ದೇಶ
ಕಾವೇರಿ ವಿವಾದ: ಅಗತ್ಯವಿದ್ದಲ್ಲಿ ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ತಮಿಳುನಾಡು ಸರ್ವಪಕ್ಷ ಸಭೆ, ಕರ್ನಾಟಕದ ನಡೆಗೆ ಖಂಡನೆ
ಚೆನ್ನೈ: ಕಾವೇರಿ ವಿವಾದದ ಬಗ್ಗೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಿಡಬ್ಲ್ಯುಆರ್ ಎ ಸೂಚನೆಯ ಪ್ರಕಾರ ನೀರು ಹರಿಸಲು ಮುಂದಾಗದ ಕರ್ನಾಟಕದ ನಡೆಯ ಬಗ್ಗೆ ಖಂಡನೆ ವ್ಯಕ್ತವಾಗಿದೆ.
ಕರ್ನಾಟಕದ ನಡೆಯ ವಿಷಯವಾಗಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಸಭೆಯಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಹೇಳಿದ್ದು, ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಕ್ಕೂ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕರ್ನಾಟಕ ಸಿಡಬ್ಲ್ಯುಆರ್ ಎ ಸೂಚನೆ ಅನುಸರಿಸಲು ವಿಫಲವಾದರೆ, ತಮಿಳುನಾಡಿಗೆ ನ್ಯಾಯ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಾವು ಸಿದ್ಧರಿದ್ದೇವೆ” ಎಂದು ಸಿಎಂ ಸ್ಟಾಲಿನ್ ದೃಢಪಡಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನದಂತೆ ಪ್ರತಿದಿನ ಒಂದು ಟಿಎಂಸಿ ಅಡಿ ನೀರು ಬಿಡಲು ನಿರಾಕರಿಸುತ್ತಿರುವ ಕರ್ನಾಟಕ ಸರ್ಕಾರವನ್ನು ಸಭೆಯಲ್ಲಿ ಅಂಗೀಕರಿಸಿದ ನಿರ್ಣಯ ತೀವ್ರವಾಗಿ ಖಂಡಿಸಿದೆ.
ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ನೀರು ಬಿಡುವಂತೆ ನಿರ್ದೇಶನ ನೀಡಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸ್ಟಾಲಿನ್, ಈ ವರ್ಷ ಸಾಕಷ್ಟು ಮಳೆಯಾಗಿದ್ದರೂ ಕರ್ನಾಟಕ ಸಿಡಬ್ಲ್ಯೂಆರ್‌ಎ ಶಿಫಾರಸುಗಳನ್ನು ಪಾಲಿಸಲು ನಿರಾಕರಿಸಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
“ಕಳೆದ ವರ್ಷ, ಕರ್ನಾಟಕ, ಆದೇಶಗಳನ್ನು ಅನುಸರಿಸದ ಕಾರಣ, ಕಾವೇರಿ ನೀರಿನ ನಮ್ಮ ಹಕ್ಕಿನ ಪಾಲನ್ನು ಪಡೆಯಲು ನಾವು ಸುಪ್ರೀಂ ಕೋರ್ಟ್ ಸಂಪರ್ಕಿಸುವ ಪರಿಸ್ಥಿತಿ ನಿರ್ಮಾಣವಾಯಿತು.” ಎಂದು ಸ್ಟಾಲಿನ್ ಟೀಕಿಸಿದ್ದಾರೆ.
ಸ್ಥಳೀಯ ನೀರಿನ ಕೊರತೆಯ ಕಳವಳವನ್ನು ಉಲ್ಲೇಖಿಸಿ ಕಾವೇರಿ ನೀರು ಬಿಡುಗಡೆಯನ್ನು ನಿರ್ಬಂಧಿಸುವ ಕರ್ನಾಟಕದ ಇತ್ತೀಚಿನ ನಿರ್ಧಾರದಿಂದ ಉಭಯ ರಾಜ್ಯಗಳ ನಡುವಿನ ಉದ್ವಿಗ್ನತೆಗಳು ಹೆಚ್ಚಿವೆ. ಕರ್ನಾಟಕದ ಈ ನಡೆ ತಮಿಳುನಾಡಿನ ಕೃಷಿ ವಲಯದ ಮೇಲೆ ವಿಶೇಷವಾಗಿ ಪರಿಣಾಮ ಬೀರುವುದರೊಂದಿಗೆ, ಸಮಾನ ನೀರಿನ ಹಂಚಿಕೆಯ ಕುರಿತು ಎರಡು ರಾಜ್ಯಗಳ ನಡುವಿನ ದೀರ್ಘಕಾಲದ ಅಸಮಾಧಾನವನ್ನು ಉಲ್ಬಣಗೊಳಿಸಿದೆ.
ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ನಡೆಯುವುದಕ್ಕೂ ಹಿಂದಿನ ದಿನ, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂವಾದಕ್ಕೆ ಮುಕ್ತವಾಗಿರುವುದಾಗಿ ಹೇಳಿದ್ದರು.
ದೇಶ
MLA ವಾಹನ ಬಳಕೆಗೆ ಹೊಸ ನಿಯಮ ಜಾರಿ; ವೇತನ, ಪಿಂಚಣಿಯಿಂದಲೇ ಶುಲ್ಕ ಕಡಿತ!
ಬೆಂಗಳೂರು, ಜು.8: ಶಾಸಕರ ಭವನದಲ್ಲಿರುವ ಸರ್ಕಾರಿ ವಾಹನಗಳ ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ವಿಧಾನಸಭಾ ಸಚಿವಾಲಯ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ನು ಮುಂದೆ ಜನಪ್ರತಿನಿಧಿಗಳ ಆಪ್ತ ಸಹಾಯಕರು, ಬೆಂಬಲಿಗರು ಅಥವಾ ಅತಿಥಿಗಳು ಶಿಫಾರಸು ಪತ್ರದ ಆಧಾರದ ಮೇಲೆ ಸರ್ಕಾರಿ ವಾಹನಗಳನ್ನು ಪಡೆದು ಬೆಂಗಳೂರು ನಗರದ ಹೊರಗೆ ಸಂಚರಿಸಲು ಅವಕಾಶ ಇರುವುದಿಲ್ಲ.
ಹೊಸ ಮಾರ್ಗಸೂಚಿಯ ಪ್ರಕಾರ, ಶಾಸಕರ ಭವನದ ಸರ್ಕಾರಿ ವಾಹನಗಳ ಸಂಚಾರವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ತುರ್ತು ಪರಿಸ್ಥಿತಿ ಅಥವಾ ವಿಮಾನ ನಿಲ್ದಾಣಕ್ಕೆ ತೆರಳುವಂತಹ ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಬೆಂಗಳೂರಿನ ಗಡಿ ದಾಟಬೇಕಾದರೆ ವಿಧಾನಸಭಾಧ್ಯಕ್ಷರ ಲಿಖಿತ ಅನುಮತಿ ಕಡ್ಡಾಯವಾಗಲಿದೆ.
ವಿಧಾನಸಭಾ ಸಚಿವಾಲಯದ ಮಾಹಿತಿ ಪ್ರಕಾರ, ಸೀಮಿತ ಸಂಖ್ಯೆಯ ವಾಹನಗಳು ಮತ್ತು ಚಾಲಕರ ಲಭ್ಯತೆಯಿಂದಾಗಿ ಹಲವು ಬಾರಿ ಹಾಲಿ ಶಾಸಕರಿಗೂ ತುರ್ತು ಸಂದರ್ಭದಲ್ಲಿ ವಾಹನ ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಸಮಸ್ಯೆ ನಿವಾರಣೆ ಹಾಗೂ ಸಾರ್ವಜನಿಕ ಆಸ್ತಿಯ ಸಮರ್ಪಕ ಬಳಕೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನೊಂದು ಪ್ರಮುಖ ಬದಲಾವಣೆಯಾಗಿ, ನಗದುರಹಿತ (Cashless) ವಸೂಲಾತಿ ವ್ಯವಸ್ಥೆ ಜಾರಿಗೆ ತರಲಾಗಿದೆ. ವಾಹನ ಸಂಚರಿಸಿದ ಪ್ರತಿ ಕಿಲೋಮೀಟರ್‌ಗೆ ನಿಗದಿಪಡಿಸಿದ ಶುಲ್ಕವನ್ನು ಹಾಲಿ ಶಾಸಕರ ವೇತನದಿಂದ ಹಾಗೂ ಮಾಜಿ ಶಾಸಕರ ಪಿಂಚಣಿಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ.
ಈ ವ್ಯವಸ್ಥೆಯಿಂದ ಶಾಸಕರ ಹೆಸರಿನಲ್ಲಿ ಯಾರು ಸರ್ಕಾರಿ ವಾಹನ ಬಳಸಿದ್ದಾರೆ ಎಂಬ ಸಂಪೂರ್ಣ ದಾಖಲೆ ಲಭ್ಯವಾಗಲಿದ್ದು, ಪಾರದರ್ಶಕತೆ ಹೆಚ್ಚುವ ಜೊತೆಗೆ ಸಾರ್ವಜನಿಕ ಹಣದ ದುರುಪಯೋಗಕ್ಕೂ ಪರಿಣಾಮಕಾರಿ ತಡೆ ಬೀಳಲಿದೆ ಎಂದು ವಿಧಾನಸಭಾ ಸಚಿವಾಲಯ ತಿಳಿಸಿದೆ. ಹೊಸ ನಿಯಮಗಳು ಸರ್ಕಾರಿ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಆಡಳಿತದಲ್ಲಿ ಉತ್ತರದಾಯಿತ್ವ ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.
ದೇಶ
ಹಾರ್ಮುಜ್ ಜಲಸಂಧಿ ದಾಳಿ ಬೆನ್ನಲ್ಲೇ ಟ್ರಂಪ್ ಘೋಷಣೆ; ‘ಇರಾನ್ ಜೊತೆ ಒಪ್ಪಂದ ಮುಗಿದಿದೆ’
ಟೆಹ್ರಾನ್/ವಾಷಿಂಗ್ಟನ್, ಜು.8: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಯ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಈ ಬೆಳವಣಿಗೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗಿನ ಮಧ್ಯಂತರ ಕದನ ವಿರಾಮ “ಅಂತ್ಯಗೊಂಡಿದೆ” ಎಂದು ಘೋಷಿಸಿದ್ದಾರೆ. ಈ ಹೇಳಿಕೆಯನ್ನು ಅವರು ಟರ್ಕಿಯ ಅಂಕಾರಾದಲ್ಲಿ ನಡೆದ ನ್ಯಾಟೋ ಶೃಂಗಸಭೆಯ ವೇಳೆ ನೀಡಿದ್ದಾರೆ.
ಮೂರು ವಾರಗಳ ಹಿಂದೆ ಇರಾನ್‌ನೊಂದಿಗೆ ಮಾಡಿಕೊಂಡಿದ್ದ ಮಧ್ಯಂತರ ತಿಳುವಳಿಕೆ ಒಪ್ಪಂದ (MoU) ಕುರಿತು ಪ್ರಶ್ನಿಸಿದಾಗ, “ನನ್ನ ಪ್ರಕಾರ ಅದು ಈಗ ಮುಗಿದ ಅಧ್ಯಾಯ. ಇರಾನ್ ಜೊತೆ ವ್ಯವಹರಿಸಲು ನನಗೆ ಇನ್ನು ಆಸಕ್ತಿಯಿಲ್ಲ” ಎಂದು ಟ್ರಂಪ್ ಪ್ರತಿಕ್ರಿಯಿಸಿದರು. ಅಲ್ಲದೆ, ಇರಾನ್ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಅವರೊಂದಿಗೆ ಮುಂದಿನ ಮಾತುಕತೆ ನಡೆಸುವುದು ಸಮಯ ವ್ಯರ್ಥ ಎಂದು ಹೇಳಿದರು.
ಈ ಬೆಳವಣಿಗೆಯ ಮೊದಲು ಹಾರ್ಮುಜ್ ಜಲಸಂಧಿಯಲ್ಲಿ ಮೂರು ವಾಣಿಜ್ಯ ತೈಲ ಹಡಗುಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕ ತನ್ನ CENTCOM ಮೂಲಕ ಇರಾನ್‌ನ 80ಕ್ಕೂ ಹೆಚ್ಚು ಮಿಲಿಟರಿ ಗುರಿಗಳ ಮೇಲೆ ವಾಯುದಾಳಿ ನಡೆಸಿರುವುದಾಗಿ ವರದಿಯಾಗಿದೆ. ದಾಳಿಯಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳು, ಡ್ರೋನ್ ಉಡಾವಣಾ ಕೇಂದ್ರಗಳು, ಕ್ಷಿಪಣಿ ನೆಲೆಗಳು ಹಾಗೂ ಕರಾವಳಿ ಮಿಲಿಟರಿ ಮೂಲಸೌಕರ್ಯಗಳನ್ನು ಗುರಿಯಾಗಿಸಲಾಗಿದೆ.
ಇದರೊಂದಿಗೆ ಅಮೆರಿಕ, ಇರಾನ್‌ಗೆ ತೈಲ ಮಾರಾಟಕ್ಕೆ ನೀಡಿದ್ದ ವಿಶೇಷ ಪರವಾನಗಿಯನ್ನೂ ಹಿಂತೆಗೆದುಕೊಂಡಿದೆ. ಈ ಬೆಳವಣಿಗೆ ಜಾಗತಿಕ ತೈಲ ಮಾರುಕಟ್ಟೆ ಹಾಗೂ ಮಧ್ಯಪ್ರಾಚ್ಯದ ಭದ್ರತಾ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕದನ ವಿರಾಮ ಮುರಿದಿರುವುದರಿಂದ ಮುಂದಿನ ದಿನಗಳಲ್ಲಿ ರಾಜತಾಂತ್ರಿಕ ಮಾತುಕತೆಗಳು ಯಾವ ದಿಕ್ಕು ಪಡೆಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ದೇಶ
‘ಟೀಮ್ ಬೆಂಗಳೂರು ಅಲ್ಲ, ಟೀಮ್ ಕರ್ನಾಟಕ’ : ಜಾಗತಿಕ ಹೂಡಿಕೆದಾರರಿಗೆ ಡಿಕೆ ಶಿವಕುಮಾರ್ ಮಹತ್ವದ ಸಂದೇಶ
ಬೆಂಗಳೂರು, ಜು.8: ಕರ್ನಾಟಕವನ್ನು ಜಾಗತಿಕ ಹೂಡಿಕೆ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಜಾಗತಿಕ ಹೂಡಿಕೆದಾರರ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಇದು ಕೇವಲ ಟೀಮ್ ಬೆಂಗಳೂರು ಅಲ್ಲ, ಟೀಮ್ ಕರ್ನಾಟಕ. ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ” ಎಂದು ಹೇಳಿದರು.
ಸುಮಾರು 200ಕ್ಕೂ ಹೆಚ್ಚು ಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್ (GCC) ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಅಭಿವೃದ್ಧಿ, ಕೈಗಾರಿಕಾ ವಿಸ್ತರಣೆ ಹಾಗೂ ಭವಿಷ್ಯದ ಹೂಡಿಕೆಗಳ ಕುರಿತು ಸರ್ಕಾರಕ್ಕೆ ಹಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ ಎಂದು ಸಿಎಂ ತಿಳಿಸಿದರು. ಜಾಗತಿಕ ಕಂಪನಿಗಳು ಸರ್ಕಾರದ ಆಡಳಿತದ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವುದು ಸಂತಸದ ವಿಷಯ ಎಂದರು.
‘Beyond Bengaluru’ ಯೋಜನೆಯಡಿ ಐಟಿ-ಬಿಟಿ ಹಾಗೂ ಕೈಗಾರಿಕೆಗಳನ್ನು ಬೆಂಗಳೂರಿನ ಹೊರಗಿನ 2-Tier ಮತ್ತು 3-Tier ನಗರಗಳಿಗೆ ವಿಸ್ತರಿಸಲು ಸರ್ಕಾರ ಹೊಸ ಕೈಗಾರಿಕಾ ನೀತಿಯನ್ನು ರೂಪಿಸುತ್ತಿದೆ. ಈ ಪ್ರದೇಶಗಳಲ್ಲಿ ಉದ್ಯಮ ಆರಂಭಿಸುವ ಕಂಪನಿಗಳಿಗೆ ಕಡಿಮೆ ದರದಲ್ಲಿ ಜಾಗ, ಕಟ್ಟಡ ಹಾಗೂ ಅಗತ್ಯ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನೂ ಸಿಎಂ ನೀಡಿದರು.
ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಹೂಡಿಕೆದಾರರನ್ನು ರಾಜ್ಯದ ಎಲ್ಲ ಭಾಗಗಳಿಗೆ ಆಕರ್ಷಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಉದ್ಯೋಗ ಸೃಷ್ಟಿಗೆ ಸಹಕರಿಸುವ ಕೈಗಾರಿಕೆಗಳಿಗೆ ಅಗತ್ಯ ಸಬ್ಸಿಡಿ ಮತ್ತು ಪ್ರೋತ್ಸಾಹಕ ಯೋಜನೆಗಳನ್ನು ಸರ್ಕಾರ ನೀಡಲಿದೆ ಎಂದರು.
ಇದೇ ವೇಳೆ, ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಮುಂಚೂಣಿಗೆ ತರುವ ಉದ್ದೇಶದಿಂದ ಅತ್ಯಾಧುನಿಕ AI University ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ವಿಶ್ವವಿದ್ಯಾಲಯದ ರೂಪುರೇಷೆಗಳ ಕುರಿತು ಜಾಗತಿಕ ತಂತ್ರಜ್ಞಾನ ತಜ್ಞರು ಹಾಗೂ GCC ಮುಖ್ಯಸ್ಥರಿಂದ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
-
ದೇಶ9 hours agoರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
-
ಅಪರಾಧ8 hours agoಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೆ ರೌಡಿಗಳ ದಾಳಿ: ಫ್ಲೈ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
-
ದೇಶ14 hours agoಬ್ಯಾಂಕ್ ಅಕೌಂಟ್ ಕ್ಲೋಸ್ ಮಾಡಿದರೆ ಕ್ರೆಡಿಟ್ ಕಾರ್ಡ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಪರಾಧ6 hours agoವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ
-
ದೇಶ9 hours ago‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ
-
ಅಪರಾಧ7 hours agoಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?
-
ದೇಶ10 hours agoಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಬಾಡಿಗೆ ಒಪ್ಪಂದ ಇಲ್ಲದಿದ್ದರೂ ಉಚಿತ ವಿದ್ಯುತ್ ಪಡೆಯಬಹುದು!
-
ಕ್ರೀಡೆ7 hours agoಎಚ್ಚರ! Sports Association of India ಹೆಸರಿನಲ್ಲಿ ಭಾರೀ ವಂಚನೆ; PIB ನೀಡಿದ ತುರ್ತು ಎಚ್ಚರಿಕೆ
