ಆರೋಗ್ಯ
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುತ್ತೀರಾ..?
ಒಂದು ಕಪ್ ಕುಡಿದರೆ ಮೂಡ್ ಫ್ರೆಶ್ ಆಗುತ್ತದೆ ಹಾಗೂ ತುಂಬ ಜನರು ಒಂದು ಕಪ್ ಕಾಫಿಯಿಂದಲೇ ತನ್ನ ದಿನದ ಚಟುವಟಿಕೆಯನ್ನು ಪ್ರಾರಂಭಿಸುತ್ತಾರೆ.ತುಂಬಾ ಜನ ಬೆಳಿಗ್ಗೆ ಎದ್ದ ಕೂಡಲೇ ಹಲ್ಲುಜ್ಜದೆಯೇ ಕಾಫಿ ಕುಡಿಯೋ ಅಭ್ಯಾಸ ಮಾಡಿಕೊಂಡಿರುತ್ತಾರೆ. ಕಾಫಿ ಮುಂಜಾನೆ ಚೈತನ್ಯಭರಿತ ಪಾನೀಯ. ಜಗತ್ತಿನಾದ್ಯಂತ ಕಾಫಿಗೆ ತನ್ನದೇ ಆದ ಬೇಡಿಕೆ ಇದೆ. ನನಗೆ ಕಾಫಿ ಇಲ್ಲದೇ ಇರಲು ಸಾಧ್ಯವಾಗುವುದೇ ಇಲ್ಲ,ಕಾಫಿಯಲ್ಲಿರುವ ಕೆಫಿನ್ ಮೆದುಳನ್ನು ತಕ್ಷಣ ಚರ‍್ಜ್ ಮಾಡುತ್ತದೆ ಅನ್ನೋದು ಸತ್ಯ,. ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯೋದ್ರಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎನ್ನುತ್ತಾರೆ ವೈದ್ಯರು.ಹೆಚ್ಚಾಗಿ ಅಂದರೆ ಅನಾವಶ್ಯಕವಾಗಿ ಟೀ -ಕಾಫಿ ಕುಡಿದರೆ ಹಸಿವು ಕಡಿಮೆಯಾಗುತ್ತದೆ.ನಂತರ ಗ್ಯಾಸ್ಟ್ರಿಕ್ಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುತ್ತವೆ.ರಾತ್ರಿ ಊಟ ಮುಗಿದ ನಂತರ ಕಾಫಿ ಕುಡಿಯುವ ಅಭ್ಯಾಸ ಇದ್ದರೆ ಅದನ್ನು ಆದಷ್ಟು ಬೇಗ ಬದಲಾಯಿಸಿಕೊಳ್ಳಿ. ಇಲ್ಲವಾದಲ್ಲಿ ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲಬೆಳಿಗ್ಗೆ ಎದ್ದ ಕೂಡಲೇ ಕಾಫಿ ಅಥವಾ ಟೀ ಕುಡಿಯುವ ಬದಲು ಕಷಾಯ ಹಾಗೂ ಹಾಲನ್ನು ಕುಡಿದರೆ ಒಳ್ಳೆಯದು ಅಂತಾರೆ ವೈದ್ಯರು.ಖಾಲಿ ಹೊಟ್ಟೆಯಲ್ಲಿ ಕಾಫಿ ಹೀರಿದರೆ ನಿಮ್ಮ ಜರ‍್ಣಾಂಗ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳಾಗಬಹುದು. ಕೆಫೀನ್ ಅಂಶವುಳ್ಳ ಇದನ್ನು ಕುಡಿದರೆ ಹೊಟ್ಟೆಯಲ್ಲಿ ಆ್ಯಸಿಡ್ ( ಆಮ್ಲ ) ಉತ್ಪಾದನೆಯಾಗಬಹುದು. ಇದು ನಿಮ್ಮ ಹೊಟ್ಟೆಯ ಒಳಪದರವನ್ನು ಹಾನಿ ಮಾಡಬಹುದು. ಅಲ್ಲದೆ, ಇದರಿಂದ ಅಜರ‍್ಣ ಮತ್ತು ಎದೆಯುರಿಯಂತಹ ಸಮಸ್ಯೆಗಳು ಆರಂಭವಾಗಬಹುದು ಎಂದು ತಿಳಿದುಬಂದ
ಆರೋಗ್ಯ
ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.
ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.
ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.
ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.
ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.
Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.
ಆರೋಗ್ಯ
ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!
ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.
Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.
ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.
ಆರೋಗ್ಯ
ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ
ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.
ಜಂಕ್ ಫುಡ್‌ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.
ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.
ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.
ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.
ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.
ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.
ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.
-
ದೇಶ4 hours agoಸಂಕಷ್ಟದ ಹೊತ್ತಿನಲ್ಲಿ ನೆರವಾದ ದಂಪತಿ: ಶಿವನಪಾಳ್ಯದಲ್ಲಿ ಮಾನವೀಯತೆ
-
ದೇಶ7 hours agoಇರಾನ್ ಶಾಕ್: ಹೊಸ ಸರ್ವೋಚ್ಚ ನಾಯಕ ಗಂಭೀರ ಸ್ಥಿತಿ!
-
ದೇಶ8 hours ago4 ಗಂಟೆಗೂ ಬೋರ್ ಇಲ್ಲ: ಕೊಹ್ಲಿ ರಿವ್ಯೂ ವೈರಲ್
-
ದೇಶ8 hours agoಪಾಕಿಸ್ತಾನ ಬೆದರಿಕೆ: ಮೋದಿ ಮೌನಕ್ಕೆ ಮಮತಾ ಕಿಡಿ!
-
ದೇಶ7 hours agoBengaluru : ₹180ಗೆ ತೆಂಗಿನ ನೀರು? ಬೆಂಗಳೂರಲ್ಲಿ ಏನಾಗ್ತಿದೆ ನೋಡಿ!
-
ದೇಶ2 hours agoಮಮತಾ ಬ್ಯಾನರ್ಜಿ ಮತ್ತೆ ಸಿಎಂ ಆಗ್ತಾರಾ? ಸಮೀಕ್ಷೆ ಹೇಳೋದು ಏನು?
-
ಚುನಾವಣೆ9 hours agoಕೇರಳ ರಾಜಕೀಯದಲ್ಲಿ ಬಣಗಳ ಬಿರುಗಾಳಿ: ಯಾರು ಸಿಎಂ?
-
ದೇಶ8 hours agoPF ಖಾತೆದಾರರಿಗೆ ಅಲರ್ಟ್: DOE ಅಪ್ಡೇಟ್ ಇಲ್ಲದಿದ್ದರೆ ಹಣ ಸಿಗಲ್ಲ!
