Connect with us

ರಾಜ್ಯ

ವಯನಾಡು ಭೂಕುಸಿತ ದುರಂತ: ಆರ್ಥಿಕ ನೆರವು ನೀಡಿದ ರಶ್ಮಿಕಾ, ಸೂರ್ಯ, ಮಮ್ಮುಟ್ಟಿ

ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ.

ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಲಕ್ಷ ಲಕ್ಷ ಹಣವನ್ನು ಕೇರಳದ ಸಿಎಂ ಫಂಡ್‌ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ತಮಿಳು ನಟ ಸೂರ್ಯ, ಚಿಯಾನ್ ವಿಕ್ರಮ್, ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನೆರವಿಗೆ ಬಂದಿದ್ದಾರೆ.

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕಾರ್ಯವೊಂದಕ್ಕಾಗಿ ಅತಿಥಿಯಾಗಿ ಕೇರಳಕ್ಕೆ ಆಗಮಿಸಿದ್ದರು. ಆಗ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರ ಪ್ರೀತಿ ನೋಡಿ ನಟಿ ಧನ್ಯವಾದ ತಿಳಿಸಿದ್ದರು. ಇದೀಗ ಕೇರಳದಲ್ಲಿ ಆಗಿರುವ ಭೂಕುಸಿತ ದುರಂತ ಕಂಡು ಅಲ್ಲಿನ ಸಿಎಂ ಫಂಡ್‌ಗೆ ನಟಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyan Vikram), ಕೇರಳದ ಸಿಎಂ ಫಂಡ್‌ಗೆ 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ನೆರವಾಗಿದ್ದಾರೆ. ಸೂರ್ಯ (Suriya) ಮತ್ತು ಜ್ಯೋತಿಕಾ ದಂಪತಿ, ನಟ ಕಾರ್ತಿ (Karthi) ಜಂಟಿಯಾಗಿ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಸ್ಟಾರ್ ನಟ ಮಮ್ಮುಟ್ಟಿ ಮತ್ತು ಪುತ್ರ ದುಲ್ಕರ್ ಸಲ್ಮಾನ್ ಜೊತೆಯಾಗಿ 35 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಫಹಾದ್ ಫಾಸಿಲ್, ನಜ್ರಿಯಾ ಜೋಡಿ 25 ಲಕ್ಷ ರೂ. ದೇಣಿಗೆ ನೀಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದೇಶ

ರಾಜ್ಯ ಬಜೆಟ್‌ ಹೊಸ್ತಿಲಲ್ಲಿ ಮಂಡ್ಯ ನಿರೀಕ್ಷೆ: ಪ್ರವಾಸೋದ್ಯಮ, ರಸ್ತೆ, ಆರೋಗ್ಯಕ್ಕೆ ಒತ್ತು

ಮಂಡ್ಯ: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ರಾಜ್ಯ ಬಜೆಟ್‌ನಲ್ಲಿ ಮಂಡ್ಯ ಜಿಲ್ಲೆಯ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಚುನಾವಣೆ ದೃಷ್ಟಿಯಿಂದಾದರೂ ವಿಶೇಷ ಪ್ಯಾಕೇಜ್ ಮೂಲಕ ಜಿಲ್ಲೆಗೆ ಅನುದಾನ ಮಂಜೂರಾಗಬಹುದು ಎಂಬ ಆಶಾಭಾವನೆ ವ್ಯಕ್ತವಾಗಿದೆ.


ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಬೇಡಿಕೆ

ಜಿಲ್ಲೆಯಲ್ಲಿ ವಿಶ್ವವಿಖ್ಯಾತ Krishna Raja Sagara (ಕೆಆರ್‌ಎಸ್‌) ಬೃಂದಾವನ, Gaganachukki Falls, Ranganathittu Bird Sanctuary, Melukote, Srirangapatna, Adichunchanagiri ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿವೆ.

ಪ್ರವಾಸೋದ್ಯಮ ಇಲಾಖೆ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳಿದ್ದರೂ, ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ. ಶ್ರೀರಂಗಪಟ್ಟಣವನ್ನು ಮೆಕ್ಸಿಕೊ ಅಥವಾ ಸಿಡ್ನಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಒತ್ತು ನೀಡಬೇಕು ಎಂದು ಇತಿಹಾಸತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಗಗನಚುಕ್ಕಿ ಜಲಪಾತದಲ್ಲಿ ರೋಪ್‌ವೇ ಅಳವಡಿಕೆಗೂ ಬೇಡಿಕೆ ಇದೆ.


ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ

ಜಿಲ್ಲೆಯ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳ ಸ್ಥಿತಿ ದುರ್ಬಲವಾಗಿದೆ. ಮಂಡ್ಯ ನಗರದಲ್ಲಿ ರಸ್ತೆ ಪುನರ್‌ನಿರ್ಮಾಣಕ್ಕೆ ವಿಶೇಷ ಅನುದಾನ ಅಗತ್ಯವಿದೆ. ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಿಂದ ಉತ್ತರ ಬೈಪಾಸ್ ನಿರ್ಮಾಣಗೊಂಡಿದ್ದು, ದಕ್ಷಿಣ ಭಾಗದಲ್ಲೂ ಬೈಪಾಸ್ ನಿರ್ಮಾಣವಾದರೆ ರಿಂಗ್‌ರೋಡ್ ರೂಪುಗೊಳ್ಳಲಿದೆ.


ಆರೋಗ್ಯ ಮತ್ತು ಕೃಷಿಗೆ ಆದ್ಯತೆ

  • ಮಂಡ್ಯದಲ್ಲಿ ಟ್ರಾಮಾ ಕೇರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
  • ಹನಿ ಮತ್ತು ಏತ ನೀರಾವರಿ ಯೋಜನೆಗಳ ಅನುಷ್ಠಾನ
  • ಎಲ್ಲಾ ನಾಲೆಗಳ ಆಧುನೀಕರಣ
  • ಕೃಷಿ ಕೈಗಾರಿಕೆಗಳ ಸ್ಥಾಪನೆ

ಮೈಶುಗರ್ ಪುನಶ್ಚೇತನ ಬೇಡಿಕೆ

ಜಿಲ್ಲೆಯ ಹೆಮ್ಮೆಯ Mysore Sugar Company (ಮೈಶುಗರ್) ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಜನರು ಆಗ್ರಹಿಸಿದ್ದಾರೆ.

Continue Reading

ದೇಶ

SHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು, ಫೆಬ್ರವರಿ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ Shakti Scheme ಅಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇನ್ನುಮುಂದೆ ಆಧಾರ್ ಕಾರ್ಡ್ ಬದಲಾಗಿ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದೆ. ಈ ಕುರಿತು ಮುಖ್ಯಮಂತ್ರಿ Siddaramaiah ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲಿವೆ. ಈ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.


ಬೆಂಗಳೂರು ರೇಸ್ ಕೋರ್ಸ್ ಕುಣಿಗಲ್‌ಗೆ ಶಿಫ್ಟ್

ಬೆಂಗಳೂರಿನ ಪ್ರಸಿದ್ಧ Bangalore Turf Club (ರೇಸ್ ಕೋರ್ಸ್) ಅನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್ ಫಾರ್ಮ್‌ಗೆ ಸ್ಥಳಾಂತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಲೀಸ್ ಅವಧಿ ಮುಕ್ತಾಯವಾಗಿರುವುದು ಹಾಗೂ ಬಾಡಿಗೆ ಪರಿಷ್ಕರಣೆ ಆಗಿರದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಕ್ಲಬ್‌ನ ಜಾಗವನ್ನು ಹಾಗೆಯೇ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.


ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ–ಸಾಕ್ಸ್

1ರಿಂದ 10ನೇ ತರಗತಿ ತನಕ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ 2026-27ನೇ ಸಾಲಿಗೆ ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.


ಇತರೆ ಪ್ರಮುಖ ನಿರ್ಧಾರಗಳು

  • ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ
  • ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ‘ಶಾಶ್ವತ ವಿಶೇಷ ಕೃಷಿವಲಯ’ವಾಗಿ ಘೋಷಣೆ
  • ತಿಕೋಟಾದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ಸ್ಥಾಪನೆ
  • ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಶಿಷ್ಟಾಚಾರ ನಿಯಮ ಜಾರಿಗೆ ಅನುಮೋದನೆ
  • ನ್ಯಾಯಾಲಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಿಗೆ ಶಿಷ್ಟಾಚಾರ ಅನುಮತಿ

ವಿಪಕ್ಷಗಳ ಟೀಕೆಗೆ ಗುರಿಯಾಗಿರುವ SIR ವಿಷಯದಲ್ಲಿಯೂ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿದೆ. ಕಾನೂನು ಇಲಾಖೆ ಸಮಗ್ರ ಅಧ್ಯಯನ ನಡೆಸಿ ಮುಂದಿನ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.

Continue Reading

ದೇಶ

ದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ.

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಅತಿವೇಗವೇ ಕಾರಣ?

ಪ್ರಾಥಮಿಕ ತನಿಖೆಯ ಪ್ರಕಾರ, ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್‌ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ.


ಪೊಲೀಸ್ ಪರಿಶೀಲನೆ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


‘ಅವೈಜ್ಞಾನಿಕ ರಸ್ತೆ’ ಆರೋಪ

ಅಪಘಾತ ನಡೆದ ಸ್ಥಳದ ರಸ್ತೆ ವಿನ್ಯಾಸ ಮತ್ತು ನಿರ್ಮಾಣದ ಬಗ್ಗೆ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ಹೆದ್ದಾರಿ ಸರಿಯಾದ ವಿನ್ಯಾಸ ಹೊಂದಿಲ್ಲ ಎಂದು ಅವರು ದೂರಿದ್ದಾರೆ.

ಸ್ಥಳೀಯ ನಿವಾಸಿ ಮಂಜುನಾಥ್ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದಾರೆ. ಕಾಮಗಾರಿ ಸಂದರ್ಭದಲ್ಲೇ ಎಂಜಿನಿಯರ್ ಒಬ್ಬರು ವಿನ್ಯಾಸದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಅದನ್ನು ಪರಿಗಣಿಸಲಿಲ್ಲ ಎಂದು ಹೇಳಿದ್ದಾರೆ.

ಸರ್ವೀಸ್ ರಸ್ತೆಗಳು ಕನಿಷ್ಠ 18 ಅಡಿ ಅಗಲ ಇರಬೇಕಿದ್ದರೂ, ಕೆಲವೆಡೆ ಮೂರೂವರೆ ಅಥವಾ ಎರಡೂವರೆ ಅಡಿ ಮಾತ್ರ ಇರುವುದಾಗಿ ಅವರು ತಿಳಿಸಿದ್ದಾರೆ. 2010ರಲ್ಲಿ ರೈತರು ಜಮೀನುಗಳನ್ನು ಹೆದ್ದಾರಿ ಯೋಜನೆಗೆ ನೀಡಿದ್ದರೂ, ಸಮರ್ಪಕ ಪರಿಹಾರವೂ ಸಿಗಲಿಲ್ಲ ಮತ್ತು ರಸ್ತೆ ಗುಣಮಟ್ಟವೂ ಸಮರ್ಪಕವಾಗಿಲ್ಲ ಎಂದು ಆರೋಪಿಸಲಾಗಿದೆ.

Continue Reading

Trending