Connect with us

ಕ್ರೀಡೆ

ಐದು ಕೋಟಿ ಹಣ ನನಗೆ ಬೇಡ ಎಂದ ದ್ರಾವಿಡ್.. ಅದಕ್ಕೆ ಕಾರಣವೂ ಇದೆ.. ಮತ್ತೊಮ್ಮೆ ಹೃದಯಗೆದ್ದ ಕನ್ನಡಿಗ..!

Published

on

ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್​ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ ಮಾಡಿತ್ತು.

ವಿಶ್ವಕಪ್​​ಗಾಗಿ ಟೀಂ ಇಂಡಿಯಾ ಜೊತೆ ಅಮೆರಿಕ ಮತ್ತು ವೆಸ್ಟ್​ ವಿಂಡೀಸ್​ಗೆ ಪ್ರಯಾಣ ಬೆಳೆಸಿದ್ದ 42 ಮಂದಿಗೆ ಈ ಹಣವನ್ನು ಹಂಚಿಕೆ ಮಾಡಲಾಗುವುದು ಎಂದು ಬಿಸಿಸಿಐ ಹೇಳಿತ್ತು. ಅದರಂತೆ ಬಿಸಿಸಿಐ ಎಲ್ಲರಿಗೂ ಹಣವನ್ನು ನೀಡುತ್ತಿದೆ. ಬಿಸಿಸಿಐ ನಿರ್ಧಾರದಂತೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್​​ಗೆ ಐದು ಕೋಟಿ ನೀಡೋದಾಗಿ ಹೇಳಿತ್ತು. ಆದರೆ ದ್ರಾವಿಡ್​ ನನಗೆ ಐದು ಕೋಟಿ ಹಣ ಬೇಡ. 2.5 ಕೋಟಿ ರೂಪಾಯಿ ಬಹುಮಾನ ಮಾತ್ರ ಸಾಕು ಎಂದು ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದಾರೆ. ದ್ರಾವಿಡ್​ ಮನವಿಯನ್ನು ಪುರಸ್ಕರಿಸಿದ ಬಿಸಿಸಿಐ, ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ಹೇಳಿದೆ.

ರಾಹುಲ್​​ ಯಾಕೆ ಬೇಡ ಅಂದರು..?

ರಾಹುಲ್ ದ್ರಾವಿಡ್ ನಿರ್ಧಾರಕ್ಕೆ ಕಾರಣ ಕೂಡ ಉಂಟು. ಕೋಚ್​ ಆಗಿ ಟೀಂ ಇಂಡಿಯಾ ಸೇರಿದ ದಿನದಿಂದ ದ್ರಾವಿಡ್​​, ಭಾರತದ ತಂಡದ ಪ್ರತಿ ಸಿಬ್ಬಂದಿಯನ್ನೂ ಸಮನಾಗಿ ಕಂಡವರು. ಯಾರಿಗೂ ತಾರತಮ್ಯ ಮಾಡದೇ, ಇಲ್ಲರನ್ನೂ ಒಂದೇ ರೀತಿ ಕಂಡು ಮೆಚ್ಚುಗೆ ಗಳಿಸಿದವರು. ನಡೆ, ನುಡಿಯಿಂದ ತಂಡದಲ್ಲಿ ಒಗ್ಗಟ್ಟಿನ ಮಂತ್ರವನ್ನು ಜಪಿಸಿದ್ದ ದ್ರಾವಿಡ್​​ ಅವರ ಈ ನಿರ್ಧಾರದ ಹಿಂದೆಯೂ ಒಂದು ದೊಡ್ಡ ಕಾರಣ ಇದೆ.

ವಿಷಯ ಏನೆಂದರೆ 125 ಕೋಟಿ ರೂಪಾಯಿ ಮೊತ್ತದ ಬಹುಮಾನದಲ್ಲಿ ತಂಡಕ್ಕೆ ಆಯ್ಕೆ ಆಗಿದ್ದ 15 ಆಟಗಾರರಿಗೆ ತಲಾ 5 ಕೋಟಿ ರೂಪಾಯಿ ನೀಡೋದಾಗಿ ಬಿಸಿಸಿಐ ಹೇಳಿತ್ತು. ಅವರ ಜೊತೆ ಮುಖ್ಯ ಕೋಚ್​ ದ್ರಾವಿಡ್​​ಗೂ ಐದು ಕೋಟಿ ಸಿಗಲಿದೆ ಎಂದು ಬಿಸಿಸಿಐ ಹೇಳಿತ್ತು. ಉಳಿದಂತೆ ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಕೋಚ್ ಸೇರಿದಂತೆ ಇತರೆ ಕೋಚ್ ಸಿಬ್ಬಂದಿಗೆ ತಲಾ 2.5 ಕೋಟಿ ರೂಪಾಯಿ ನೀಡೋದಾಗಿ ಹೇಳಿತ್ತು. ದ್ರಾವಿಡ್​ ಅವರು ತಂಡದಲ್ಲಿದ್ದ ಎಲ್ಲಾ ಕೋಚ್​ಗಳಿಗೂ ಹಣ ನೀಡಿದಂತೆ ತಮಗೂ ನೀಡಿ. ಹೆಚ್ಚುವರಿಯಾಗಿ ನನಗೆ ಏನೂ ಬೇಡ. ಅವರಂತೆ ನಾನೂ ಸಮ ಎಂದು ಬಿಸಿಸಿಐ ಬಳಿ ಮನವಿ ಮಾಡಿಕೊಂಡಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.

ದ್ರಾವಿಡ್​ ಅವರು ಹೀಗೆ ಮಾಡಿದ್ದು ಇದೇ ಮೊದಲಲ್ಲ. 2018ರಲ್ಲಿ ನಡೆದ U-19 ವಿಶ್ವಕಪ್​​ನಲ್ಲಿ ಭಾರತ ತಂಡ ವಿಶ್ವಕಪ್​​ಗೆ ಮುತ್ತಿಟ್ಟಿತ್ತು. ಈ ವೇಳೆ ಹೆಡ್​ ಮಾಸ್ಟರ್​​ ದ್ರಾವಿಡ್​ಗೆ ಬಿಸಿಸಿಐ 50 ಲಕ್ಷ ರೂಪಾಯಿ ಬಹುಮಾನ ನೀಡೋದಾಗಿ ಹೇಳಿತ್ತು. ಜೊತೆಗೆ ಇತರೆ ಕೋಚ್​​ಗಳಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡೋದಾಗಿ ಹೇಳಿತ್ತು. ಬಿಸಿಸಿಐ ಈ ನಿಲುವನ್ನು ದ್ರಾವಿಡ್ ಅಂದು ಕೂಡ ವಿರೋಧಿಸಿದ್ದರು. ದ್ರಾವಿಡ್ ಒತ್ತಾಯಕ್ಕೆ ಮಣಿದಿದ್ದ ಬಿಸಿಸಿಐ, ಇತರೆ ಕೋಚ್ ಸಿಬ್ಬಂದಿಗೆ ನೀಡಿದಂತೆ 25 ಲಕ್ಷ ರೂಪಾಯಿ ಹಣವನ್ನು ದ್ರಾವಿಡ್​ಗೆ ಬಿಸಿಸಿಐ ನೀಡಿತ್ತು.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending