ದೇಶ
ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಗೆ 7 ಲಕ್ಷ ಬಹುಮತ ಕೊಡಿಸಿ’: ಸ್ಥಳೀಯ ನಾಯಕರಿಗೆ ಎಐಸಿಸಿ ಟಾರ್ಗೆಟ್ – Lok Sabha By election
ಕಣ್ಣೂರು(ಕೇರಳ): ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರಿಗೆ ಏಳು ಲಕ್ಷ ಬಹುಮತ ಕೊಡಿಸುವ ಗುರಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನಿಗದಿಪಡಿಸಿದೆ. ಹೀಗಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ವಯನಾಡ್‌ನಲ್ಲಿ ಹೈಕಮಾಂಡ್ ಸೂಚನೆಯನ್ನು ಅನುಷ್ಠಾನಕ್ಕೆ ತರಲು ತಮ್ಮ ತಂಡಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
ಮೊದಲ ಹಂತದಲ್ಲಿ, ವಿಧಾನಸಭಾ ಕ್ಷೇತ್ರ ಸಮಿತಿ ಸಭೆಗಳು ನಡೆಯಲಿವೆ. ಪದಾಧಿಕಾರಿಗಳ ಸಲಹೆ ಮತ್ತು ಅಭಿಪ್ರಾಯಗಳ ಮೇರೆಗೆ ಜಿಲ್ಲಾ, ಮಂಡಲ ಮತ್ತು ಕ್ಷೇತ್ರ ಸಮಿತಿಗಳು ಚುನಾವಣೆಗೆ ಕೆಲಸ ಮಾಡುತ್ತಿವೆ. ಕಳೆದ ಚುನಾವಣೆಯಲ್ಲಿ ಪ್ರಚಾರವನ್ನು ತಡವಾಗಿ ಪ್ರಾರಂಭಿಸಿದ್ದಾಗಿ ಸ್ಥಳೀಯ ನಾಯಕರು ತಪ್ಪು ಒಪ್ಪಿಕೊಂಡಿದ್ದಾರೆ. ಇದರಿಂದ ರಾಹುಲ್ ಗಾಂಧಿಗೆ ಅಪೇಕ್ಷಿತ ಬಹುಮತ ಗಳಿಸಲು ಸಾಧ್ಯವಾಗಿರಲಿಲ್ಲ. ಪ್ರಿಯಾಂಕಾ ಗಾಂಧಿ ಆರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದ ಬಹುಮತ ಪಡೆಯುತ್ತಾರೆ ಎಂಬ ಭರವಸೆಯನ್ನು ಕ್ಷೇತ್ರದ ನಾಯಕರು ಹೈಕಮಾಂಡ್ಗೆ ನೀಡಿದ್ದಾರೆ. ಆದಾಗ್ಯೂ, ಏಳು ಲಕ್ಷ ಬಹುಮತದ ಗುರಿಯ ಸಾಧಿಸುವ ಬಗ್ಗೆ ಎಐಸಿಸಿ ದೃಢ ನಿಲುವು ತಾಳಿದೆ.
ಪ್ರಿಯಾಂಕಾ ಗಾಂಧಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆಯೊಂದಿಗೆ ಕಾಂಗ್ರೆಸ್‌ನ ಕೆಳಹಂತದಿಂದ ಜಿಲ್ಲಾ ಮಟ್ಟದ ವರೆಗಿನ ಎಲ್ಲಾ ಘಟಕಗಳು ಸಕ್ರಿಯವಾಗಿವೆ. ರೈತ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ನಿತ್ಯ ಸಭೆ ನಡೆಸುತ್ತಿವೆ. ಐದ ಮಂದಿ ಜಿಲ್ಲಾ ಕಾರ್ಯದರ್ಶಿಗಳಿಗೆ ಘಟಕಗಳ ಸಲಹೆಗಳನ್ನು ಆಲಿಸಿಸುವ ಜವಾಬ್ದಾರಿ ವಹಿಸಲಾಗಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈಗಾಗಲೇ ನಿಗದಿಪಡಿಸಲಾದ ಬಹುಮತ ಕೊಡಿಸಲು ಪ್ರಯತ್ನಗಳನ್ನು ಪ್ರಾರಂಭಿಸಿವೆ. ಭಾರಿ ಮಳೆ ಹೊರತಾಗಿಯೂ, ಪ್ರಿಯಾಂಕಾ ಅವರನ್ನು ಸ್ವಾಗತಿಸುವ ಬ್ಯಾನರ್ಗಳನ್ನು ಎಲ್ಲಾ ಪ್ರಮುಖ ಕೇಂದ್ರಗಳಲ್ಲಿ ಹಾಕಲಾಗಿದೆ.
2019ರ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಒಟ್ಟು 7,06,367 ಮತ ಗಳಿಸಿ, 4,31,770 ಬಹುಮತದಿಂದ ಜಯಗಳಿಸಿದ್ದರು. ಆದರೆ, ಇತ್ತೀಚಿಗೆ ನಡೆದ ಚುನಾವಣೆಗಳಲ್ಲಿ, ಅವರ ಬಹುಮತ ಸ್ವಲ್ಪ ಕಡಿಮೆಯಾಗಿತ್ತು. ರಾಹುಲ್ ಒಟ್ಟು 6,47,445 ಮತಗ ಗಳಿಸಿ, 3,64,422 ಬಹುಮತ ಪಡೆದಿದ್ದರು.
ಬರುವ ಉಪಚುನಾವಣೆಯಲ್ಲಿ, ಲೋಕಸಭಾ ಕ್ಷೇತ್ರದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನಾಯಕರು ಪ್ರಿಯಾಂಕಾ ಗಾಂಧಿ ಅವರ ಬಹುಮತವು ಆರು ಲಕ್ಷ ಮತಗಳನ್ನು ಮೀರಬೇಕು ಎಂದು ಹೇಳಿದೆ. ಕಳೆದ ಬಾರಿ ರಾಹುಲ್ ಗಾಂಧಿ ಪರ ಪ್ರಚಾರ ತಡವಾಗಿ ಆರಂಭವಾಗಿತ್ತು. ಈ ಬಾರಿ, ಕಾಂಗ್ರೆಸ್ ಮತ್ತು ಯುಡಿಎಫ್ ಪ್ರಚಾರವನ್ನು ಬೇಗನೆ ಆರಂಭಿಸಲು ನಿರ್ಧರಿಸಿವೆ.
ದೇಶ
ಜೈರಾಮ್ ರಮೇಶ್‌ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”
ಹೊಸದಿಲ್ಲಿ: ಪರಿಸರ ಪರವಾನಿಗೆಗೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. “ಇದೆಲ್ಲವನ್ನೂ ನೀವು ಕೇವಲ ಮಾಧ್ಯಮ ಪ್ರಚಾರಕ್ಕಾಗಿ ಮಾಡುತ್ತಿದ್ದೀರಾ?” ಎಂದು ತ್ರಿಸದಸ್ಯ ಪೀಠ ಕಿಡಿಕಾರಿತು.
ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ನ್ಯಾ. ಸೂರ್ಯಕಾಂತ್, ನ್ಯಾ. ಜಾಯ್‌ಮಾಲ್ಯ ಬಾಗ್ಚಿ ಹಾಗೂ ನ್ಯಾ. ಉಜ್ಜಲ್ ಭುಯಾನ್ ಇದ್ದರು. ಪರಿಸರ ಪರವಾನಿಗೆಯನ್ನು ಪೂರ್ವ ಅನ್ವಯವಾಗುವಂತೆ (Retrospective Environmental Clearance) ನೀಡುವ ಕ್ರಮವನ್ನು ಪ್ರಶ್ನಿಸಿ ಜೈರಾಮ್ ರಮೇಶ್ ರಿಟ್ ಅರ್ಜಿ ಸಲ್ಲಿಸಿದ್ದರು.
ರಿಟ್ ಅರ್ಜಿ ಸ್ವೀಕರಿಸಲು ನಿರಾಕರಣೆ
ವಿಚಾರಣೆ ವೇಳೆ ಪೀಠ, ಈ ಅರ್ಜಿ ಕೇಂದ್ರ ಸರ್ಕಾರದ ಕುಂದುಕೊರತೆಯನ್ನು ಹೈಲೆಟ್ ಮಾಡುವ ಬದಲು ಸಾರ್ವಜನಿಕ ಗಮನ ಸೆಳೆಯಲು ಸಲ್ಲಿಸಿದಂತಿದೆ ಎಂದು ಅಭಿಪ್ರಾಯಪಟ್ಟಿತು. ನವೆಂಬರ್ 2025ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ (ಫೆ.12) ಸ್ವೀಕರಿಸಲು ನಿರಾಕರಿಸಿತು.
“ದಂಡ ಎದುರಿಸಲು ಸಿದ್ದರಾಗಿ” ಎಚ್ಚರಿಕೆ
“ತೀರ್ಪಿನ ವಿರುದ್ಧ ರಿಟ್ ಅರ್ಜಿ ಯಾಕೆ? ಮರುಪರಿಶೀಲನಾ ಅರ್ಜಿ (Review Petition) ಸಲ್ಲಿಸಬಹುದು ಅಲ್ಲವೇ? ರಿಟ್ ಮೂಲಕ ಮರುಪರಿಶೀಲನೆ ಸಾಧ್ಯವಿಲ್ಲ ಎಂಬುದು ತಿಳಿದಿಲ್ಲವೇ? ದಂಡ ಎದುರಿಸಲು ಸಿದ್ದರಾಗಿ” ಎಂದು ನ್ಯಾ. ಸೂರ್ಯಕಾಂತ್ ಎಚ್ಚರಿಸಿದರು.
ನ್ಯಾಯಾಲಯದ ಎಚ್ಚರಿಕೆಯ ಬಳಿಕ ಜೈರಾಮ್ ರಮೇಶ್ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ವಿನಂತಿಸಿಕೊಂಡರು. ನ್ಯಾಯಪೀಠ ಅದಕ್ಕೆ ಅನುಮತಿ ನೀಡಿ, ಕಾನೂನಿನ ಪ್ರಕಾರ ಲಭ್ಯವಿರುವ ಪರಿಹಾರವನ್ನು ಪಡೆಯುವಂತೆ ಸೂಚಿಸಿತು.
ಪ್ರಕರಣದ ಹಿನ್ನೆಲೆ
ಜೈರಾಮ್ ರಮೇಶ್ ಯಾವುದೇ ಯೋಜನೆ ಆರಂಭವಾದ ನಂತರ ಪರಿಸರ ಪರವಾನಿಗೆ ನೀಡುವ ಕ್ರಮವನ್ನು ಪ್ರಶ್ನಿಸಿದ್ದರು. ಈ ರೀತಿಯ ಅನುಮತಿ ಕಾನೂನುಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಅವರು ವಾದಿಸಿದ್ದರು.
ಕೇಂದ್ರ ಸರ್ಕಾರದ ನಿಯಮ ಏನು?
- 2006ರಲ್ಲಿ ಯೋಜನೆ ಆರಂಭಿಸುವ ಮೊದಲು ಪರಿಸರ ಪರವಾನಿಗೆ ಕಡ್ಡಾಯಗೊಳಿಸಲಾಗಿತ್ತು.
- 2017 ಮತ್ತು 2021ರ ಅಧಿಸೂಚನೆಗಳ ಮೂಲಕ ಕೆಲವು ಯೋಜನೆಗಳಿಗೆ ಷರತ್ತುಬದ್ದ ಪೂರ್ವಾನ್ವಯ ಅನುಮತಿ ಅವಕಾಶ ನೀಡಲಾಗಿತ್ತು.
- ಮೇ 2025ರಲ್ಲಿ ಈ ಕ್ರಮವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
- ಆದರೆ ನವೆಂಬರ್ 2025ರಲ್ಲಿ CREDAI ಅರ್ಜಿಯ ವಿಚಾರಣೆ ವೇಳೆ ಹಿಂದಿನ ತೀರ್ಪಿನಲ್ಲಿ ಸಡಿಲಿಕೆ ನೀಡಲಾಗಿತ್ತು.
ಈ ಮರುಪರಿಶೀಲಿತ ತೀರ್ಪನ್ನೇ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.
ದೇಶ
HAL ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್‌ಎಎಲ್ ಠಾಣೆಯ ಇನ್ಸ್‌ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್‌ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್‌ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್‌ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಕಾಲಿಗೆ ಬೀಳುವಂತೆ ಸೂಚನೆ?
ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್‌ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ
ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.
ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.
ದೇಶ
Mumbai Musical Road: ‘ಜೈ ಹೋ’ ರಾಗ ಕೇಳಿಸುವ ಭಾರತದ ಮೊದಲ ಮ್ಯೂಸಿಕಲ್ ರಸ್ತೆ
ಮುಂಬೈ: ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ‘ಮ್ಯೂಸಿಕಲ್ ರೋಡ್’ ಅನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಈ ವಿಶೇಷ ರಸ್ತೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ವತಿಯಿಂದ ನಿರ್ಮಿಸಲಾದ ಈ ರಸ್ತೆ, ನಾರಿಮನ್ ಪಾಯಿಂಟ್‌ನಿಂದ ವರ್ಲಿ ಕಡೆಗೆ ಸಾಗುವ ಲೇನ್‌ನಲ್ಲಿ, ವರ್ಲಿ ಸುರಂಗದಿಂದ ಹೊರಬಂದ ಬಳಿಕ ಸುಮಾರು 500 ಮೀಟರ್ ದೂರದಲ್ಲಿ ಸ್ಥಾಪಿಸಲಾಗಿದೆ. ಈ ರಸ್ತೆಗೆ ‘ಛತ್ರಪತಿ ಸಂಭಾಜಿ ಮಹಾರಾಜ್’ ಹೆಸರು ಇಡಲಾಗಿದೆ.
70–80 ಕಿಮೀ ವೇಗದಲ್ಲಿ ‘ಜೈ ಹೋ’ ರಾಗ
ವಾಹನಗಳು ಗಂಟೆಗೆ 70 ರಿಂದ 80 ಕಿಲೋಮೀಟರ್ ವೇಗದಲ್ಲಿ ಸಂಚರಿಸಿದಾಗ, ಟೈರ್ ಮತ್ತು ರಸ್ತೆಯ ನಡುವಿನ ಘರ್ಷಣೆಯಿಂದ ಶಬ್ದ ತರಂಗಗಳು ಉಂಟಾಗಿ ‘ಸ್ಲಮ್‌ಡಾಗ್ ಮಿಲಿಯನೇರ್’ ಚಿತ್ರದ ಆಸ್ಕರ್ ಪ್ರಶಸ್ತಿ ವಿಜೇತ ‘ಜೈ ಹೋ’ ಹಾಡಿನ ರಾಗ ಕೇಳಿಸಿಕೊಳ್ಳುತ್ತದೆ ಎಂದು ಬಿಎಂಸಿ ತಿಳಿಸಿದೆ.
ಚಾಲಕರಿಗೆ ಸೂಚನೆ ನೀಡಲು 500 ಮೀಟರ್, 100 ಮೀಟರ್ ಹಾಗೂ 60 ಮೀಟರ್ ದೂರದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ವಿಶ್ವದ ಐದನೇ ಮ್ಯೂಸಿಕಲ್ ರೋಡ್
ಈ ಕಲ್ಪನೆಯನ್ನು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. 2007ರಲ್ಲಿ ಜಪಾನ್‌ನಲ್ಲಿ ಮೊದಲ ಬಾರಿಗೆ ಮ್ಯೂಸಿಕಲ್ ರಸ್ತೆ ಪರಿಚಯಿಸಲಾಯಿತು. ಬಳಿಕ ಹಂಗೇರಿ, ದಕ್ಷಿಣ ಕೊರಿಯಾ ಮತ್ತು ಯುಎಇ ದೇಶಗಳಲ್ಲಿ ಇಂತಹ ರಸ್ತೆಗಳನ್ನು ನಿರ್ಮಿಸಲಾಗಿದೆ. ಮುಂಬೈನಲ್ಲಿ ನಿರ್ಮಿತ ಈ ರಸ್ತೆ ವಿಶ್ವದ ಐದನೇ ಮತ್ತು ಭಾರತದ ಮೊದಲ ಮ್ಯೂಸಿಕಲ್ ರೋಡ್ ಎಂದು ಬಿಎಂಸಿ ಹೇಳಿದೆ.
ಈ ಹೊಸ ಪ್ರಯೋಗ ಪ್ರವಾಸಿಗರು ಮತ್ತು ವಾಹನ ಚಾಲಕರಿಗೆ ವಿಶಿಷ್ಟ ಅನುಭವ ನೀಡಲಿದ್ದು, ಮುಂಬೈ ನಗರದ ಮತ್ತೊಂದು ಆಕರ್ಷಣೆಯಾಗಿ ಹೊರಹೊಮ್ಮಲಿದೆ.
-
ಬೆಂಗಳೂರು6 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ23 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ24 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ22 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ಅಪರಾಧ23 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ24 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ದೇಶ3 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
