Connect with us

ಬೆಂಗಳೂರು

ಬಜೆಟ್ ಮೂಲಕ ರಾಜ್ಯಕ್ಕೆ ಕೇಂದ್ರ ಚೊಂಬು ಕೊಟ್ಟಿದೆ-ಸಿಎಂ ಟೀಕೆ

Published

on

ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದು ಬಜೆಟ್ ಮೂಲಕ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು,
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಜೆಟ್ ನಲ್ಲಿ ರಾಜ್ಯಕ್ಕೆ ಏನೇನು ಕೊಟ್ಟಿಲ್ಲ, ರಾಜ್ಯದಿಂದ ಐವರು ಸಚಿವರು ಕೇಂದ್ರದಲ್ಲಿ ಇದ್ದರೂ ಪ್ರಯೋಜನವಿಲ್ಲ, ಪಾಪ ರಾಜ್ಯದಿಂದ ಐದು ಜನ ಮಂತ್ರಿಗಳಿದ್ದರೂ ಏನು ಅನುದಾನ ತರಲು ಅಗಲಿಲ್ಲ ಎಂದು ಪ್ರಶ್ನಿಸಿದ ಸಿಎಂ, ಕೈಗಾರಿಕೆ, ರೈಲ್ವೆಗೂ ಬಜೆಟ್ ನಲ್ಲಿ ಏನು ಕೊಟ್ಟಿಲ್ಲ ಎಂದು ಕುಟುಕಿದರು,
ಇನ್ನು ವಿತ್ತ ಸಚಿಎ ನಿರ್ಮಲಾ ಸೀತಾರಾಮನ್ ಅವರು ಈ ರಾಜ್ಯದ ರಾಜ್ಯ ಸಭೆಗೆ ಆಯ್ಕೆಯಾಗಿದ್ದರೂ ಏನು ಕೊಡಲಿಲ್ಲ, ಬಜೆಟ್ ಮೂಲಕ ರೈತರಿಗೆ ಕೇಂದ್ರವು ಒಟ್ಟಾರೆ ಪಂಗನಾಮ ಹಾಕಿದೆ ಎಂದರು, ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಬಜೆಟ್ ನಲ್ಲಿ ಒತ್ತು ನೀಡಿದ್ದಾರೆ, ಮೋದಿ ಅವರು ಪ್ರಧಾನಿಯಾಗಿ ಉಳಿಯಲು ಆಂಧ್ರ, ಬಿಹಾರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ, ಇತರೆ ರಾಜ್ಯಗಳಿಗೆ ಕಡಿಮೆ ಅನುದಾನ ಘೋಷಣೆ ಮಾಡುವ ಮೂಲಕ ಕೇಂದ್ರ ಮೋಸ ಮಾಡಿದೆ ಎಂದು ಟೀಕಿಸಿದ್ದಾರೆ.

ದೇಶ

ಸಿಎಂ ನಿವಾಸದಲ್ಲಿ ಹೈಡ್ರಾಮಾ: ಡಿಕೆ ಶಿವಕುಮಾರ್ ಎಂಟ್ರಿಯಿಂದ ರಾಜಕೀಯ ಕಾವು

Published

on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಭಾರಿ ಚರ್ಚೆಗಳ ನಡುವೆ ಸಿಎಂ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ ಉಪಹಾರ ಸಭೆ ಆರಂಭವಾಗಿದೆ. ಈ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ವಿಶೇಷವೆಂದರೆ, ಡಿಕೆ ಶಿವಕುಮಾರ್ ಅವರು ಏಕಾಂಗಿಯಾಗಿ ಬಾರದೆ ತಮ್ಮ ಆಪ್ತ ಸಚಿವರೊಂದಿಗೆ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ್ ವೈದ್ಯ ಅವರು ಡಿಕೆಶಿ ಜೊತೆಯಲ್ಲೇ ಒಂದೇ ವಾಹನದಲ್ಲಿ ಬಂದಿರುವುದು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಸಂಭವಿಸಬಹುದು ಎಂಬ ಚರ್ಚೆಗಳು ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿವೆ. ಈ ಹಿನ್ನೆಲೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಈ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮವಾಗಿ ಪೂರ್ಣಗೊಳಿಸುವ ಉದ್ದೇಶದಿಂದಲೇ ಈ ಸಭೆ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.

ಸದ್ಯ ಸಿಎಂ ನಿವಾಸದಲ್ಲಿ ಹೈ-ಲೆವೆಲ್ ಮಾತುಕತೆ ನಡೆಯುತ್ತಿದ್ದು, ಸಚಿವ ಸಂಪುಟ ಪುನಾರಚನೆ, ಹೊಸ ಸಚಿವರಿಗೆ ಅವಕಾಶ ಹಾಗೂ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ದಿನಾಂಕ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಹಾಗೂ ವಿರೋಧ ಪಕ್ಷಗಳು ಕಣ್ಣಿಟ್ಟಿವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರುವ ಸಾಧ್ಯತೆ ಹೆಚ್ಚಾಗಿದೆ ಎಂಬ ಸುದ್ದಿಗಳ ನಡುವೆ ಕಾಂಗ್ರೆಸ್ ನಾಯಕತ್ವದ ಮುಂದಿನ ನಡೆ ರಾಜ್ಯ ರಾಜಕೀಯದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆ ಇದೆ.

Continue Reading

ದೇಶ

ರಾಹುಲ್ ಗಾಂಧಿ ನಿರ್ಧಾರದಿಂದ ರಾಜ್ಯ ಕಾಂಗ್ರೆಸ್‌ಗೆ ಹೊಸ ಚೈತನ್ಯ: ಪಿ ಗಾಂಧಿ

Published

on

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಂಟ್ರೋಲ್ ರೂಮ್ ಚೇರ್ಮನ್ ಪಿ ಗಾಂಧಿ ಅವರು ಮಾಜಿ ಪ್ರಧಾನಮಂತ್ರಿ ಜವಹರಲಾಲ್ ನೆಹರೂ ಅವರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರೀತಿಯಿಂದ ‘ಚಾಚಾ ನೆಹರೂ’ ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದು, ಸ್ವತಂತ್ರ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು. 1947ರ ಆಗಸ್ಟ್ 15ರಿಂದ 1964ರ ಮೇ 27ರವರೆಗೆ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಯ ದಾರಿಯಲ್ಲಿ ದೇಶವನ್ನು ಮುನ್ನಡೆಸಿದರು ಎಂದು ಹೇಳಿದರು.

ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಪಿ ಗಾಂಧಿ, ತಾವು ಕೂಡ ಎಂಎಲ್‌ಸಿ ಆಕಾಂಕ್ಷಿಯಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರ ಅನುಮತಿ ಪಡೆದು ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಪರ್ವ ಆರಂಭವಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರವನ್ನು ನೋಡಲು ರಾಜ್ಯದ ಜನ ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ತರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಗೊಂದಲ ಇಲ್ಲ, ಪಕ್ಷದ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಯಶವಂತಪುರ ಕ್ಷೇತ್ರದ ನಿವಾಸಿಯಾಗಿರುವ ನಾನು ಕಾಂಗ್ರೆಸ್ ಪಕ್ಷವನ್ನು ಕುಟುಂಬದಂತೆ ಭಾವಿಸಿದ್ದೇನೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದು, ಇದೀಗ ಎಂಎಲ್‌ಸಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಪಿ ಗಾಂಧಿ ಹೇಳಿದರು.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್

Published

on

ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.

ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.

ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.

ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.

Continue Reading

Trending