karnataka
Bangalore Bandh : ಸೆ. 11 ಕ್ಕೆ ಖಾಸಗಿ ಸಾರಿಗೆಗಳ ಬಂದ್ – 32 ಸಂಘಟನೆಗಳ ಬೆಂಬಲ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2023/09/Bangalore-Bandh-ಸೆ.-11-ಕ್ಕೆ-ಖಾಸಗಿ-ಸಾರಿಗೆಗಳ-ಬಂದ್-–-32-ಸಂಘಟನೆಗಳ-ಬೆಂಬಲ.jpg&description=Bangalore Bandh : ಸೆ. 11 ಕ್ಕೆ ಖಾಸಗಿ ಸಾರಿಗೆಗಳ ಬಂದ್ – 32 ಸಂಘಟನೆಗಳ ಬೆಂಬಲ ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2023/09/Bangalore-Bandh-ಸೆ.-11-ಕ್ಕೆ-ಖಾಸಗಿ-ಸಾರಿಗೆಗಳ-ಬಂದ್-–-32-ಸಂಘಟನೆಗಳ-ಬೆಂಬಲ.jpg&description=Bangalore Bandh : ಸೆ. 11 ಕ್ಕೆ ಖಾಸಗಿ ಸಾರಿಗೆಗಳ ಬಂದ್ – 32 ಸಂಘಟನೆಗಳ ಬೆಂಬಲ ', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರದ ಹಿನ್ನೆಲೆಯಲ್ಲಿ ಸೆ. 11 ರಂದು ಬೆಂಗಳೂರು ಬಂದ್ ನಡೆಸಲು ಕರೆ ನೀಡುತ್ತಿರುವುದಾಗಿ ಖಾಸಗಿ ಸಾರಿಗೆಗಳ ಒಕ್ಕೂಟ ಘೋಷಿಸಿದೆ. ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಒಕ್ಕೂಟ, ಬಂದ್ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಕೋವಿಡ್ ಹೊಡೆತದಿಂದ ತತ್ತರಿಸಿದ್ದ ಖಾಸಗಿ ವಾಹನಗಳ ಸಾರಿಗೆ ಉದ್ಯಮ ತುಸು ಚೇತರಿಕೆ ಕಾಣಲಾರಂಭಿಸಿತ್ತು. ಅಷ್ಟರಲ್ಲೇ ಗೃಹಶಕ್ತಿ ಯೋಜನೆಯ ಮೂಲಕ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದ್ದು, ಒಟ್ಟಾರೆ ಆದಾಯದಲ್ಲಿ ಶೇ 45 ರಷ್ಟು ಕುಸಿತ ಕಂಡು ಬಂದಿದೆ ಎಂದು ಖಾಸಗಿ ವಾಹನಗಳ ಸಂಘಟನೆಗಳು ಅವಲತ್ತುಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಒಕ್ಕೂಟದ ನಾಮನಿರ್ದೇಶಿತ ಅಧ್ಯಕ್ಷ ನಟರಾಜ್ ಶರ್ಮಾ, ಸಚಿವ ರಾಮಲಿಂಗಾರೆಡ್ಡಿಯವರು ನಮ್ಮೊಡನೆ ಪ್ರತ್ಯೇಕವಾಗಿ ಸಭೆ ನಡೆಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಕೊಟ್ಟ ಅವಧಿಯ ಗಡುವು ಮುಗಿದು ಒಂದು ತಿಂಗಳಾದರೂ ಯಾವುದೇ ನೆರವು ಸಿಕ್ಕಿಲ್ಲ ಎಂದು ಆರೋಪಿಸಿದರು.
karnataka
ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ ಸಂದರ್ಭದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ
ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದ್ದನ್ನು ತಿಳಿಸುತ್ತೇವೆ ಎಂದು ಹೇಳಿದರು.
ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮವನ್ನು ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.
karnataka
ಫೀಲ್ಡ್ ನಲ್ಲಿ ಕೆಲಸ ಮಾಡೋರು ಬೇಕು- ಡಿಕೆಶಿ
ಬೆಂಗಳೂರು: ಡಿಸಿಎಂ ಡಿಕೆಶಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದು, ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ, ಈ ಮಧ್ಯೆ ದೆಹಲಿಗೆ ತೆರಳುವ ಮುನ್ನ ಫೀಲ್ಡ್ ನಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಮಾತ್ರ ಮುಂದೆ ಸ್ಧಾನಮಾನ, ನಮ್ಮ ಸುತ್ತಮುತ್ತ ಗಿರಿಗಿಟ್ಲೆ ಹೊಡೆಯುವರಿಂದ ಪ್ರಯೋಜನ ಇಲ್ಲ ಎಂದು ಗರಂ ಆಗಿದ್ದಾರೆ,
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ಲಿಸ್ಟ್ ಫೈನಲ್ ಆಗಿದೆ, ಯಾರು ಫೀಲ್ಡ್ ನಲ್ಲಿ ನಿಂತು ಪಕ್ಷ ಸಂಘಟನೆ ಮಾಡ್ತಾರೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ ಅಂಥವರಿಗೆ ಮೊದಲ ಆದ್ಯತೆ ನೀಡಲಾಗುವುದು, ಈ ಬಗ್ಗೆ ಎಐಸಿಸಿ ಅಧ್ಯಕ್ಷರು ಕೂಡ ಸ್ಪಷ್ಟ ಸಂದೇಶ ನೀಡಿದ್ದು, ಯಾರದ್ದೋ ಬೆಂಬಲಿಗರು ಅಥವಾ ಮಂತ್ರಿಗಳಿಂದ ಪ್ರಭಾವ ಬೀರುವವರನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದರು,
ರಾಜಸ್ಧಾನದಲ್ಲಿ ನಡೆದ ಜಲಶಕ್ತಿ ಸಮ್ಮೇಳನದಲ್ಲಿ ನಾನು ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾಪ ಮಾಡಿದ್ದೆ, ನೀರಾವರಿ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಿಳಿಸಿದ್ದೆ, ಕೆಲವು ಯೋಜನೆಗೆ ಘೋಷಣೆ ಮಾಡಿದ ಹಣ ಬಿಡುಗಡೆ ಮಾಡಿಲ್ಲ, ಮತ್ತು ಕೆಲವು ಯೋಜನೆಗಳಿಗೆ ಅನುಮತಿ ನೀಡಿಲ್ಲ, ಈ ವಿಚಾರಗಳನ್ನು ಪ್ರಸ್ತಾಪಿಸಿದಾಗ ಸಚಿವರು ರಾಜ್ಯದ ನೀರಾವರಿ ವಿಚಾರವಾಗಿ ಪ್ರತ್ಯೇಕ ಸಭೆ ಮಾಡುವುದಾಗಿ ಭರವಸೆ ನೀಡಿ ಸಮಯ ನಿಗದಿ ಮಾಡಿದ್ದರು, ಇವತ್ತು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರು ಸಭೆ ನಿಗದಿ ಮಾಡಿದ್ದರು, ಒಂದು ದಿನ ಮುಂಚಿತವಾಗಿ ನಮ್ಮ ಇಲಾಖೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿ ಪೂರ್ವಭಾವಿ ಸಭೆ ಮಾಡಲಾಗಿದೆ, ಈ ಸಭೆಯಲ್ಲಿ ನಮ್ಮ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು,
karnataka
KPCC ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು: ಎದುರಾಳಿಗಳಿಗೆ ‘ಡಿಕೆಶಿ’ ಚೆಕ್ ಮೆಟ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಚೆಕ್ ಮೆಟ್ ಕೊಟ್ಟಿದ್ದಾರೆ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ಇನ್ನು 8-10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳುವ ಮೂಲಕ ಪಕ್ಷದೊಳಗಿನ ಸ್ನೇಹಿತರು ಮತ್ತು ಶತ್ರುಗಳಿಗೆ ಸಂದೇಶ ರವಾನಿಸಿದ್ದಾರೆ.
ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವರು ಪ್ರಯತ್ನಿಸುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ನಡೆದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಡಿಕೆಶಿ, ಡಿಕೆಶಿ ಎಂದು ಘೋಷಣೆ ಕೂಗುತ್ತಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಗೆದ್ದು ನನ್ನ ನೇತೃತ್ವದಲ್ಲಿ ಪಕ್ಷ ಗೆದ್ದಾಗ ನೀವು ಇಂತಹ ಘೋಷಣೆಗಳನ್ನು ಕೂಗಬಹುದು. ನನ್ನ ಆರೋಗ್ಯ ಚೆನ್ನಾಗಿದ್ದು, ಇನ್ನು 8-10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದರು ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರೇ ಪಕ್ಷದೊಳಗೆ ರಣಕಹಳೆ ಮೊಳಗಿಸಬಲ್ಲ ಭವಿಷ್ಯದ ನಾಯಕ ಎಂದು ಬಿಂಬಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಇದು ಖಂಡಿತವಾಗಿಯೂ ಅವರ ಬೆಂಬಲಿಗರಲ್ಲಿ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸಲು ಬಯಸುವ ಎರಡನೇ ಸಾಲಿನ ನಾಯಕರಿಗೆ, ವಿಶೇಷವಾಗಿ ಮೊದಲ ಬಾರಿಯ ಶಾಸಕರಿಗೆ ಎಚ್ಚರಿಕೆಯ ಸಂದೇಶವನ್ನು ಕಳುಹಿಸುತ್ತದೆ. 62 ವರ್ಷದ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಂತೆ ಕ್ರಿಯಾಶೀಲರಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ಶಿವಕುಮಾರ್ ಪರ ಒಲವು ಹೊಂದಿರುವ ನಾಯಕರೊಬ್ಬರು ಹೇಳಿದರು.
ಯುವ ಪೀಳಿಗೆಯು ಯುವ ಮತ್ತು ಪ್ರಬಲ ನಾಯಕತ್ವವನ್ನು ನೋಡುತ್ತದೆ. ಶಿವಕುಮಾರ್ ಅವರು ಫಿಟ್ ಮತ್ತು ಫೈನ್ ಎಂದು ಹೇಳುತ್ತಿದ್ದಾರೆ. ಇದು ಅವರ ಮಹತ್ವಕಾಂಕ್ಷೆಯನ್ನು ಎತ್ತಿತೋರಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.
ಯುವ ಕಾಂಗ್ರೆಸ್ ಕರ್ನಾಟಕ ಘಟಕದ ನೂತನ ಅಧ್ಯಕ್ಷರಾಗಿ ತಮ್ಮ ನಿಷ್ಠಾವಂತ ಬೆಂಬಲಿಗ ಮಂಜುನಾಥ ಅವರನ್ನು ಗೆಲ್ಲಿಸುವುದರಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ನಾಯಕತ್ವವಿಲ್ಲದೆ ನಾವು ಚುನಾವಣೆಗೆ ಹೋಗಲು ಸಾಧ್ಯವಿಲ್ಲ. ಅವರ ನಾಯಕತ್ವ ನಮಗೆ ಶಾಶ್ವತವಾಗಿ ಬೇಕು. ಆದರೆ, ಆರೋಗ್ಯ ವಿಚಾರದಲ್ಲಿ ಡಿಕೆ ಶಿವಕುಮಾರ್ 8-10 ವರ್ಷ ಅಲ್ಲ. ಇನ್ನೂ 20 ವರ್ಷ ರಾಜಕೀಯ ಮಾಡಬಹುದು ಎಂದು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹೇಳಿದರು.
ಚುನಾವಣೆಗೆ ಇನ್ನೂ ಮೂರೂವರೆ ವರ್ಷ ಬಾಕಿ ಇದೆ. ಶಿವಕುಮಾರ್ ಸದ್ಯ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಅವರು ಹೇಳುವುದರಲ್ಲಿ ತಪ್ಪೇನಿಲ್ಲ. ಕೆಪಿಸಿಸಿ ಅಧ್ಯಕ್ಷರೇ ರಾಜ್ಯದಲ್ಲಿ ಪಕ್ಷದ ಪರಮೋಚ್ಚ ನಾಯಕರಾಗಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಅವರು ಹೇಳಿದ್ದು ಸ್ಥಳೀಯ ಸಂಸ್ಥೆಗಳು ಮತ್ತು ಬಿಬಿಎಂಪಿ ಚುನಾವಣೆಗಳ ಬಗ್ಗೆ ಇರಬೇಕು. ಅವರ ನಾಯಕತ್ವದಲ್ಲಿ ನಾವು ಈ ಚುನಾವಣೆಗಳನ್ನು ಎದುರಿಸುತ್ತೇವೆ ಎಂದು ಅವರು ಸಮರ್ಥಿಸಿಕೊಂಡರು. ಶಿವಕುಮಾರ್ ಅವರ ಹೇಳಿಕೆ ಸಮರ್ಥಿಸಿಕೊಂಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. “ಅದರಲ್ಲಿ ತಪ್ಪೇನು? ಏನಾದ್ರೂ ತಪ್ಪು ಕಂಡು ಹಿಡಿದಿದ್ದೀರಾ” ಎಂದು ಸುದ್ದಿಗಾರರನ್ನು ಕೇಳಿದರು.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ