ಬಿಬಿಎಂಪಿ
GANESHA FESTIVAL : ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ತಿದ್ದೀರಾ? – ಹಾಗಾದ್ರೆ ಇದನ್ನೊಮ್ಮೆ ಓದಿ
ಬೆಂಗಳೂರು : ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಸಿದ್ದತೆ ನಡೆಸಿದ್ದು, ಶುಕ್ರವಾರ ಆಯುಕ್ತರ ನೇತೃತ್ವದಲ್ಲಿ ವಿವಿಧ ಇಲಾಖೆಗಳೊಡನೆ ಜಂಟಿ ಸಭೆ ನಡೆಸಲಾಯಿತು. ಗಣೇಶ ಮೂರ್ತಿ ವಿಸರ್ಜನೆಗೆ ಸ್ಥಳಗಳ ನಿಗದಿ,ಗಣೇಶ ಉತ್ಸವಗಳಿಗೆ ನಿಯಮಾವಳಿಗಳ ಬಗ್ಗೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.
ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯಲು ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಬಿಬಿಎಂಪಿ ಸಿದ್ದತೆ ನಡೆಸಲಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್ ಮತ್ತು ಬ್ಯಾನರ್ ಅಳವಡಿಕೆಗೂ ಸಹ ಬಿಬಿಎಂಪಿ ನಿಷೇಧ ಹೇರಿದೆ.
ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಕೃತಕ ಬಣ್ಣಗಳಿಂದ ತಯಾರಿಸಿರುವ ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಬಿಬಿಎಂಪಿ ಮನವಿ ಮಾಡಿಕೊಂಡಿದೆ.
ಗಣೇಶ ವಿಸರ್ಜನೆ ನಡೆಸುವ ಸ್ಥಳದಲ್ಲಿ ಯಾವುದೇ ಅವಘಡಗಳು ನಡೆಯದಂತೆ ಮುಂಜಾಗೃತೆ ವಹಿಸಲಾಗಿದ್ದು, ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್ಗಳ ವ್ಯವಸ್ಥೆ, ಕ್ರೇನ್ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
ದೇಶ
ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ
ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.
ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.
ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.
ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
ಚುನಾವಣೆ
ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.
Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.
ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.
ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.
ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.
-
ದೇಶ15 hours agoSakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
-
ದೇಶ9 hours agoಅಲಿ ಖಮೇನಿ ಅಂತಿಮಯಾತ್ರೆ ಆರಂಭ: ತೆಹ್ರಾನ್ ಬೀದಿಗಳಲ್ಲಿ ಲಕ್ಷಾಂತರ ಜನರ ಅಂತಿಮ ನಮನ
-
ದೇಶ12 hours agoಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ
-
ದೇಶ13 hours agoರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
-
ದೇಶ11 hours ago“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್
-
ದೇಶ10 hours ago‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್
-
ದೇಶ13 hours agoPoK ಪ್ರತಿಭಟನೆ ತೀವ್ರ: ‘ಗಡಿ ತೆರೆಯಿರಿ, ಮಾನವೀಯ ನೆರವು ನೀಡಿ’ ಎಂದು ಭಾರತದತ್ತ ಮೊರೆ
-
ದೇಶ10 hours agoಚೀನಾ-ಪಾಕ್ ಜಲಾಂತರ್ಗಾಮಿಗಳಿಗೆ ಭಾರತದ ಹೈಟೆಕ್ ಬ್ರಹ್ಮಾಸ್ತ್ರ! ಸಮುದ್ರದಾಳದಲ್ಲಿ ‘ಸೀಕ್ರೆಟ್ ಸೆನ್ಸಾರ್ ನೆಟ್ವರ್ಕ್’
