ಬೆಂಗಳೂರು
ಹಿರಿಯರು ಅಂತಾ ಬಹಳ ತಾಳ್ಮೆಯಿಂದ ಇದ್ದೇನೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತೆ : ಯತ್ನಾಳ್ಗೆ ವಿಜಯೇಂದ್ರ ವಾರ್ನಿಂಗ್
ಬೆಂಗಳೂರು : ಹಿರಿಯರಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ನನ್ನ ತಂದೆ ನನಗೆ ಅದನ್ನು ಹೇಳಿಕೊಟ್ಟಿದ್ದಾರೆ. ಎಲ್ಲವನ್ನೂ ಸಂಯಮದಿಂದ ಕೇಳಿಸಿಕೊಳ್ಳುತ್ತಿದ್ದೇನೆ, ನೋಡುತ್ತಿದ್ದೇನೆ. ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರು ಎಂದು ನಾನು ತಾಳ್ಮೆಯಿಂದ ಇದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಮ್ಮ ನಡುವೆ ಏನು ಸರಿಯಿಲ್ಲ ಎಂಬುದನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವಯಸ್ಸಿನಲ್ಲಿ ಹಿರಿಯರಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ನನ್ನ ತಂದೆ ಬಿಎಸ್ ಯಡಿಯೂರಪ್ಪನವರು ನನಗೆ ಅದನ್ನು ಕಲಿಸಿಕೊಟ್ಟಿದ್ದಾರೆ. ನಾನು ಕೂಡ ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿದ್ದೇನೆ. ನಾನು ಕೂಡ ಬಹಳ ತಾಳ್ಮೆಯಿಂದ ಇದ್ದೇನೆ. ಪಕ್ಷದ ವರಿಷ್ಠರು ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.
ಯತ್ನಾಳ್ ವಿಷಯದಲ್ಲಿ ವೀಕ್ ಆದ್ರಾ?
ಯತ್ನಾಳ್ ವಿಷಯದಲ್ಲಿ ವಿಜಯೇಂದ್ರ ವೀಕ್ ಆದ್ರಾ ಎಂಬ ಪ್ರಶ್ನೆಗೆ, ನಮ್ಮ ತಂದೆ ಬಿಎಸ್ ಯಡಿಯೂರಪ್ಪನವರು ಯಾವಾಗಲೂ ಒಂದು ಮಾತನ್ನು ಹೇಳುತ್ತಿರುತ್ತಾರೆ. ತಿಳಿದವರ ಮುಂದೆ ತಲೆ ಬಗ್ಗಿಸಿ ನಡೆಯಬೇಕು. ತುಳಿಯುವವರ ಮುಂದೆ ತಲೆ ಎತ್ಕೊಂಡು ನಡೆಯಬೇಕು. ರಾಜಕಾರಣದಲ್ಲಿ ಎಲ್ಲವೂ ಸಹಜವೇ. ನನಗೆ ಬಹಳಷ್ಟು ತಾಳ್ಮೆ ಇದೆ. ವರಿಷ್ಠರು ಪಕ್ಷದ ರಾಜ್ಯಾಧ್ಯಕ್ಷ ಜವಾಬ್ದಾರಿ ನೀಡಿದ್ದಾರೆ. ಅದೊಂದು ದೀರ್ಘ ಪ್ರಯಾಣ. ಆದ್ದರಿಂದ ಎಲ್ಲವನ್ನೂ ನಾನು ತಾಳ್ಮೆಯಿಂದ ಕೇಳಿಸಿಕೊಳ್ಳುತ್ತಿದ್ದೇನೆ. ನೋಡುತ್ತಿದ್ದೇನೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಟಾಂಗ್ ನೀಡಿದರು.
ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ, ಯಾರು ಏನು ಹೇಳ್ತಾರೆ ಎನ್ನುವುದು ಮುಖ್ಯ ಅಲ್ಲ. ನಾನು ಬಿಜೆಪಿ ರಾಜ್ಯಾಧ್ಯಕ್ಷ ಆದ್ಮೇಲೆ ಕಾರ್ಯಕರ್ತರು, ಮುಖಂಡರನ್ನು ಜೊತೆಗೆ ತೆಗೆದುಕೊಂಡು ಪರಿಶ್ರಮದಿಂದ ಪಕ್ಷವನ್ನು ಸಂಘಟಿಸುತ್ತಿದ್ದೇನೆ ಎಂದು ಹೇಳಿದ ಬಿವೈ ವಿಜಯೇಂದ್ರ, ರಾಜಕೀಯ ಪಕ್ಷದಲ್ಲಿ ಸಮಸ್ಯೆಗಳು ಇದ್ದೆ ಇರುತ್ತವೆ. ಆಲ್ ಇಸ್ ವೆಲ್ ಎಂದು ನಾನು ಹೇಳುವುದಕ್ಕೆ ಹೋಗಲ್ಲ. ನಾನು ಹೇಳಿದ್ರು ಕೂಡ ನೀವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದ ಅವರು ಪಕ್ಷದಲ್ಲಿ ಆಂತರಿಕ ಸಮಸ್ಯೆಗಳಿವೆ ಎಂಬ ನಿಜವನ್ನು ಒಪ್ಪಿಕೊಂಡರು.
ಪಕ್ಷಕ್ಕೆ ಯಾವತ್ತೂ ದ್ರೋಹ ಮಾಡಲ್ಲ!”
ಇನ್ನು, ಡಿಕೆ ಶಿವಕುಮಾರ್ ಜೊತೆ ವಿಜಯೇಂದ್ರ ಚೆನ್ನಾಗಿದ್ದಾರೆ, ಸಿದ್ದರಾಮಯ್ಯ ಜೊತೆ ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ ಎಂಬ ಹೇಳಿಕೆಗೆ ಉತ್ತರಿಸಿದ ವಿಜಯೇಂದ್ರ, ನಾನು ರಾಜ್ಯಾಧ್ಯಕ್ಷ ಆದ್ಮೇಲೆ ನಮ್ಮ ಕಾರ್ಯಕರ್ತರಿಗೆ ಅವಮಾನ ಆಗುವ ಕೆಲಸವನ್ನು ಯಾವತ್ತು ಮಾಡಿಲ್ಲ. ಯಡಿಯೂರಪ್ಪ ಅವರು ಕೂಡ ತಮ್ಮ ರಾಜಕೀಯ ಜೀವನದಲ್ಲಿ ಅಂತಹ ಕೆಲಸವನ್ನು ಮಾಡಿಲ್ಲ. ಯಾರೋ ಪುಣ್ಯಾತ್ಮರು ಏನೇನೋ ಹೇಳ್ತಾರೆ, ಅದಲ್ಲ ಪ್ರಶ್ನೆ. ಬಿಎಸ್ ಯಡಿಯೂರಪ್ಪನವರು ಪಕ್ಷಕ್ಕೋಸ್ಕರ 40 – 50 ವರ್ಷ ಬೆವರು ಸುರಿಸಿದ್ದಾರೆ. ತನು ಮನ ಧನ ಎಲ್ಲವನ್ನು ಕೂಡ ಅರ್ಪಿಸಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಇಷ್ಟು ಎತ್ತರಕ್ಕೆ ತಂದು ನಿಲ್ಲಿಸಿದ್ದಾರೆ. ಅದಲ್ಲದೇ ಇದರಲ್ಲಿ ಅನೇಕ ಹಿರಿಯರ ಶ್ರಮ ಕೂಡ ಇದೆ. ಕಾರ್ಯಕರ್ತರ ಪರಿಶ್ರಮ, ಬೆವರು ಇದೆ. ಅಂತಹ ಪಕ್ಷಕ್ಕೆ ದ್ರೋಹ ಮಾಡುವಂತಹ ಕೆಲಸವನ್ನು ನಾನು ಮಾಡುವುದಿಲ್ಲ ಎಂದು ಹೇಳಿದರು.
ದೇಶ
ವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
ಬೆಂಗಳೂರು: ನಗರದ ಕೆಂಗೇರಿಯಲ್ಲಿ ಕ್ಷತ್ರಿಯ (ತಿಗಳ ಕ್ಷತ್ರಿಯ) ಸಮುದಾಯದವರಿಂದ ಆಚರಿಸಲ್ಪಡುವ ದ್ರೌಪದಿ ಅಮ್ಮನವರ ಭವ್ಯ ಕರಗ ಶಕ್ತಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ನಡೆಯುತ್ತಿರುವ ಈ ಸಂಪ್ರದಾಯಿಕ ಹಬ್ಬದಲ್ಲಿ ಭಕ್ತಿ, ಶಕ್ತಿ ಮತ್ತು ಸಂಸ್ಕೃತಿಯ ಸಮ್ಮಿಳನ ಕಂಡುಬರುತ್ತದೆ.
ಈ ಮಹೋತ್ಸವದ ಅಂಗವಾಗಿ ಹಸಿ ಕರಗವನ್ನು ಮುನ್ನಡೆಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಮುದಾಯದವರು Draupadi Amman ಅವರನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗ ಪೂಜೆಯಲ್ಲಿ ಕುಲಪುರೋಹಿತರು, ವೀರಕುಮಾರರು ಮತ್ತು ಭಕ್ತರು ಭಾಗವಹಿಸಿ ವಿಶೇಷ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ.
ಹಬ್ಬದ ವಿಶೇಷವೆಂದರೆ ವೀರಕುಮಾರರು ಕೈಯಲ್ಲಿ ಖಡ್ಗಗಳನ್ನು ಹಿಡಿದು ಭಕ್ತಿಯ ಸಂಕೇತವಾಗಿ ತಮ್ಮ ಎದೆಗೆ ತಾವೇ ಪ್ರಹಾರ ಮಾಡಿಕೊಳ್ಳುವುದು. ಗಾಯವಾದಲ್ಲಿ ಔಷಧಿಯ ಬದಲು ಅರಿಶಿನವನ್ನು ಬಳಸಿ ದೇವಿಯ ಮೇಲಿನ ಭಕ್ತಿಯನ್ನು ತೋರಿಸುತ್ತಾರೆ.
ರಾತ್ರಿ ಸುಮಾರು ಮೂರು ಗಂಟೆಗೆ ಹೂವಿನ ಕರಗ ಸಿದ್ಧವಾಗುತ್ತಿದ್ದು, ಕೆಂಪು ವಸ್ತ್ರ ಮತ್ತು ಮಂಗಳ ದ್ರವ್ಯಗಳಿಂದ ಅಲಂಕರಿಸಲಾಗುತ್ತದೆ. ಪೂಜಾರಿ ಮಲ್ಲಿಗೆ ಹೂಗಳಿಂದ ಸಿಂಗರಿಸಿಕೊಂಡು ಕರಗವನ್ನು ಹೊತ್ತು ಭಕ್ತಿಭಾವದಿಂದ ನರ್ತನ ಮಾಡುತ್ತಾ ಸಾಗುತ್ತಾರೆ.
ಈ ಕರಗವು ಕೆಂಗೇರಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಸಂಚರಿಸಿ, ನಂತರ ದೇವಸ್ಥಾನಕ್ಕೆ ಮರಳಿ ಪೂಜೆ ಸ್ವೀಕರಿಸುವ ಮೂಲಕ ಮಹೋತ್ಸವ ಮುಕ್ತಾಯಗೊಳ್ಳುತ್ತದೆ.
ಈ ಸಂದರ್ಭದಲ್ಲಿ ಸಮುದಾಯದ ಅನೇಕ ಮುಖಂಡರು ಹಾಗೂ ಭಕ್ತರು ಭಾಗವಹಿಸಿ ಉತ್ಸವಕ್ಕೆ ಭಕ್ತಿ ಭಾವ ತುಂಬಿದರು.
ದೇಶ
ಬೆಂಗಳೂರಿನಲ್ಲಿ ಎಲ್ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ
ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.
ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.
ಗ್ಯಾಸ್ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್ ಖಾಲಿಯಾಗುತ್ತಿದೆ. ಸಿಎನ್ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.
ಇದರಿಂದಾಗಿ ವಿದ್ಯುತ್ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.
ದೇಶ
ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.
ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.
ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.
ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.
-
ಚುನಾವಣೆ11 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ12 hours agoX ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?
-
ಚುನಾವಣೆ12 hours agoಎಐಎಡಿಎಂಕೆ vs ಡಿಎಂಕೆ: ಸೀಟ್ ಶೇರಿಂಗ್ನಲ್ಲಿ ಭಾರಿ ಪೈಪೋಟಿ
-
ದೇಶ11 hours agoಗಡಿಯಲ್ಲಿ ಹಾವು-ಮೊಸಳೆ ಕಾವಲು?: ಬಿಎಸ್ಎಫ್ ಹೊಸ ಯೋಜನೆ ಚರ್ಚೆಯಲ್ಲಿ
-
ದೇಶ13 hours agoತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು
-
ದೇಶ14 hours agoಇರಾನ್ಗೆ ಟ್ರಂಪ್ ಮತ್ತೊಂದು ಗಡುವು: 24 ಗಂಟೆ ವಿಸ್ತರಣೆ ಘೋಷಣೆ
-
ದೇಶ10 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
-
ದೇಶ9 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
