Connect with us

ಬೆಂಗಳೂರು

ರಾಜಕೀಯ ಹೋರಾಟ ಮಾಡುವಾಗ ನನಗೆ ‘ಜೋಶ್’ ಮತ್ತಷ್ಟು ಹೆಚ್ಚುತ್ತದೆ: ಸಿದ್ದರಾಮಯ್ಯ

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರೂ ತಾನು ವಿಚಲಿತನಾಗಿಲ್ಲ. ರಾಜಕೀಯ ಹೋರಾಟ ವೇಳೆ ನನ್ನಗೆ ಜೋಶ್ ಮತ್ತಷ್ಟು ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, “ನನ್ನ ಆತ್ಮಸಾಕ್ಷಿ ತುಂಬಾ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ತಮ್ಮ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ವಾದಿಸುತ್ತಾರೆ ಎಂದು ತಿಳಿಸಿದರು.

ನನಗೆ ನ್ಯಾಯಾಂಗದ ಮೇಲೆ ಅಪಾರ ನಂಬಿಕೆಯಿದೆ. ನಾನು ಯಾವುದೇ ತಪ್ಪು ಮಾಡಿಲ್ಲದ ಕಾರಣ ನ್ಯಾಯಾಲಯದಿಂದ ಪರಿಹಾರ ಪಡೆಯುವ ಸಂಪೂರ್ಣ ವಿಶ್ವಾಸವಿದೆ. 40 ವರ್ಷಗಳ ಹಿಂದೆ ಆಗಸ್ಟ್ 17, 1984 ರಂದು ಮೊದಲ ಬಾರಿಗೆ ಮಂತ್ರಿಯಾಗಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ, ನಾನು ಯಾವುದೇ ತಪ್ಪು ಮಾಡಿಲ್ಲ, ಯಾವುದೇ ತಪ್ಪು ಮಾಡುವುದಿಲ್ಲ, ರಾಜಭವನ ಬಳಸಿಕೊಂಡು ಬಿಜೆಪಿ ಮತ್ತು ಜೆಡಿಎಸ್ ನನ್ನ ಪ್ರತಿಷ್ಠೆಯನ್ನು ಹಾಳುಮಾಡಲು ಷಡ್ಯಂತ್ರ ರೂಪಿಸಿವೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ರಾಜಕೀಯ ಪ್ರೇರಿತವಾಗಿದೆ. ರಾಜಕೀಯ, ಕಾನೂನುಬದ್ಧವಾಗಿ ಅದನ್ನು ಎದುರಿಸುತ್ತೇನೆ. ನಾವು ಕಾನೂನು ಮತ್ತು ರಾಜಕೀಯ ಹೋರಾಟ ಮಾಡುತ್ತೇವೆ. ರಾಜಕೀಯ ಹೋರಾಟದ ಸಮಯದಲ್ಲಿ ನನಗೆ ಮತ್ತಷ್ಟು ಜೋಶ್ ಹೆಚ್ಚುತ್ತದೆ. ಅದನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದೇನೆ. ಅದನ್ನು ಹಿಂದೆ ಮಾಡಿದ್ದೇನೆ, ಈಗ ಮಾಡುತ್ತಿದ್ದೇನೆ ಮತ್ತು ಮುಂದೆಯೂ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್ ಪಕ್ಷವನ್ನು ಮುಗಿಸಿ ಬಿಡಬಹುದು ಎಂಬ ಭ್ರಮೆಯಲ್ಲಿ ವಿಪಕ್ಷಗಳಿದ್ದಾರೆ. ಅವರ ರಾಜಕೀಯ ಆಟದ ಯೋಜನೆ ಸಾಕಾರಗೊಳ್ಳುವುದಿಲ್ಲ ಎಂದರು

ದೇಶ

ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ

ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

54 ಟಿಎಂಸಿ ನೀರು ಲಭ್ಯ

ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯಾಂಕರ್ ವ್ಯವಸ್ಥೆ ಸಿದ್ಧ

ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್‌ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ನೀರು ವ್ಯರ್ಥ ಮಾಡಿದ್ರೆ ದಂಡ

ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.

ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Continue Reading

ಬೆಂಗಳೂರು

BENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ

ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ ವಿಶ್ರಾಂತಿ ನೀಡುವ ಶಯನೋತ್ಸವ ಸುಗಂಧ ಪರಿಮಳಯುಕ್ತ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಶಯನೋತ್ಸವವನ್ನು ತಲಘಟ್ಟಪುರದ ಮಾಜಿ ಶ್ಯಾನಭೋಗ ಟಿ.ವಿ. ನಾರಾಯಣಮೂರ್ತಿ ಅವರ ಕುಟುಂಬವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ತ.ನಾ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಉತ್ಸವ ಜರುಗಿತು. ಪ್ರಧಾನ ಅರ್ಚಕ ರಘುರಾಮ್ ಭಟ್ ಅವರು ಸಕಲ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿದರು. ಭಕ್ತರ ಜಯಘೋಷಗಳಿಂದ ದೇವಾಲಯ ಪ್ರದೇಶ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾಯಿತು.

ಈ ಸಂದರ್ಭದಲ್ಲಿ ಅಕ್ಷಯ ವಿಪ್ರ ಮಹಾಸಭಾದ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್, ಕಿರಣ್ ಕುಮಾರ್, ಎಸ್. ರಾಮರಾವ್, ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

Trending