ದೇಶ
ಲಡ್ಡು ತಾಜಾತನದ ಬಗ್ಗೆ ಅನುಮಾನ-ವದಂತಿಗಳಿಗೆ ತೆರೆ ಎಳೆದ ತಿರುಪತಿ ದೇವಾಲಯ!
ತಿರುಪತಿ ಲಡ್ಡುವಿನ ತಾಜಾತನದ ಬಗ್ಗೆ ಯಾವುದೇ ಊಹಾಪೂಹಗಳನ್ನು ನಂಬಬೇಡಿ ಎಂದು ತಿರುಪತಿ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ,
ಲಡ್ಡುಗಳನ್ನು ನಿತ್ಯವೂ ಹೊಸದಾಗಿಯೇ ಸಿದ್ಧಗೊಳಿಸಲಾಗುತ್ತಿದ್ದು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ದೇವಾಲಯ ಮನವಿ ಮಾಡಿದೆ,
ಭಕ್ತರಿಗೆ ಹಂಚುವ ಲಡ್ಡುಗಳು ತಾಜಾ ಅಲ್ಲ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು, ಈ ಕುರಿತು ಇದೀಗ ಸ್ವಷ್ಟನೆ ನೀಡಲಾಗಿದ್ದು ಸುಳ್ಳು ಸುದ್ದಿಗಳನ್ನು ಮಾಡಿದ್ದ ಯೂಟ್ಯೂಬ್ ಚಾನೆಲಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತ ಮಂಡಳಿ ಎಚ್ಚರಿಸಿದೆ,
ತಿರುಪತಿ ಲಡ್ಡುವಿನ ಬಗ್ಗೆ ಅನುಮಾನ ಬೇಡ ನಿತ್ಯವೂ ಹೊಸದಾಗಿ ಲಡ್ಡುಗಳನ್ನು ತಯಾರಿಸಲಾಗುತ್ತಿದೆ, ವದಂತಿಗಳಿಗೆ ಕಿವಿಕೊಡಬೇಡಿ ಎಂದು ಆಡಳಿತ ಭಕ್ತರಲಿ ಮನವಿ ಮಾಡಿಕೊಂಡಿದೆ,
ಲಡ್ಡು ತಯಾರಿಕೆಯಲ್ಲಿ ಸುಮಾರು 980 ಜನರು ಕೆಲಸ ಮಾಡುತ್ತಿದ್ದಾರೆ, ಬಹಳಷ್ಟು ವರ್ಷಗಳಿಂದ ಇದೇ ಪರಂಪರೆ ಮುಂದುವರೆದಿದೆ,
ತಿರುಮಲ ತಿರುಪತಿ ದೇವಸ್ಧಾನಗಳು ಒಂದು ಲಕ್ಷ ತಿರುಪತಿ ಲಡ್ಡುಗಳನ್ನು ಅಯೋಧ್ಯೆಗೆ ಕಳುಹಿಸಿತ್ತು, ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಶಂಕುಸ್ಧಾಪನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಭಕ್ತರು ತಿರುಪತಿ ಲಡ್ಡು ಪ್ರಸಾದವನ್ನು ಪಡೆದಿದ್ದರು,
ದೇಶ
LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.
“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.
ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.
ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ದೇಶ
“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು
ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.
ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.
ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.
-
ಬೆಂಗಳೂರು3 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ21 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
