ರಾಜಕೀಯ
ಶಾಲೆಗಾಗಿ ಪಡೆದ ಸಿಎ ನಿವೇಶನದಲ್ಲಿ ‘ಧಮ್ ಬಿರಿಯಾನಿ ಹೋಟೆಲ್’: ಛಲವಾದಿ ನಾರಾಯಣಸ್ವಾಮಿ ವಿರುದ್ಧ ‘ಕೈ’ ಪಡೆ ದೂರು, ಸದಸ್ಯತ್ವ ಅನರ್ಹತೆಗೆ ಆಗ್ರಹ

ಬೆಂಗಳೂರು: ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ವಿಧಾನಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್‌ನ ಹಲವು ಸದಸ್ಯರು, ನಾಯಕರು ಮಂಗಳವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ಸಲ್ಲಿಸಿದರು. ಇದೇ ವೇಳೆ ಆರೋಪಕ್ಕೆ ಸಂಬಂಧಿಸಿದಂತೆ ಅಗತ್ಯ ಪುರಾವೆಗಳನ್ನು ಒದಗಿಸಿದ್ದಾರೆ.
2002 ರ ನವೆಂಬರ್ 28 ರಿಂದ 2004 ರ ಮೇ 5 ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂ ಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್ ಆ್ಯಂಡ್ ಎಜುಕೇಷನ್ ಟ್ರಸ್ಟ್‌ಗೆ ಬಳಸಿಕೊಂಡಿದ್ದು, ಶಾಲೆ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ.
ಈ ಹಗರಣವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 13, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 316, 318ರ ಅಡಿ ತನಿಖೆ ನಡೆಸಲು ಅನುಮತಿ ನೀಡಬೇಕು ಹಾಗೂ ನಾರಾಯಣಸ್ವಾಮಿಯವರ ವಿಧಾನಪರಿಷತ್‌ನ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಎಂ.ಆರ್.ಸೀತಾರಾಂ, ಮಂಜುನಾಥ್ ಭಂಡಾರಿ, ಎಸ್.ರವಿ ವಸಂತಕುಮಾರ್, ಅನಿಲ್‌ಕುಮಾರ್, ದಿನೇಶ್‌ಗೂಳಿಗೌಡ, ಪುಟ್ಟಣ್ಣ, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಸೇರಿದಂತೆ ಹಲವರು ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು.
ಈ ಬಗ್ಗೆ ಮಾತನಾಡಿದ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಅವರು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯನ್ನು ವಜಾ ಮಾಡಬೇಕು. ಹೌಸಿಂಗ್ ಬೋರ್ಡ್ ನಿರ್ದೇಶಕರಾಗಿದ್ದಾಗ ಸಿಎ ಸೈಟ್ ಪಡೆದುಕೊಂಡಿದ್ದರು. ಆದರ್ಶ ಸ್ಕೂಲ್ ಎಜುಕೇಶನ್ ಗ್ರೂಪ್ನ ಚೇರಮನ್ ಆಗಿದ್ದರು ಛಲವಾದಿ. ಇದೀಗ ಸಿಎ ಸೈಟ್ ಪಡೆದ ಜಾಗದಲ್ಲಿ ಆನಂದ್ ಧಂ ಬಿರಿಯಾನಿ ನಡೆಯುತ್ತಿದೆ. ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್ನಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ ಎಂದರು.
ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕನ ಸ್ಥಾನದ ಗಾಂಭೀರ್ಯತೆಗೆ ಧಕ್ಕೆ ತಂದಿದ್ದಾರೆ. ಕಳಂಕಿತರು ಆ ಸ್ಥಾನದಲ್ಲಿ ಇರಬಾರದು. 2002-2005ರ ವರೆಗೆ ಕರ್ನಾಟಕ ಹೌಸಿಂಗ್ ಬೋರ್ಡ್ ನಿರ್ದೇಶಕ ಆಗಿರ್ತಾರೆ. ಅವರ ಸ್ಥಾನ ದುರುಪಯೋಗ ಮಾಡಿಕೊಂಡು ಹೌಸಿಂಗ್ ಬೋರ್ಡ್ಗೆ ಭೂಸ್ವಾಧೀನ ಆಗಿದ್ದ ಲ್ಯಾಂಡ್ ಅನ್ನು ತಾವು ಪಡೆಯುತ್ತಾರೆ. ಸ್ಟ್ರೇ ಸೈಟ್ ಬಿಡುಗಡೆ ಮಾಡಿ ಅಂತ ಮೂಲ ಜಮೀನು ಮಾಲೀಕರು ಹೌಸಿಂಗ್ ಬೋರ್ಡ್ಗೆ ಅರ್ಜಿ ಹಾಕ್ತಾರೆ. ಆಗ ಬೋರ್ಡ್ ನಿರ್ದೇಶಕರಾಗಿದ್ದ ಛಲವಾದಿ ನಾರಾಯಣಸ್ವಾಮಿ 2004 ರಲ್ಲಿ ತಮಗೇ ಆ ಸಿಎ ಸೈಟ್ ನೀಡಿ ಎಂದು ಅರ್ಜಿ ಹಾಕಿಕೊಳ್ತಾರೆ. ತಾವೇ ನಿರ್ದೇಶಕರಾಗಿದ್ದರೂ ಕೂಡ ಕಾನೂನು ಬಾಹಿರವಾಗಿ ಇದನ್ನು ಪಡೆಯುತ್ತಾರೆ. ಆದರ್ಶ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷರಾಗಿದ್ದುಕೊಂಡು ಸಿಎ ಸೈಟ್ ಪಡೆಯುತ್ತಾರೆ ಎಂದು ಹೇಳಿದರು.
ಐದು ವರ್ಷದಲ್ಲಿ ಶಾಲೆಯ ಕಟ್ಟಡ ಕಟ್ಟಬೇಕು ಎಂಬ ಕಂಡೀಷನ್ ಮೇಲೆ ಹೌಸಿಂಗ್ ಬೋರ್ಡ್ ನಿವೇಶನ ನೀಡ್ತಾರೆ. ಇದೇ ನಿವೇಶನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಶಾಲೆ ಕಟ್ಟುವ ಬದಲು ಟೆಲಿ ಕಮ್ಯುನಿಕೇಷನ್ ಆ್ಯಂಡ್ ಪಬ್ಲಿಕ್ ಸರ್ವೀಸ್ ಕಂಪನಿ ಹೆಸರಿಗೆ ಈ ಜಾಗವನ್ನು ಮಾರ್ಪಾಡು ಮಾಡ್ತಾರೆ. ಸೇಲ್ ಡೀಡ್ ಆಗುವ ಮೊದಲೇ ಈ ರೀತಿ ಮಾರ್ಪಾಡು ಮಾಡಿರುತ್ತಾರೆ. ಯಾವಾಗ ಟೆಲಿ ಕಮ್ಯುನಿಕೇಷನ್ನಲ್ಲಿ ಛಲವಾದಿ ನಾರಾಯಣಸ್ವಾಮಿ ಎಕ್ಸ್ಪರ್ಟ್ ಆದರೋ ಅವರೇ ಹೇಳಬೇಕು ಎಂದು ಲೇವಡಿ ಮಾಡಿದರು
ರಾಜಕೀಯ
DK Shivakumar ಸಿಎಂ ಆಗಬೇಕು: ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷ ಆಗ್ರಹ

ರಾಮನಗರ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ ನಾಯಕರು. ಅವರ ಶ್ರಮ ಹಾಗೂ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದು, ಅವರು ಕೂಡ ನಮ್ಮ ಜನರು. ಅವರಿಗೆ ಗೌರವ ಸಿಗಬೇಕು ಎಂದು ಹೇಳುವುದು ನನ್ನ ಹಕ್ಕು,” ಎಂದು ಸ್ಪಷ್ಟಪಡಿಸಿದರು.
“ನಾನು ಈಗಲೂ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. DK Shivakumar ಸಿಎಂ ಆಗಬೇಕು ಎಂಬ ಮಾತು ಹಿಂದೆ ಹೇಳಿದ್ದೆ, ಈಗಲೂ ನಿಂತಿದ್ದೇನೆ,” ಎಂದರು.
ಆ.8ರಂದು ಕಾಂಗ್ರೆಸ್ ಹೋರಾಟ:
ಆಗಸ್ಟ್ 8ರಂದು ನಡೆಯಲಿರುವ ಚುನಾವಣಾ ಅಕ್ರಮದ ವಿರುದ್ಧದ ಕಾಂಗ್ರೆಸ್ ಹೋರಾಟ ಕುರಿತು ಮಾತನಾಡಿದ ಅವರು, “ಈ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. ರಾಷ್ಟ್ರೀಯ ನಾಯಕರು ನೇತೃತ್ವ ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ 20,000 ಮಂದಿ ಪಾಲ್ಗೊಳ್ಳುತ್ತಾರೆ,” ಎಂದು ಹೇಳಿದರು.
ಇವಿಎಂ ಅಕ್ರಮ ಕುರಿತು ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, “ನಮ್ಮ ರಾಷ್ಟ್ರ ನಾಯಕರು ಎಲ್ಲಾ ವಿವರಗಳನ್ನು ಬಹಿರಂಗಪಡಿಸುತ್ತಾರೆ,” ಎಂದು ತಿಳಿಸಿದರು.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ