Connect with us

ಬೆಂಗಳೂರು

ಸಿಎಂ, ಡಿಸಿಎಂ ಇಂದು ದೆಹಲಿಗೆ: ಹೈಕಮಾಂಡ್ ಜೊತೆ ಮುಡಾ, ವಾಲ್ಮೀಕಿ ಕೇಸ್ ಪ್ರಸ್ತಾಪ; ಸಂಪುಟ ಪುನರ್‌ರಚನೆ ಚರ್ಚೆ? – CM DCM Delhi Visit

Published

on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಇಂದು​ ದೆಹಲಿಗೆ ತೆರಳುವರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ, ಮುಡಾ ಅಕ್ರಮ ಆರೋಪಗಳ ನಡುವೆ ಸಿಎಂ ಮತ್ತು ಡಿಸಿಎಂ ಜೊತೆಗೆ ಹಲವು ಸಚಿವರುಗಳು ಕೂಡಾ ರಾಷ್ಟ್ರ ರಾಜಧಾನಿಗೆ ತೆರಳುತ್ತಿರುವುದು ಕುತೂಹಲ ಕೆರಳಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಸಂಜೆ ಭೇಟಿಯಾಗಲಿದ್ದಾರೆ. ಇತ್ತ 10ಕ್ಕೂ ಹೆಚ್ಚು ಸಚಿವರುಗಳೂ ದೆಹಲಿಗೆ ದೌಡಾಯಿಸಿದ್ದಾರೆ. ಪಕ್ಷ ಹಾಗೂ ಸರ್ಕಾರದ ವಿಚಾರವಾಗಿ ಚರ್ಚೆ ನಡೆಯಲಿದೆ ಎಂದು ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ.

ಹೈಕಮಾಂಡ್ ಭೇಟಿ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಾಗೂ ಮುಡಾ ಹಗರಣ ಆರೋಪಗಳ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಳಿ ಸ್ಪಷ್ಟನೆ ಕೇಳುವ ಸಾಧ್ಯತೆ ಇದೆ. ಮುಡಾ ಹಾಗೂ ವಾಲ್ಮೀಕಿ ನಿಗಮ ಅಕ್ರಮ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಮುಂದಾಗಿವೆ.

ಲೋಕಸಭೆ ಅಧಿವೇಶನದಲ್ಲೂ ಈ ಹಗರಣಗಳ ಸಂಬಂಧ ಬಿಜೆಪಿ-ಜೆಡಿಎಸ್ ಸಂಸದರು ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಭವನದ ಮುಂದೆಯೂ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಮುಜುಗರ ಉಂಟುಮಾಡಿದೆ. ಹೀಗಾಗಿ ಈ ಹಗರಣಗಳ ಸಂಬಂಧ ಸಿಎಂ ಹಾಗೂ ಡಿಸಿಎಂ ಅವರಿಂದ ಹೈಕಮಾಂಡ್ ವಿವರಣೆ ಕೋರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ, ಜೆಡಿಎಸ್ ಸಂಸದರು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಈ ಹಗರಣಗಳನ್ನು ರಾಷ್ಟ್ರೀಯ ಚರ್ಚಾ ವಿಚಾರವಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ತರಿಸಿಕೊಂಡಿದೆ ಎಂದು ಮೂಲಗಳು ಹೇಳಿವೆ.

ಸಂಪುಟ ಪುನರ್‌ರಚನೆ ಚರ್ಚೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಸಂಪುಟ ಪುನರ್‌ರಚನೆಯ ಚರ್ಚೆಗೂ ಇಂಬು ನೀಡಿದೆ. ನಾಲ್ಕೈದು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದೆ. ಇದೇ ಆತಂಕದಲ್ಲಿ ದೆಹಲಿಗೆ ಕೆಲವು ಸಚಿವರುಗಳೂ ದೌಡಾಯಿಸಿದ್ದಾರೆ.

ಈ ಮಧ್ಯೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಕುರಿತಾಗಿ ಮಧುಸೂಧನ್ ಮಿಸ್ತ್ರಿ ಸಮಿತಿಯ ಸತ್ಯಶೋಧನಾ ವರದಿ ಹೈಕಮಾಂಡ್ ಕೈ ಸೇರಿದೆ. ಈ ವರದಿ ಆಧಾರದಲ್ಲಿ ಹೈಕಮಾಂಡ್ ಕೆಲ ಸಲಹೆ ಸೂಚನೆಗಳೊಂದಿಗೆ ಸಂಪುಟ ಪುನರ್‌ರಚಿಸುವ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ. ಮಿಸ್ತ್ರಿ ಸಮಿತಿ ರಾಜ್ಯದ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸಚಿವರ ಕಾರ್ಯವೈಖರಿಯ ಬಗ್ಗೆಯೂ ಮಾಹಿತಿ ಸಂಗ್ರಹಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ?: ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಗೋಚರಿಸಿದೆ. ಎಐಸಿಸಿ ನಿಯಮದಂತೆ ಒಬ್ಬ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದುವಂತಿಲ್ಲ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡಿಸಿಎಂ ಸ್ಥಾನ ಹೊಂದಿರುವುದರಿಂದ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.

ಕಳೆದ ತಿಂಗಳ ದೆಹಲಿ ಭೇಟಿ ವೇಳೆ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಸೂಚಿಸಿದ್ದರು ಎನ್ನಲಾಗಿದೆ. ಇತ್ತ ಮಧುಸೂದನ್​​ ಮಿಸ್ತ್ರಿ ಕೆಪಿಸಿಸಿ ಅಧ್ಯಕ್ಷಗಿರಿಯ ಬಗ್ಗೆಯೂ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ ಹೆಸರುಗಳು ಕೇಳಿ ಬರುತ್ತಿವೆ.

ಅಪರಾಧ

ಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ

Published

on

ಬೆಂಗಳೂರು: ರಾಜ್ಯ ರಾಜಧಾನಿಯ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸೌಧ ಲೇಔಟ್‌ ಸಮೀಪದ ಯರಪ್ಪನಹಳ್ಳಿ ಗ್ರಾಮದ ಕ್ವಾರಿ ಮೇಲೆ ದಾಳಿ ನಡೆಸಿದ ಪೊಲೀಸರು ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್‌ಗಳನ್ನು ಪತ್ತೆಹಚ್ಚಿದ್ದಾರೆ.

ಪೊಲೀಸರ ಪ್ರಕಾರ, ವೆಂಕಟೇಶ್ವರ ಗ್ರಾನೈಟ್ಸ್ ಕ್ರಶರ್‌ಗೆ ಸೇರಿದ ಕ್ವಾರಿಯಲ್ಲಿ ಕಲ್ಲುಬಂಡೆಗಳನ್ನು ಸ್ಫೋಟಿಸಲು ಬಳಸುವ 225 ಜಿಲೆಟಿನ್ ಕಡ್ಡಿಗಳು ಹಾಗೂ 50 ಡಿಟೊನೇಟರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಸ್ಥಳೀಯರಿಂದ ಬಂದ ಮಾಹಿತಿಯ ಆಧಾರದ ಮೇಲೆ ಆವಲಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿ ಈ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ವಾರಿ ಮಾಲೀಕರಾದ ವೆಂಕಟರಮಣರೆಡ್ಡಿ ಹಾಗೂ ಉಸ್ತುವಾರಿ ಲೋಕೇಶ್‌ರೆಡ್ಡಿ ಅವರು ಸರ್ಕಾರದಿಂದ ಅಗತ್ಯವಾದ ಪರವಾನಗಿ ಪಡೆಯದೇ ಈ ಸ್ಪೋಟಕಗಳನ್ನು ಸಂಗ್ರಹಿಸಿ ಬಳಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಜೊತೆಗೆ, ಸುರಕ್ಷತಾ ನಿಯಮಗಳನ್ನು ಪಾಲಿಸದೇ ರಾತ್ರಿ ವೇಳೆ ಕಲ್ಲುಬಂಡೆಗಳನ್ನು ಸ್ಫೋಟಿಸುತ್ತಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಶರ್ ಮಾಲೀಕರು, ಉಸ್ತುವಾರಿ ಹಾಗೂ ಕ್ವಾರಿಯಲ್ಲಿ ಸ್ಫೋಟಕ ಬಳಕೆಯಲ್ಲಿ ತೊಡಗಿದ್ದ ವಿಕಾಸ್, ತೋಹಿದ್ ಮತ್ತು ಸಂದೀಪ್ ವಿರುದ್ಧ ನಿರ್ಲಕ್ಷ್ಯ ಆರೋಪ ಹಾಗೂ ಸ್ಫೋಟಕಗಳ ಕಾಯಿದೆ 1884 ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಸ್ಪೋಟಕಗಳನ್ನು ಕೇವಲ ಕಲ್ಲುಬಂಡೆ ಸ್ಫೋಟಕ್ಕೆ ಮಾತ್ರ ಬಳಸಲಾಗಿತ್ತೇ ಅಥವಾ ಬೇರೆ ದುರುದ್ದೇಶವಿದೆಯೇ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ, ವೈಟ್‌ಫೀಲ್ಡ್ ಉಪ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸ್ಥಳೀಯ ಪ್ರದೇಶದಲ್ಲಿ ಈ ಘಟನೆ ಆತಂಕ ಮೂಡಿಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.

Continue Reading

ಅಪರಾಧ

ಬಿಟ್‌ಕಾಯಿನ್ ಹಗರಣ: ನಲಪಾಡ್‌ಗೆ ಎಸ್‌ಐಟಿ ಚಾರ್ಜ್‌ಶೀಟ್ ಶಾಕ್

Published

on

ಬೆಂಗಳೂರು: 6 ವರ್ಷಗಳ ಹಿಂದಿನ ಬಿಟ್‌ಕಾಯಿನ್ ಹಗರಣವು (Karnataka Bitcoin Scam) ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ Mohammed Nalapad ಅವರಿಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.

ವಿಶೇಷ ತನಿಖಾ ದಳ (SIT) ಇದೀಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಲಪಾಡ್ ಕೂಡ ಈ ಹಗರಣದಲ್ಲಿ ಪಾಲುದಾರರಾಗಿದ್ದು ಹಣದ ಲಾಭ ಪಡೆದಿದ್ದಾರೆ ಎಂಬುದನ್ನು ಉಲ್ಲೇಖಿಸಿದೆ. ಹಗರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ಹ್ಯಾಕರ್ ಶ್ರೀಕೃಷ್ಣ @ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರೊಂದಿಗೆ ನಲಪಾಡ್ ನಂಟು ಹೊಂದಿದ್ದರೆಂಬ ಅಂಶವೂ ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ.

ಎಸ್‌ಐಟಿ ಆರೋಪಗಳ ಪ್ರಕಾರ, ಬಿಟ್‌ಕಾಯಿನ್ ನಗದೀಕರಣಕ್ಕಾಗಿ ನಲಪಾಡ್ ಅವರು ಹ್ಯಾಕರ್ ಶ್ರೀಕಿಯನ್ನು ಸಂಪರ್ಕಿಸಿದ್ದರೆಂದು ತಿಳಿದುಬಂದಿದೆ. ಮುಂಬೈ ಮೂಲದ ಸ್ನೇಹಿತ ಹಾಗೂ ಖಂಡೇವಾಲ ಮೂಲಕ ಹವಾಲಾ ಜಾಲದ ಮೂಲಕ ಹಣವನ್ನು ನಗದೀಕರಿಸಿರುವ ಆರೋಪವೂ ಇದೆ. ಈ ಪ್ರಕ್ರಿಯೆಯಲ್ಲಿ ಕಮಿಷನ್ ರೂಪದಲ್ಲಿ ನಲಪಾಡ್‌ಗೂ ಹಣ ಸಂದಾಯವಾಗಿರುವುದಾಗಿ ತನಿಖಾ ವರದಿಯಲ್ಲಿ ಹೇಳಲಾಗಿದೆ.

ಇದೀಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಕೂಡ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿಗೊಳಿಸಿದೆ. ಇದಕ್ಕೂ ಮುನ್ನ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಅವರನ್ನು ಇಡಿ ಸುಮಾರು 16 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಈ ನಡುವೆ, Enforcement Directorate ಹಾಗೂ Special Investigation Team Karnataka ತನಿಖೆ ಮುಂದುವರೆಸುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

Continue Reading

ದೇಶ

ಕನಕಪುರದಲ್ಲಿ ಡಿಕೆಶಿ ವರ್ತನೆಗೆ ಬಿಜೆಪಿ ತೀವ್ರ ಆಕ್ರೋಶ

Published

on

ಬೆಂಗಳೂರು: ತಮ್ಮ ತವರು ಕ್ಷೇತ್ರ ಕನಕಪುರದಲ್ಲಿ ನಡೆದ ಒಂದು ಘಟನೆ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿಗಳೂ ಆಗಿರುವ D. K. Shivakumar ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಅರ್ಧ ತಿಂದ ಸೇಬುಗಳನ್ನು ಕಾರ್ಯಕರ್ತರತ್ತ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಭಾನುವಾರ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ, ಸೇಬುಗಳಿಂದ ತಯಾರಿಸಿದ ಬೃಹತ್ ಹಾರವನ್ನು ಕ್ರೇನ್ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ಹಾಕಲಾಗಿತ್ತು. ಕಾರ್ಯಕ್ರಮದ ಬಳಿಕ ಅವರು ಎರಡು ಸೇಬುಗಳನ್ನು ಕಚ್ಚಿ ತಿಂದ ನಂತರ ಉಳಿದ ಅರ್ಧ ಸೇಬುಗಳನ್ನು ಒಂದರ ನಂತರ ಒಂದಾಗಿ ಪಕ್ಷದ ಕಾರ್ಯಕರ್ತರತ್ತ ಎಸೆದು ಸ್ಥಳದಿಂದ ತೆರಳಿದ್ದಾರೆ. ಈ ಘಟನೆ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ರಾಜಕೀಯ ಚರ್ಚೆ ತೀವ್ರಗೊಂಡಿದೆ.

ಈ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿರುವ Bharatiya Janata Party, ಈ ನಡೆ ಕಾಂಗ್ರೆಸ್ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದೆ. ಎಕ್ಸ್ (ಹಳೆಯ ಟ್ವಿಟರ್)ನಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಮತದಾರರ ಮೇಲೆ ಗೌರವವಿಲ್ಲದ ವರ್ತನೆ ಇದು ಎಂದು ಕಿಡಿಕಾರಿದೆ. “ಯಾರ ಮತಗಳಿಂದ ಅಧಿಕಾರಕ್ಕೆ ಬಂದಿದ್ದಾರೋ ಅವರ ಮೇಲೆಯೇ ಅವಮಾನಕಾರಿ ನಡೆ ತೋರಿಸುವುದು ಸರಿಯಲ್ಲ” ಎಂದು ಬಿಜೆಪಿ ಹೇಳಿದೆ.

ಇದೇ ವೇಳೆ, ಸಾರ್ವಜನಿಕ ಗೌರವವನ್ನು ಮಾತಿನಲ್ಲಿ ಅಲ್ಲ, ನಡೆ-ನುಡಿಯಲ್ಲಿ ತೋರಿಸಬೇಕು ಎಂಬ ಸಂದೇಶವನ್ನು ಬಿಜೆಪಿ ನೀಡಿದೆ. ಸಾರ್ವಜನಿಕರು ಭಿಕ್ಷೆ ಬೇಡುವವರಲ್ಲ, ಗೌರವಕ್ಕೆ ಅರ್ಹರು ಎಂದು ಕೂಡ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ರಾಜಕೀಯ ವಾಗ್ವಾದವನ್ನು ಮತ್ತಷ್ಟು ತೀವ್ರಗೊಳಿಸಿದೆ.

Continue Reading

Trending