Connect with us

ರಾಜ್ಯ

Horoscope Today: ಓಡಾಟದ ದಿನವಾಗಿರುತ್ತದೆ, ಹಳೆಯ ಸ್ನೇಹಿತರ ಭೇಟಿ, ಖರ್ಚಿಗೆ ಮಿತಿ ಇರಲಿ; ಸೆಪ್ಟೆಂಬರ್ 4ರ ದಿನಭವಿಷ್ಯ

Today Horoscope: ಇಂದು (ಸೆಪ್ಟೆಂಬರ್‌ 4ರ ಬುಧವಾರ) ಹಲವು ರಾಶಿಯವರಿಗೆ ಶುಭಫಲಗಳಿವೆ. ಸಂಗಾತಿಯೊಂದಿಗೆ ಖುಷಿಯ ಕ್ಷಣಗಳನ್ನು ಕಳೆಯುವಿರಿ. ದ್ವಾದಶ ರಾಶಿಗಳ ಇಂದಿನ ಭವಿಷ್ಯ ಇಲ್ಲಿದೆ. ಓಡಾಟದ ದಿನವಾಗಿರುತ್ತದೆ, ಹಳೆಯ ಸ್ನೇಹಿತರ ಭೇಟಿ, ಖರ್ಚಿಗೆ ಮಿತಿ ಇರಲಿ. ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ.

ಮೇಷ ರಾಶಿ

ನಿಮ್ಮ ಮಾತಿನಲ್ಲಿ ಮಾಧುರ್ಯ ಇರುತ್ತದೆ. ಉದ್ಯೋಗದಲ್ಲಿರುವವರಿಗೆ ಉತ್ತಮ ದಿನ. ಕೆಲಸದಲ್ಲಿ ಅಧಿಕಾರಿಗಳ ಸಹಕಾರ ಸಿಗಲಿದೆ. ಪ್ರಗತಿಯ ಹಾದಿ ಸುಗಮವಾಗಲಿದೆ. ಕೆಲಸದ ಸ್ಥಳದಲ್ಲಿ ಬದಲಾವಣೆಯೊಂದಿಗೆ, ನೀವು ಬೇರೆ ಸ್ಥಳಕ್ಕೆ ಹೋಗಬಹುದು. ಕುಟುಂಬದ ಬೆಂಬಲ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಒಟ್ಟಾರೆ ಇಂದು ನಿಮಗೆ ಧನಾತ್ಮಕ ದಿನ.

ವೃಷಭ ರಾಶಿ

 ಇಂದು ನೀವು ಸ್ವಯಂ ನಿಯಂತ್ರಣ ಹೊಂದಿರಬೇಕು. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಬೇರೆಯವರ ಜೊತೆ ಮಾತನಾಡುವಾಗ ಸಮಾಧಾನದಿಂದಿರಿ. ನೀವು ಕೆಲಸದಲ್ಲಿ ತೊಂದರೆಗಳನ್ನು ಎದುರಿಸಬಹುದು. ಓಡಾಟ ಹೆಚ್ಚಿರುತ್ತದೆ. ನೀವು ಕೆಲಸದಲ್ಲಿ ಹೆಚ್ಚುವರಿ ಸಮಯವನ್ನು ಕಳೆಯಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆದರೆ, ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.

ಮಿಥುನ ರಾಶಿ

ಇಂದು ನೀವು ಅನಗತ್ಯ ಕೋಪ ಮತ್ತು ಜಗಳವನ್ನು ತಪ್ಪಿಸಬೇಕು. ಆರೋಗ್ಯ ಉತ್ತಮವಾಗಿರಲಿದೆ. ವ್ಯಾಪಾರದ ಪರಿಸ್ಥಿತಿಗಳು ಸಾಧಾರಣವಾಗಿ ಕಾಣುತ್ತಿವೆ, ಆದರೂ ಸಂಜೆಯ ಹೊತ್ತಿಗೆ ವ್ಯಾಪಾರ–ವ್ಯವಹಾರದಿಂದ ಲಾಭವಾಗಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಅಪಾಯವನ್ನು ತೆಗೆದುಕೊಳ್ಳುವುದನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.

ಕಟಕ ರಾಶಿ

ಇಂದು ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ಖರ್ಚು ಹೆಚ್ಚಾಗಲಿದೆ. ಶೈಕ್ಷಣಿಕ ಕೆಲಸದ ಬಗ್ಗೆ ಎಚ್ಚರವಿರಲಿ. ನೀವು ಹಳೆಯ ಸ್ನೇಹಿತರನ್ನು ಭೇಟಿಯಾಗುವ ಅವಕಾಶವನ್ನು ಹೊಂದಿರಬಹುದು. ಸಂಗಾತಿಯಿಂದ ಬೆಂಬಲ ಪಡೆಯುತ್ತೀರಿ. ವ್ಯಾಪಾರದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ. ಅನಗತ್ಯ ಖರ್ಚುಗಳಿಂದ ದೂರವಿರಿ.

ಸಿಂಹ ರಾಶಿ

ಇಂದು ನೀವು ಶಾಂತವಾಗಿರಬೇಕು. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಂದೆಯಿಂದ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಸ್ಥಳ ಬದಲಾವಣೆಯಾಗುವ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲ ಪಡೆಯುತ್ತೀರಿ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ.

ಕನ್ಯಾ ರಾಶಿ

 ಇಂದು ನೀವು ಆರ್ಥಿಕ ಲಾಭದಿಂದ ಸಂತೋಷವನ್ನು ಅನುಭವಿಸುವಿರಿ. ಸ್ನೇಹಿತರೊಬ್ಬರು ಬರಬಹುದು. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗುವ ಅವಕಾಶಗಳು ಬರಬಹುದು. ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯೊಂದಿಗೆ ನಡೆಯುತ್ತಿರುವ ವಿವಾದವನ್ನು ಪರಿಹರಿಸಲಾಗುವುದು. ಪ್ರಯಾಣದ ಸಾಧ್ಯತೆಗಳಿವೆ.

ತುಲಾ ರಾಶಿ

ವ್ಯವಹಾರದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಕುಟುಂಬದಿಂದ ದೂರಾಗಿ ಬೇರೆ ಸ್ಥಳಕ್ಕೆ ಹೋಗಬಹುದು. ಜೀವನ ಅಸ್ತವ್ಯಸ್ತವಾಗುತ್ತದೆ. ಸ್ವಯಂ ನಿಯಂತ್ರಣ ಸಾಧಿಸಿಕೊಳ್ಳಿ. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಆದಾಯಕಡಿಮೆಯಾಗಿ ಮತ್ತು ಖರ್ಚು ಹೆಚ್ಚಾಗುವ ಪರಿಸ್ಥಿತಿ ಇರಬಹುದು. ಇಂದು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಶ್ಚಿಕ ರಾಶಿ

ಹಿರಿಯ ವ್ಯಕ್ತಿಯಿಂದ ಹಣ ಪಡೆಯುವ ಸಾಧ್ಯತೆ. ಮಾನಸಿಕ ನೆಮ್ಮದಿ ಇರುತ್ತದೆ. ಪೂರ್ಣ ವಿಶ್ವಾಸ ಇರುತ್ತದೆ. ಧಾರ್ಮಿಕ ಸಂಗೀತದ ಬಗ್ಗೆ ಆಸಕ್ತಿ ಹೆಚ್ಚಾಗಬಹುದು. ಶೈಕ್ಷಣಿಕ ಕೆಲಸದಲ್ಲಿ ತೊಂದರೆ ಉಂಟಾಗಬಹುದು. ಎಚ್ಚರವಿರಲಿ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಪೂರ್ವಿಕರ ಆಸ್ತಿ ಸಿಗುವ ಸಾಧ್ಯತೆ ಇದೆ. ನ್ಯಾಯಾಲಯದಲ್ಲಿ ಜಯವನ್ನು ಪಡೆಯಬಹುದು.

ಧನು ರಾಶಿ

 ಇಂದು ನೀವು ಆತ್ಮವಿಶ್ವಾಸದಿಂದ ತುಂಬಿರುತ್ತೀರಿ. ಆದರೆ ಮನಸ್ಸು ಕೂಡ ತೊಂದರೆಗೊಳಗಾಗಬಹುದು. ತಾಳ್ಮೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಕೆಲಸದಲ್ಲಿ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳಿ. ಕುಟುಂಬ ಸಮೇತ ಧಾರ್ಮಿಕ ಸ್ಥಳಗಳಿಗೆ ಹೋಗಬಹುದು. ಓಡಾಟ ಹೆಚ್ಚಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. ಉದ್ಯೋಗದಲ್ಲಿ ಸ್ಥಳ ಬದಲಾವಣೆಯಾಗುವ ಸಾಧ್ಯತೆಗಳಿವೆ. ಆದಾಯ ಹೆಚ್ಚಲಿದೆ.

ಮಕರ ರಾಶಿ

ಮನಸ್ಸಿನಲ್ಲಿ ಏರಿಳಿತಗಳಿರುತ್ತವೆ. ಉದ್ಯೋಗ ಪರೀಕ್ಷೆಗಳು ಮತ್ತು ಸಂದರ್ಶನಗಳು ಇತ್ಯಾದಿಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಗೌರವವನ್ನೂ ಗಳಿಸುವಿರಿ. ತಾಳ್ಮೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಕೆಲಸದ ವ್ಯಾಪ್ತಿ ಹೆಚ್ಚಾಗಬಹುದು. ನಿಮ್ಮ ಜೀವನ ಸಂಗಾತಿ ನಿಮ್ಮೊಂದಿಗೆ ಇರುತ್ತಾರೆ. ಆದರೆ, ಇಂದು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

ಕುಂಭ ರಾಶಿ

ಮನಸ್ಸಿನಲ್ಲಿ ನಿರಾಶೆ ಮತ್ತು ಅತೃಪ್ತಿ ಇರುತ್ತದೆ. ಉದ್ಯೋಗ ಬದಲಾವಣೆಗೆ ಅವಕಾಶವಿರಬಹುದು. ಕೆಲಸದ ವ್ಯಾಪ್ತಿ ಹೆಚ್ಚಾಗಲಿದೆ. ಆರೋಗ್ಯದ ಕಡೆ ಗಮನ ಕೊಡಿ. ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗುವ ಸಂಭವವಿದೆ. ನೀವು ಕುಟುಂಬದಿಂದ ದೂರ ಉಳಿಯಬೇಕಾಗಬಹುದು. ಸ್ನೇಹಿತರ ಬೆಂಬಲ ಸಿಗಲಿದೆ.

ಮೀನ ರಾಶಿ

ಇಂದು ತಾಳ್ಮೆಯ ಕೊರತೆ ಇರುತ್ತದೆ. ಸಂಗಾತಿಯಿಂದ ಬೆಂಬಲವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ಬಟ್ಟೆಗಳನ್ನು ಉಡುಗೊರೆಯಾಗಿ ನೀಡಬಹುದು. ಸ್ವಯಂ ನಿಯಂತ್ರಣದಲ್ಲಿರಿ. ಇಂದು ನಿಮ್ಮ ಕೋಪವನ್ನು ಕಳೆದುಕೊಳ್ಳುವುದನ್ನು ತಪ್ಪಿಸಿ. ಉತ್ತಮ ಸ್ಥಿತಿಯಲ್ಲಿರಿ. ಉದ್ಯೋಗದಲ್ಲಿ ಸ್ಥಳ ಬದಲಾವಣೆಯಾಗುವ ಸಾಧ್ಯತೆಗಳಿವೆ. ಆದಾಯ ಹೆಚ್ಚಲಿದೆ. ಇಂದು ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡಬಹುದು.

ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ಹಿಂದೂಸ್ತಾನ್ ಟೈಮ್ಸ್ ಕನ್ನಡ” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

ದೇಶ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರ ಅಂಜನಾದ್ರಿ ಬೆಟ್ಟ ಭೇಟಿ – ಆಂಜನೇಯ ದರ್ಶನ ಪಡೆದು ವಿಶೇಷ ಪೂಜೆ

ಕೊಪ್ಪಳ, ಆಗಸ್ಟ್ 7 – ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಕುಟುಂಬದ ಸದಸ್ಯರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಾಯುಪುತ್ರ ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲ್ಪಡುವ ಈ ಪವಿತ್ರ ಸ್ಥಳದಲ್ಲಿ ಅವರು 575 ಮೆಟ್ಟಿಲುಗಳನ್ನು 30 ನಿಮಿಷಗಳಲ್ಲಿ ಏರಿ ಭಕ್ತಿಯಿಂದ ದರ್ಶನ ಪಡೆದರು.


🌄 ಅಂಜನಾದ್ರಿ ಬೆಟ್ಟ – ಭಕ್ತರ ಆಸ್ಥೆಯ ಗಗನಚುಂಬಿ ಸಂಕೇತ

ಅಂಜನಾದ್ರಿ ಬೆಟ್ಟವು ಹನುಮಂತನ ಜನ್ಮಸ್ಥಳ ಎಂಬ ನಂಬಿಕೆಯಿಂದ ಹೆಸರಾಗಿದ್ದು, ಪ್ರತಿದಿನ ನೂರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಶ್ರೀ ರಾಮ, ಸೀತಾ ದೇವಿಗಳ ಮೂರ್ತಿಗಳೂ ಇಲ್ಲಿ ಪೂಜಿಸಲ್ಪಡುತ್ತವೆ. ಬೆಟ್ಟದ ಶಿಖರದಿಂದ ತುಂಗಭದ್ರಾ ನದಿಯ ನೋಟ, ಸೂರ್ಯಾಸ್ತದ ಸೌಂದರ್ಯ ಮತ್ತು ಹಂಪಿಯ ಇತಿಹಾಸದ ಅವಶೇಷಗಳು ಮನ ಮೋಹಿಸುತ್ತವೆ.


🛕 ಅಂಜನಾದ್ರಿ ಬೆಟ್ಟದ ಪ್ರಮುಖ ಅಂಶಗಳು:

  • 575 ಮೆಟ್ಟಿಲುಗಳನ್ನು ಏರಿ ಸ್ವಾಮಿದರ್ಶನ
  • ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸನ್ಮಾನ
  • ದೇವಾಲಯದ ಆಂತರಿಕ ಶ್ರದ್ಧಾ ಭರವಸೆಯ ಸ್ಥಳ
  • ಹಂಪಿಯಿಂದ ನದಿ ದಾಟಿ ಬೋಟ್ ಮೂಲಕ ಪ್ರವೇಶದ ಅನುಕೂಲ
  • ರೈಲು ಮಾರ್ಗ: ಕೊಪ್ಪಳ ಅಥವಾ ಮುನಿರಾಬಾದ್‌ ಮೂಲಕ
  • ರಸ್ತೆ ಸಂಪರ್ಕ ಉತ್ತಮ, ವಿಮಾನ ಸಂಪರ್ಕ ಇಲ್ಲ

📜 ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ಸರ್ಕಾರದ ದೃಷ್ಟಿಕೋನ

ಹನುಮ ಮಾಲೆ ಸಂದರ್ಭದಲ್ಲಿ ಸಾವಿರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಾಗ್ದಾನ ನೀಡಿದ್ದರು. ರಾಜ್ಯ ಸರಕಾರ ಕೂಡ ಈ ಸ್ಥಳವೇ ಆಂಜನೇಯನ ಜನ್ಮಭೂಮಿ ಎಂದು ಧರ್ಮಗ್ರಂಥಗಳ ಆಧಾರದ ಮೇಲೆ ದೃಢಪಡಿಸಿದೆ.

Continue Reading

Trending