ಅಪರಾಧ
ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಕಿರಿಯ ವೈದ್ಯರ ಮುಂದುವರಿದ ಮುಷ್ಕರ, ಆ.14ರೊಳಗೆ ತನಿಖೆ ಮುಗಿಸಲು ಪೊಲೀಸರಿಗೆ ಗಡುವು
ಕೋಲ್ಕತ್ತಾ: ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಮತ್ತು ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಹಾಗೂ ವೈದ್ಯಕೀಯ ವೃತ್ತಿಪರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳದಾದ್ಯಂತ ಕಿರಿಯ ವೈದ್ಯರು ಮಂಗಳವಾರ ಮುಷ್ಕರ ಮುಂದುವರಿಸಿದ್ದಾರೆ.
ಇಂದು ಮುಂಜಾನೆಯಿಂದಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (OPDs) ರೋಗಿಗಳ ಉದ್ದನೆಯ ಸರತಿ ಸಾಲುಗಳು ಕಂಡುಬಂದಿದ್ದರಿಂದ, ಹಿರಿಯ ವೈದ್ಯರು ತಮ್ಮ ಕಿರಿಯ ಕೌಂಟರ್‌ಪಾರ್ಟ್ಸ್‌ಗಳನ್ನು ಬದಲಿಸಿದ್ದರಿಂದ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಿತು,
ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರು ನಾಳೆಯೊಳಗೆ ವೈದ್ಯೆ ಹತ್ಯೆಯ ನಿಖೆಯನ್ನು ಪೂರ್ಣಗೊಳಿಸಲು ಕೋಲ್ಕತ್ತಾ ಪೊಲೀಸರಿಗೆ ಗಡುವು ವಿಧಿಸಿದ್ದಾರೆ.
ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಮುಷ್ಕರ ಮತ್ತು ಪ್ರತಿಭಟನೆ ಮುಂದುವರಿಯುತ್ತದೆ. ನಮ್ಮ ಬೇಡಿಕೆಗಳ ಬಗ್ಗೆ ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಾವು ಒತ್ತಾಯಿಸುತ್ತಿದ್ದೇವೆ ಎಂದು ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರತಿಭಟನಾನಿರತ ಕಿರಿಯ ವೈದ್ಯರೊಬ್ಬರು ಹೇಳಿದರು.
ಅವರಿಗೆ ಭಾನುವಾರದವರೆಗೆ ಗಡುವು ಏಕೆ ಬೇಕು, ಬುಧವಾರದೊಳಗೆ ಅವರ ತನಿಖೆಯನ್ನು ಪೂರ್ಣಗೊಳಿಸಲು ನಾವು ಪೊಲೀಸರನ್ನು ಕೇಳುತ್ತಿದ್ದೇವೆ ಎಂದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಿನ್ನೆ ಸೋಮವಾರ ಮೃತರ ಪೋಷಕರನ್ನು ಭೇಟಿ ಮಾಡಿದ ನಂತರ, ಪ್ರಕರಣವನ್ನು ಪರಿಹರಿಸಲು ಕೋಲ್ಕತ್ತಾ ಪೊಲೀಸರಿಗೆ ಆಗಸ್ಟ್ 18 ರ ಗಡುವು ನೀಡಿದರು, ವಿಫಲವಾದರೆ ಅವರು ವಿಷಯವನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
ಅಪರಾಧ
ಬೆಂ-ಮೈ ಹೆದ್ದಾರಿ ಸೇಫ್ ಅಲ್ಲವೇ? ಮದ್ದೂರು ಫ್ಲೈಓವರ್‌ನಲ್ಲಿ ಕುಟುಂಬದ ಮೇಲೆ ರೌಡಿಗಳ ದಾಳಿ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ರಸ್ತೆ ರೌಡಿಗಳ ಅಟ್ಟಹಾಸ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಓವರ್‌ಟೇಕ್ ವಿಚಾರಕ್ಕೆ ಆರಂಭವಾದ ಸಣ್ಣ ಮಾತಿನ ಚಕಮಕಿಯು ಇಡೀ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆಯಾಗಿ ಮಾರ್ಪಟ್ಟಿರುವ ಘಟನೆ ಮದ್ದೂರು ಫ್ಲೈಓವರ್‌ನಲ್ಲಿ ಜುಲೈ 5ರ ರಾತ್ರಿ ನಡೆದಿದೆ. ಘಟನೆಯ ಭಯಾನಕ ದೃಶ್ಯ ಹಿಂಬದಿಯ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬೆಂಗಳೂರು ಮೂಲದ ಸಾಗರ್ ಅವರು ತಮ್ಮ ಪತ್ನಿ, ತಾಯಿ ಹಾಗೂ ಮಕ್ಕಳೊಂದಿಗೆ ಮೈಸೂರಿನಿಂದ ಬೆಂಗಳೂರಿನತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶ್ರೀರಂಗಪಟ್ಟಣದ ಸರ್ವಿಸ್ ರಸ್ತೆಯಲ್ಲಿ ಸಾಗುವ ವೇಳೆ ಓವರ್‌ಟೇಕ್ ವಿಚಾರಕ್ಕೆ ಮತ್ತೊಂದು ಕಾರಿನಲ್ಲಿದ್ದ ಕೆಲವರು ಸಾಗರ್ ಕುಟುಂಬದೊಂದಿಗೆ ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳದಂತೆ ಸಾಗರ್ ಅಲ್ಲಿಂದ ಮುಂದಕ್ಕೆ ತೆರಳಿದ್ದಾರೆ.
ಆದರೆ, ಅದಕ್ಕೆಲ್ಲ ಸುಮ್ಮನಾಗದ ಪುಂಡರ ಗುಂಪು ಎರಡು ಕಾರುಗಳಲ್ಲಿ ಸಾಗರ್ ಅವರ ವಾಹನವನ್ನು ಬೆನ್ನಟ್ಟಿ ಬಂದಿದೆ. ಮದ್ದೂರು ಫ್ಲೈಓವರ್ ತಲುಪುತ್ತಿದ್ದಂತೆ ಸಿನಿಮಾ ಶೈಲಿಯಲ್ಲಿ ಕಾರನ್ನು ಅಡ್ಡಗಟ್ಟಿ, ಸಾಗರ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ. ಆರೋಪಿಗಳು ಜಾಕ್ ರಾಡ್‌ನಿಂದ ತಲೆಗೆ ಬಲವಾಗಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವೇಳೆ ಸಾಗರ್ ಅವರ ಪತ್ನಿ ಮತ್ತು ತಾಯಿ ಕೈಮುಗಿದು ಬೇಡಿಕೊಂಡರೂ ಆರೋಪಿಗಳು ಹಲ್ಲೆ ನಿಲ್ಲಿಸಲಿಲ್ಲ. ತಂದೆಯನ್ನು ರಕ್ಷಿಸಲು ಬಂದ ಎಂಟು ವರ್ಷದ ಮಗುವಿನ ಕೈಯನ್ನೂ ಆರೋಪಿಗಳು ಕ್ರೂರವಾಗಿ ತಿರುಚಿದ್ದಾರೆ ಎನ್ನಲಾಗಿದೆ. ಈ ಘಟನೆ ಕುಟುಂಬದ ಸದಸ್ಯರನ್ನು ತೀವ್ರ ಆತಂಕಕ್ಕೀಡು ಮಾಡಿದೆ.
ಮಾಹಿತಿ ತಿಳಿದ ತಕ್ಷಣ ಮದ್ದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಗಾಯಾಳುಗಳನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ರಸ್ತೆ ರೇಜ್, ಗುಂಡಿನ ದಾಳಿ ಹಾಗೂ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆದ್ದಾರಿಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.
ಅಪರಾಧ
ಸಿಲಿಕಾನ್ ಸಿಟಿಯಲ್ಲಿ ಶಾಕ್: ಫ್ಲ್ಯಾಟ್‌ನಲ್ಲಿ ಕಾರ್ಡ್‌ಬೋರ್ಡ್ ಬಾಕ್ಸ್‌ನಲ್ಲಿ ಹೆಬ್ಬಾವುಗಳು ಪತ್ತೆ
ಬೆಂಗಳೂರು: ಸಿಲಿಕಾನ್ ಸಿಟಿಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಅಕ್ರಮವಾಗಿ ಹೆಬ್ಬಾವುಗಳನ್ನು ಸಾಕಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಹಲವು ಹೆಬ್ಬಾವುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಗಮನಿಸಿದ್ದ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ದೂರಿನ ಮೇರೆಗೆ ಅಧಿಕಾರಿಗಳು ಶುಕ್ರವಾರ ರಾತ್ರಿ ಫ್ಲ್ಯಾಟ್ ಮೇಲೆ ದಾಳಿ ನಡೆಸಿದಾಗ, ಯಾವುದೇ ಕಾನೂನುಬದ್ಧ ಅನುಮತಿ ಇಲ್ಲದೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಹೆಬ್ಬಾವುಗಳನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದೆ.
ಪರಿಶೀಲನೆ ವೇಳೆ ಕಾರ್ಡ್‌ಬೋರ್ಡ್ ಬಾಕ್ಸ್‌ನಲ್ಲಿ ಹೆಬ್ಬಾವುಗಳನ್ನು ಇರಿಸಲಾಗಿದ್ದು, ಅವುಗಳನ್ನು ಅಪಾಯಕಾರಿ ಪರಿಸ್ಥಿತಿಯಲ್ಲಿ ವಸತಿ ಪ್ರದೇಶದೊಳಗೆ ಸಾಕಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಫ್ಲ್ಯಾಟ್‌ನಲ್ಲಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಹೆಬ್ಬಾವುಗಳನ್ನು ಇಟ್ಟುಕೊಂಡಿದ್ದ ಪ್ರಮುಖ ವ್ಯಕ್ತಿ ಆಂಧ್ರಪ್ರದೇಶ ಮೂಲದವನಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ (Non-Cognizable Report) ದಾಖಲಾಗಿದೆ.
ಈ ಹೆಬ್ಬಾವುಗಳನ್ನು ಎಲ್ಲಿಂದ ತರಲಾಗಿತ್ತು, ವನ್ಯಜೀವಿಗಳ ಅಕ್ರಮ ಸಾಗಣೆ ಅಥವಾ ಮಾರಾಟ ಜಾಲದೊಂದಿಗೆ ಯಾವುದೇ ಸಂಬಂಧವಿದೆಯೇ ಹಾಗೂ ಅವುಗಳನ್ನು ಅಪಾರ್ಟ್‌ಮೆಂಟ್‌ನಲ್ಲಿ ಇಟ್ಟುಕೊಳ್ಳಲು ಉದ್ದೇಶವೇನು ಎಂಬ ಕುರಿತು ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ. ವನ್ಯಜೀವಿಗಳನ್ನು ಅನುಮತಿಯಿಲ್ಲದೆ ಸಾಕುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧ
ಪಾದಯಾತ್ರೆಯಲ್ಲಿದ್ದ ಭಿಕ್ಷುಕರ ಮೇಲೆ ಟ್ರಕ್ ಹರಿದು 9 ಸಾವು: ಥೈಲೆಂಡ್ ಬೆಚ್ಚಿಬಿದ್ದ ಘಟನೆ
ಬ್ಯಾಂಕಾಕ್: ಈಶಾನ್ಯ ಥೈಲೆಂಡ್‌ನ ಮುಕ್ಡಹಾನ್ (Mukdahan) ಪ್ರಾಂತ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಧಾರ್ಮಿಕ ಪಾದಯಾತ್ರೆಯಲ್ಲಿದ್ದ ಬೌದ್ಧ ಭಿಕ್ಷುಕರ ಗುಂಪಿನ ಮೇಲೆ ಪಿಕಪ್ ಟ್ರಕ್ ಹರಿದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಭಿಕ್ಷುಕರು ಸುಮಾರು 35 ಮಂದಿಯ ತಂಡದೊಂದಿಗೆ ಉಬೋನ್ ರಾಚಥಾನಿ ಪ್ರಾಂತ್ಯದತ್ತ ಸುಮಾರು 260 ಕಿಲೋಮೀಟರ್‌ಗಳ ಧಾರ್ಮಿಕ ಪಾದಯಾತ್ರೆ ಕೈಗೊಂಡಿದ್ದರು. ಯಾತ್ರೆ ಆರಂಭಗೊಂಡ ಕೇವಲ 30 ನಿಮಿಷಗಳಲ್ಲೇ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದರೆ, ಆಸ್ಪತ್ರೆಗೆ ದಾಖಲಿಸಿದ ಬಳಿಕ ಇನ್ನೂ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, 11 ವರ್ಷದ ಬಾಲಕ ತನ್ನ ಪೋಷಕರ ಪಿಕಪ್ ಟ್ರಕ್ ಅನ್ನು ಅನುಮತಿಯಿಲ್ಲದೆ ಚಲಾಯಿಸಿದ್ದಾನೆ. ನಿಯಂತ್ರಣ ತಪ್ಪಿದ ವಾಹನ ರಸ್ತೆಯ ಬದಿಯಲ್ಲಿ ಒಂದೇ ಸಾಲಿನಲ್ಲಿ ನಡೆದು ಹೋಗುತ್ತಿದ್ದ ಭಿಕ್ಷುಕರ ಗುಂಪಿನ ಮೇಲೆ ಹರಿದಿದೆ. ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟ್ರಕ್ ವೇಗವಾಗಿ ಭಿಕ್ಷುಕರಿಗೆ ಡಿಕ್ಕಿ ಹೊಡೆಯುವ ದೃಶ್ಯಗಳು ದಾಖಲಾಗಿವೆ.
ಅಪಘಾತದಿಂದ ಪಾರಾದ ಭಿಕ್ಷು ಫ್ರಾ ಸೋಂಪೊಂಗ್, “ನಾವು ಜಪ ಮಾಡುತ್ತಾ ಸಾಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ವಾಹನವನ್ನು ಗಮನಿಸಿದೆವು. ಕ್ಷಣಾರ್ಧದಲ್ಲಿ ಟ್ರಕ್ ನಮ್ಮ ಮೇಲೆ ಹರಿಯಿತು. ನಾನು ಹಾಗೂ ಮತ್ತೊಬ್ಬ ಭಿಕ್ಷು ಮಾತ್ರ ತಪ್ಪಿಸಿಕೊಂಡೆವು” ಎಂದು ಘಟನೆ ವಿವರಿಸಿದ್ದಾರೆ.
ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಮಕ್ಕಳ ರಕ್ಷಣಾ ಅಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಲಿದ್ದಾರೆ. ವಾಹನವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಬಾಲಕನ ಪೋಷಕರ ಜವಾಬ್ದಾರಿಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಘಟನೆ ಥೈಲೆಂಡ್‌ನಲ್ಲಿ ರಸ್ತೆ ಸುರಕ್ಷತೆ ಮತ್ತು ಮಕ್ಕಳಿಗೆ ವಾಹನ ಚಾಲನೆ ನೀಡುವ ಅಪಾಯದ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.
-
ದೇಶ22 hours agoಅಲಿ ಖಮೇನಿ ಅಂತಿಮಯಾತ್ರೆ ಆರಂಭ: ತೆಹ್ರಾನ್ ಬೀದಿಗಳಲ್ಲಿ ಲಕ್ಷಾಂತರ ಜನರ ಅಂತಿಮ ನಮನ
-
ದೇಶ23 hours ago‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್
-
ದೇಶ23 hours agoಚೀನಾ-ಪಾಕ್ ಜಲಾಂತರ್ಗಾಮಿಗಳಿಗೆ ಭಾರತದ ಹೈಟೆಕ್ ಬ್ರಹ್ಮಾಸ್ತ್ರ! ಸಮುದ್ರದಾಳದಲ್ಲಿ ‘ಸೀಕ್ರೆಟ್ ಸೆನ್ಸಾರ್ ನೆಟ್ವರ್ಕ್’
-
ದೇಶ2 hours agoPetrol Diesel Price: ಜುಲೈ 20ರೊಳಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಗ್ರಾಹಕರಿಗೆ ಸಿಗುತ್ತಾ ಸಿಹಿಸುದ್ದಿ
-
ಕ್ರೀಡೆ3 hours agoಸಂಜು ಸ್ಯಾಮ್ಸನ್ ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ
-
ದೇಶ3 hours agoಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದ ಬೆಳವಣಿಗೆ
-
ದೇಶ3 hours agoಟೇಲರ್ ಸ್ವಿಫ್ಟ್-ಟ್ರೇವಿಸ್ ಕೆಲ್ಸಿ ಮದುವೆ: ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ನಡೆದ ಶತಮಾನದ ಸೆಲೆಬ್ರಿಟಿ ಮದುವೆಯ ಒಳಗಿನ ಕಥೆ
-
ದೇಶ3 hours ago‘ಆ್ಯಕ್ಟ್ ಈಸ್ಟ್’ ನೀತಿಗೆ ಹೊಸ ಶಕ್ತಿ: ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸದಲ್ಲಿ ಪ್ರಧಾನಿ ಮೋದಿ
