ ವಕ್ತಾರ ಎಂ.ಜಿ.ಹೆಗ್ಡೆ ಮಾತನಾಡಿ, ”ರಾಹುಲ್ ಗಾಂಧಿ ಹಿಂದು ಧರ್ಮ ದ್ವೇಷ, ಹಿಂಸೆ ಹೇಳುವುದಿಲ್ಲ. ಅದು ಅಭಯ ಕೊಡುತ್ತದೆ. ಬಿಜೆಪಿಯವರು ಪ್ರಚೋದಿಸುತ್ತೀರಿ ಎಂದು ಹೇಳಿದ್ದರು. ಅದನ್ನು ಭರತ್ ಶೆಟ್ಟಿ ಪ್ರೂವ್ ಮಾಡಿದ್ದಾರೆ. ಶಸ್ತ್ರಾಸ್ತ್ರ ಹಿಡಿಯುವ ಹೇಳಿಕೆ ನೀಡಿದ ನಿಮ್ಮ ಹಿಂದುತ್ವದ ಬಗ್ಗೆ ನಾವು ಕೇಳಬೇಕಾಗುತ್ತದೆ. ರಾಹುಲ್ ಗಾಂಧಿ ಅವರಿಗೆ ಹೊಡೆಯಲು ಹೋಗುವುದಿದ್ದರೆ, ಅದರ ಮೊದಲು ಆಸ್ಪತ್ರೆಯಲ್ಲಿ ಬೆಡ್ ಬುಕ್ ಮಾಡಿ” ಎಂದು ಹೇಳಿದರು.
ದೇಶ
Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.
ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.
ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು
ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.
ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.
ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿದ ಅಧಿಕಾರಿಗಳು
ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.
ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು
ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.
ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ಬೆಂಗಳೂರು
Bengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್‌ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಲಾಲ್‌ಬಾಗ್‌ನಲ್ಲಿ ಬೃಹತ್ ಬ್ಯಾನರ್‌ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.
ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್‌ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಶೇ.28ರಷ್ಟು ವಾರ್ಡ್‌ಗಳಲ್ಲಿ ಪಾರ್ಕ್‌ಗಳೇ ಇಲ್ಲ!
ಐಐಹೆಚ್‌ಎಸ್ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್‌ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ
ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.
- ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
- ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
- ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
- ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
- ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
- ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.
ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
-
ಬೆಂಗಳೂರು24 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ದೇಶ23 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ಬೆಂಗಳೂರು6 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ದೇಶ5 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು5 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ಬೆಂಗಳೂರು3 ಗಂಟೆಗಳು agoBengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
-
ದೇಶ5 ಗಂಟೆಗಳು agoNepal Flood: ನೇಪಾಳದಲ್ಲಿ ಸಿಲುಕಿದ ಕನ್ನಡಿಗರೇ ಗಮನಿಸಿ; ಸರ್ಕಾರದಿಂದ Google Form ಬಿಡುಗಡೆ
-
ರಾಜ್ಯ6 ಗಂಟೆಗಳು agoB Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!
