Connect with us

ರಾಜಕೀಯ

ಸಿಎಂ ಯಾವತ್ತಿಗೂ ಟಗರೇ, ಭಯ ಬೀಳೋ ಪ್ರಶ್ನೆನೇ ಬರಲ್ಲ: ಜಮೀರ್

ಹುಬ್ಬಳ್ಳಿ: ಸಿಎಂ ಟಗರು. ಟಗರು ಯಾವತ್ತಿಗೂ ಟಗರೇ. ಭಯ ಬೀಳೋ ಪ್ರಶ್ನೆನೇ ಬರಲ್ಲ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಲಿ ಇದ್ದಂತೆ. ಸಿದ್ದರಾಮಯ್ಯ ಜೊತೆ ಹೈಕಮಾಂಡ್, ಶಾಸಕರು, ರಾಜ್ಯದ ಜನ ಇದ್ದಾರೆ. ಸಿದ್ದರಾಮಯ್ಯ ಬಂದು ನಿಂತರೆ ಸಾಕು, ಸಾವಿರಾರು ಜನ ಬಂದು ಕೂರುತ್ತಾರೆ. ಬಿಜೆಪಿ ಅವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಮುಡಾ ಚಲೋ ಮಾಡಲಿ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರ ಬಗ್ಗೆ ಜುಲೈನಲ್ಲಿ ಖಾಸಗಿ ವ್ಯಕ್ತಿ ದೂರು ನೀಡುತ್ತಾರೆ. ಅದೇ ದಿನ ಪ್ರಾಸಿಕ್ಯೂಷನ್‌ಗೆ ಕೊಡುತ್ತಾರೆ. ಅದಕ್ಕಿಂತ ಮುಂಚೆ 8 ತಿಂಗಳ ಹಿಂದೆಯೇ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಕೇಳುತ್ತಾರೆ, ಆದ್ರೆ ಕೊಡಲ್ಲ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ, ಜನಾರ್ದನ ರೆಡ್ಡಿಗೆ ಕೊಟ್ಟಿಲ್ಲ. ಇದು ಯಾವ ನ್ಯಾಯ ಸರ್ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಹಿಂದುಳಿದ ನಾಯಕನನ್ನು ಸಹಿಸೋಕೆ ಆಗುತ್ತಿಲ್ಲ. ದೇವರಾಜ ಅರಸು ನಂತರ ಹಿಂದುಳಿದವರು ಯಾರೂ ಮುಖ್ಯಮಂತ್ರಿ ಆಗಿಲ್ಲ. ಇವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಇವರ ಜನಪ್ರಿಯತೆ ಬಿಜೆಪಿ ಅವರಿಗೆ ಸಹಿಸೋಕೆ ಆಗುತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಟ್ಟರೆ ಕಾಂಗ್ರೆಸ್ ತೆಗಿಬಹುದು ಅಂದುಕೊಂಡಿದ್ದಾರೆ. ಬಿಜೆಪಿ ಅವರಿಗೆ ಹೊಟ್ಟೆಕಿಚ್ಚು ಇದೆ. ಬೇರೆ ಅವರು ದುಡ್ಡು ಖರ್ಚು ಮಾಡಿ ಜನರನ್ನು ಕರಿಸಬೇಕು. ಆದರೆ ಸಿದ್ದರಾಮಯ್ಯ ಬಂದು ನಿಂತರೆ ಸಾವಿರಾರು ಜನ ಬರುತ್ತಾರೆ. ನಮ್ಮ ನಾಯಕ ಸಿದ್ದರಾಮಯ್ಯ ಅವರು ಎಂದರು.

ದೇಶ

“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.

ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.

ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

ದೇಶ

ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.

ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.

ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending