ಚುನಾವಣೆ
ಬಿಜೆಪಿಯವರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಾಗಲ್ಲ ಎಂದು ಹೇಳಿದ್ದರು. ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೋದಿ ಅವರು ನೋಡಿದ್ದರೆ ಇಂತಹ ಕಾರ್ಯಕ್ರಮ ಕೂಡ ಜಾರಿ ಮಾಡಲು ಸಾಧ್ಯವಿದೆ ಎಂಬುವುದನ್ನು ಎಂದು ತಿಳಿಯಬಹುದು. ಆದರೆ, ಅವರು ಒಪ್ಪಲ್ಲ, ಅವರು ಹೇಳಿದ್ದನ್ನೇ ಬೇರೆಯವರು ಕೇಳಬೇಕು. ಬೇರೆಯವರು ಹೇಳಿದ್ದನ್ನು ಅವರು ಕೇಳಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ರಾಜ್ಯ ಸರ್ಕಾರದಿಂದ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂದು ರಾಹುಲ್ ಗಾಂಧಿ ಅವರು ಸ್ಪಷ್ಟವಾಗಿ ತಮ್ಮ ಅನಿಸಿಕೆಗಳನ್ನು ನಿಮ್ಮ ಮುಂದೆ ಇಟ್ಟಿದ್ದಾರೆ. ನಾನು ಸಹ ಅದೇ ಮಾತನ್ನು ಹೇಳುತ್ತೇನೆ. ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ ಐದು ಗ್ಯಾರಂಟಿಗಳ ಪೈಕಿ ನಾಲ್ಕನ್ನು ಜಾರಿ ಮಾಡಿದ್ದೇವೆ. ಇಲ್ಲಿ ಕೊಟ್ಟಂತಹ ಗ್ಯಾರಂಟಿಗಳನ್ನು ದೇಶದ ಯಾವ ರಾಜ್ಯದಲ್ಲೂ ಜಾರಿ ಮಾಡಿಲ್ಲ 53 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಕೇಳುತ್ತಾರೆ. ಆದರೆ, ಅನೇಕ ಕೆಲಸ ಮಾಡಿದ್ದೇವೆ ಎಂದು ಹೇಳಬಹುದು. ನಾವು ಮಾಡಿದ ಕೆಲಸಕ್ಕೆ ಸುಣ್ಣ ಬಣ್ಣ ಹಚ್ಚಿ ಬಿಜೆಪಿಯವರು ಉದ್ಘಾಟನೆ ಮಾಡುತ್ತಾರೆ. ಕಾಂಗ್ರೆಸ್ ಏನು ಮಾಡಿದೆ ಎಂದು ರಿಪೋರ್ಟ್ ಕೊಡುತ್ತೇವೆ. ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಏನು ಮಾಡಿದರು ಎಂಬ ಬಗ್ಗೆ ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಅವರು (ಬಿಜೆಪಿ) ಏನು ಮಾಡಿದರು ಎಂದು ಕಾರ್ಡ್ ಕೊಡಲಿ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು. ಮತದಾನ ವಯಸ್ಸು 21ರಿಂದ 18ಕ್ಕಿಳಿಸಿದ್ದು ಕಾಂಗ್ರೆಸ್. ನಮ್ಮ ಕಾಲದಲ್ಲಿ ದೊಡ್ಡ ಕಾಮಗಾರಿಗಳು ಆಗಿವೆ, ಎಲ್ಲ ಸಂಸ್ಥೆಗಳನ್ನು ಕಟ್ಟಿದ್ದು ನಾವು. ನಾವು ಬಡವರಿಗಾಗಿ ಯೋಜನೆ ಮಾಡಿದರೆ, ಅವರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಾರೆ. ನೀರವ್ ಮೋದಿ ಮತ್ತಿತರರು ಬ್ಯಾಂಕ್ ಹಣ ಲೂಟಿ ಮಾಡಿ ಹೋಗಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ತೆಗೆದಿದ್ದರು.
ಚುನಾವಣೆ
BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.
ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣೆ
ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ
ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.
“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.
ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.
ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.
ಚುನಾವಣೆ
BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ
ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.
ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
-
ದೇಶ3 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ10 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ10 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ10 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ2 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ3 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ10 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ3 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
