ಬೆಂಗಳೂರು
ಕೋವಿಡ್ ಅಕ್ರಮದ ಮಧ್ಯಂತರ ವರದಿ ಅಧ್ಯಯನಕ್ಕಾಗಿ ಸಿಎಸ್ ನೇತೃತ್ವದ ಅಧಿಕಾರಿಗಳ ತಂಡ ರಚನೆಗೆ ಸಂಪುಟ ಸಭೆ ತೀರ್ಮಾನ – A team of officers headed by CS
ಬೆಂಗಳೂರು: ಕೋವಿಡ್ ಅಕ್ರಮ ಬಗ್ಗೆ ನ್ಯಾ. ಡಿ ಕುನ್ಹಾ ನೀಡಿರುವ ವರದಿಯನ್ನು ಅಧ್ಯಯನ ಮಾಡಿ, ಆದಷ್ಟು ಬೇಗ ಸಚಿವ ಸಂಪುಟಕ್ಕೆ ವರದಿ ಮಂಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡ ರಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೋವಿಡ್ ಅಕ್ರಮ ಸಂಬಂಧ ನ್ಯಾ. ಡಿ ಕುನ್ಹಾ ವರದಿ ಬಗ್ಗೆ ವ್ಯಾಪಕ ಚರ್ಚೆ ನಡೆಸಲಾಯಿತು. ಕುನ್ಹಾ ವರದಿಯಲ್ಲಿ ಕೋವಿಡ್ ನಲ್ಲಿ ನೂರಾರು ಕೋಟಿ ಅಕ್ರಮ ಆಗಿರುವ ಬಗ್ಗೆ ಕೆಲ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರದಿಯಲ್ಲಿ ಕಡತ ಮಿಸ್ಸಿಂಗ್ ಆಗಿರುವ ಬಗ್ಗೆನೂ ಪ್ರಸ್ತಾಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ, ಹಣಕಾಸು ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡಕ್ಕೆ ಪರಿಶೀಲಿಸಿ ಒಂದು ತಿಂಗಳ ಒಳಗೆ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದರು.
ಮಹದಾಯಿ ಬಗ್ಗೆ ಪ್ರಧಾನಿ ಬಳಿ ನಿಯೋಗ ಕೊಂಡೊಯ್ಯಲು ತೀರ್ಮಾನ: ಮಹದಾಯಿ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಬರುವ ನಿರೀಕ್ಷೆ ಇತ್ತು. ಆದರೆ ವನ್ಯಜೀವಿ ಮಂಡಳಿ ತನ್ನ 79ನೇ ಸಭೆಯಲ್ಲಿ ವಿಷಯವನ್ನು ಮುಂದೂಡಿದೆ. ಆ ಮೂಲಕ ನಮಗೆ ನಿರಾಶೆಯಾಗಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಆದರೆ ಗೋವಾ-ತಮ್ನೂರು 400 ಕೆ.ವಿ. ವಿದ್ಯುತ್ ಮಾರ್ಗ ಯೋಜನೆಗೆ ಮಂಡಳಿ ಒಪ್ಪಿಗೆ ನೀಡಿದೆ. ಆದರೆ ಮಹದಾಯಿ ಪ್ರಸ್ತಾವನೆಯನ್ನು ಮುಂದೂಡಿದೆ. 400 ಕೆ.ವಿ. ವಿದ್ಯುತ್ ಮಾರ್ಗಕ್ಕಾಗಿ 435 ಎಕರೆ ಅರಣ್ಯ ಭೂಮಿ ಬಳಕೆಯಾಗುತ್ತದೆ. ಆದರೂ ಸಮ್ಮತಿ ನೀಡಲಾಗಿದೆ. ಸಂಪುಟ ಸಭೆ ಈ ಬಗ್ಗೆ ಗಂಭೀರವಾಗಿ ಚರ್ಚಿಸಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಸರ್ವ ಪಕ್ಷ ಸಭೆ ನಡೆಸಿ, ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕರೆದೊಯ್ಯಲು ತೀರ್ಮಾನಿಸಲಾಗಿದೆ ಹಾಗು ಕಾನೂನು ತಜ್ಞರ ಬಳಿ ಚರ್ಚಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ಪರಿಶೀಲನೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.
ಮಸೂದೆ ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನ: “ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಸಂಖ್ಯೆ 26, 2024″ನ್ನು ಮುಂಬರುವ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಬಿಲ್ ನ್ನು ರಾಜ್ಯಪಾಲರು ವಾಪಸು ಕಳಹಿಸಿದ್ದರು. ಅವರು ತಮ್ಮ ಆಕ್ಷೇಪಣೆಯಲ್ಲಿ ಈ ಸಂಬಂಧ ಈಗಾಗಲೇ ಮಸೂದೆ ಇದ್ದರೂ, ಮತ್ತೊಂದು ಮಸೂದೆ ಅಗತ್ಯತೆಯ ಬಗ್ಗೆ ಸ್ಪಷ್ಟೀಕರಣ ಕೇಳಿದ್ದರು. ಅದರ ಆಧಾರದಲ್ಲಿ ಹಿಂದಿನ ಮಸೂದೆಯನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ, 2024ವನ್ನು ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದರು.
ನ್ಯಾಯಾಂಗ ನಿಂದನೆ ಆಗಿಲ್ಲ: ಸಿಎಂ ನೇತೃತ್ಬದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ಮಾಡಲಾಗಿತ್ತು. ಅದರ ಬಗ್ಗೆ ಪ್ರಮೋದಾ ದೇವಿ ಒಡೆಯರ್ ಹೇಳಿಕೆ ನೀಡಿದ್ದಾರೆ. ಕೋರ್ಟ್ ನಲ್ಲಿ ಈ ಬಗ್ಗೆ ತಡೆಯಾಜ್ಞೆ ಇದ್ದರೂ ಸಿಎಂ ಅವರು ಸಭೆ ಮಾಡಿರುವುದು ನ್ಯಾಯಂಗ ನಿಂದನೆ ಎಂದು ಅವರು ಆರೋಪಿಸಿದ್ದರು. ಆದರೆ ಪ್ರಮೋದಾ ದೇವಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ. ಯಾವುದೇ ನ್ಯಾಯಾಂಗ ನಿಂದನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಡಿಬಿಟಿಯನ್ನೇ ಮುಂದುವರಿಸಲು ತೀರ್ಮಾನ: ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ (DBT) ಬದಲಾಗಿ ಆಹಾರ ಕಿಟ್ ವಿತರಿಸುವ ಪ್ರಸ್ತಾವನೆಯನ್ನು ಮುಂದೂಡಲಾಗಿದ್ದು, ಸದ್ಯ ಡಿಬಿಟಿ ಪದ್ದತಿಯನ್ನೇ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ. ಆಹಾರ ಇಲಾಖೆ ಮೂರು ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಈ ಪೈಕಿ ಐದು ಕೆಜಿ ಅಕ್ಕಿ ಕೊಡುವುದು, ನೇರ ನಗದು ವರ್ಗಾವಣೆ ಮುಂದುವರಿಕೆ ಮಾಡುವುದು ಮತ್ತು ಆಹಾರ ಕಿಟ್ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಸಂಪುಟ ಸಭೆಯಲ್ಲಿ ಕೊನೆಗೆ ಈಗಿರುವ ಡಿಬಿಟಿ ಮುಂದುವರಿಸಲು ತೀರ್ಮಾನ ಮಾಡಲಾಗಿದೆ ಎಂದರು.
ಐದು ಬಿಲ್ ಗಳ ಬಗ್ಗೆ ಉತ್ತರ ನೀಡಲಾಗಿದೆ: 11 ಬಿಲ್ ಗಳನ್ನು ರಾಜ್ಯಪಾಲರು ವಾಪಾಸು ಮಾಡಿದ್ದರು. ಆ ಪೈಕಿ ಐದು ಬಿಲ್ ಗಳಿಗೆ ಉತ್ತರ ನೀಡಿದ್ದೇವೆ. ಆರು ಬಿಲ್ ಗಳ ಪೈಕಿ ಒಂದು ಬಿಲ್ ನ್ನು ಇಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಉಳಿದ ಬಿಲ್ ಗಳ ಬಗ್ಗೆ ಮುಂದಿನ ದಿನ ವಿವರಣೆ ನೀಡಿ ರಾಜ್ಯಪಾಲರಿಗೆ ಕಳುಹಿಸುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಸಂಪುಟ ಸಭೆಯ ಇತರ ತೀರ್ಮಾನಗಳು:
- ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿ, ನವೀಕರಣ, ತಿದ್ದುಪಡಿ ಮತ್ತಿತರ ಸೇವೆಗಳಿಗಾಗಿ ಬಳಕೆದಾರರಿಂದ ಸಂಗ್ರಹಿಸಲಾಗುತ್ತಿರುವ ಶುಲ್ಕ, ದಂಡ ಮುಂತಾದ ದರಗಳ ಪರಿಷ್ಕರಣೆಗೆ ಅನುಮೋದನೆ. ಶುಲ್ಕ,ದಂಡ, ಮುಂತಾದ ದರಗಳನ್ನು ಶೇ.35 ಹೆಚ್ಚಿಸಲು ತೀರ್ಮಾನ.
- ಕರ್ನಾಟಕ ನ್ಯಾಯಾಂಗ ಸೇವಾ (ನೇಮಕಾತಿ) (ತಿದ್ದುಪಡಿ) ನಿಯಮಗಳಿಗೆ ಅನುಮೋದನೆ.
- ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ (KIMS) ರೇಡಿಯೋಥೆರಪಿ ಚಿಕಿತ್ಸಾ ಮತ್ತು ರೋಗನಿರ್ಧಾರಕ ಉಪಕರಣಗಳನ್ನು ರೂ. 70 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
- ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ-ಯುರಾಲಜಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 117.11 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಕೋಟಿಗಳ ಅನುಮೋದನೆ ನೀಡಲು ಆಡಳಿತಾತ್ಮಕ ಅನುಮೋದನೆ
- ಕಲಬುರಗಿಯಲ್ಲಿ 150 ಹಾಸಿಗೆ ಮಕ್ಕಳ ಆರೋಗ್ಯ ಇಂದಿತಾಗಾಂಧಿ ಮಕ್ಕಳ ಸಾಮರ್ಥ್ಯದ ಘಟಕವನ್ನು ಆರೋಗ್ಯ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ರೂ. 221.51 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ
- ಬೆಂಗಳೂರಿನ ನೆಫ್ರೊ-ಯುರಾಲಜಿ ಸಂಸ್ಥೆಯ ಹೊರರೋಗಿ ವಿಭಾಗಕ್ಕೆ ನೂತನ ಕಟ್ಟಡವನ್ನು ರೂ. 16.15 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
- ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ-4 (2024-29) ಕ್ಕೆ ಅನುಮೋದನೆ.
- ರಾಜ್ಯದ ವಿವಿಧ ಕಾರಾಗೃಹಗ ಳಲ್ಲಿರುವ ಕೇಂದ್ರ 59 ಜೀವಾವಧಿ ಶಿಕ್ಷಾಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಒಪ್ಪಿಗೆ
- ಗದಗ ಜಿಲ್ಲೆಯ ಗದಗ ಬೆಟಗೇರಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ವಸತಿ ಬಡಾವಣೆಯಲ್ಲಿನ 1 ಎಕರೆ 27 ಗುಂಟೆ ಜಮೀನಿನಲ್ಲಿ 2 ಬಿ.ಹೆಚ್.ಕೆ (2+3) ಮಾದರಿಯ ಬಹುಮಹಡಿ ಗುಂಪು ವಸತಿ ಯೋಜನೆಯ 239.55 ಕೋಟಿಗಳ ಪರಿಷ್ಕೃತ ಯೋಜನಾ ಅನುಮೋದನೆ
- ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸೇವೆಗೆ ಸೇರಿದ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪ ನೋಂದಣಾಧಿಕಾರಿ/ ಉಪ ನೋಂದಣಾಧಿಕಾರಿಗಳನ್ನು Guided Counselling based compulsory transfers/ counselling transfers ಮೂಲಕ ವರ್ಗಾವಣೆ ಮಾಡಲು ನಿಗದಿಪಡಿಸಿದ ಅವಧಿಯನ್ನು 10.08.2024 ರಿಂದ 30.10.2024 ರವರೆಗೆ ವಿಸ್ತರಿಸಲು ಅನುಮೋದನೆ.
- ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ 1 ಲಕ್ಷ ಮಹಿಳೆಯರಿಗೆ ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡುವುದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ ಗಳನ್ನು 25 ಕೋಟಿಗಳ ವೆಚ್ಚದಲ್ಲಿ ಪ್ರಾರಂಭಿಸಲು ಹಾಗೂ ಸ್ವ-ಸಹಾಯ ಗುಂಪುಗಳ ಮಹಿಳೆಯರ ಮೂಲಕ ನಿರ್ವಹಿಸಲು ಆಡಳಿತಾತ್ಮಕ ಅನುಮೋದನೆ.
- ಅರ್ಹತಾ ಪತ್ರ ನವೀಕರಣಕ್ಕೆ ಬರುವ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು ರಾಜ್ಯದ 32 ಸ್ಥಳಗಳಲ್ಲಿ ಸ್ವಯಂಚಾಲಿತ ವಾಹನಗಳ ಪರೀಕ್ಷಾ ಕೇಂದ್ರಗಳನ್ನು (ATS) ರೂ. 341 ಕೋಟಿಗಳ ಒಟ್ಟು ಅಂದಾಜು ಮೊತ್ತದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, 5.3.2024ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ.
- ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ 2022 ಅನುಷ್ಠಾನಗೊಳಿಸಲು 15 ವರ್ಷಗಳನ್ನು ಪೊರೈಸಿರುವ ವಾಹನಗಳನ್ನು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಗೊಳಿಸಲು ಉದ್ದೇಶಿಸಿರುವ ವಾಹನಗಳ ಮೇಲೆ ಕೊನೆಯ 01 ವರ್ಷದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿನ ಬಾಕಿ ದಂಡಗಳ ವಸೂಲಿಯಿಂದ ವಿನಾಯಿತಿ ನೀಡಿರುವ ಅವಧಿಯನ್ನು 31.03.2026 ರವರೆಗೆ ವಿಸ್ತರಿಸಲು ಅನುನೋದನೆ.
- ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವಳಿ ಪಾರ್ಕ್ ಅನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP)ದಲ್ಲಿ ರೂ.27.97 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ.
- ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಸ್ಥಳೀಯ ಉದ್ಯೋಗಿಗಳನ್ನು ಕೌಶಲ್ಯಗೊಳಿಸಲು “ನಿಪುಣ್ ಕರ್ನಾಟಕ” ಉಪಕ್ರಮವನ್ನು ರೂ. 100 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಾಗೂ ಪ್ರಸ್ತುತ 2024-25ನೇ ಸಾಲಿನಲ್ಲಿ ರೂ. 10 ಕೋಟಿಗಳ ಮೊತ್ತದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ.
- ಬೆಳಗಾವಿ ಜಿಲ್ಲೆ, ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 08 ಏತ ನೀರಾವರಿ ಯೋಜನೆಗಳ ಪುನ:ಶ್ವೇತನ ಕಾಮಗಾರಿಗಳ ರೂ. 149.70 ಕೋಟಿಗಳ ಮೊತ್ತದ ವಿವರವಾದ ಯೋಜನಾ ವರದಿಗೆ ಅನುಮೋದನೆ.
- ಕಲಬುರಗಿ ಜಂಟಿ ಸಾರಿಗೆ ಆಯುಕ್ತರು ಹಾಗೂ ಉಪ ಸಾರಿಗೆ ಆಯುಕರು ಮತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗೆ ಸ್ವಂತ ಕಟ್ಟಡ ನಿರ್ಮಾಣದ ಮತ್ತು ಒಳಾಂಗಣ ಕಾಮಗಾರಿಗಳ ರೂ. 10.50 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರವು ಹೊಸಪೇಟೆ ತಾಲ್ಲೂಕು ಇಂಗಳಗಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿನ ಒಟ್ಟು 24.24 ಎಕರೆ ಜಮೀನಿನಲ್ಲಿ ಶೇಕಡಾ ಅನುಪಾತದಲ್ಲಿ ಉದ್ದೇಶಿಸಿರುವ 50:50 ವಸತಿ ಯೋಜನೆಯ ರೂ. 11.76 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಕೇಂದ್ರ ಪುರಸ್ಕೃತ National Urban Digital Mission (NUDM) ಯೋಜನೆಯನ್ನು ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯ ಮುಖಾಂತರ ಕರ್ನಾಟಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರೂ. 37.50 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ
- ಮಹದಾಯಿ ಪ್ರವಾಹ ಪ್ರಾಧಿಕಾರದ ನಿಧಿಗೆ (Progressive River Authority for Welfare and Harmony)ಗೆ ಮೊದಲ ಹಂತದಲ್ಲಿ ರಾಜ್ಯದ ಪಾಲಿನ ರೂ. 1.67 ಕೋಟಿಗಳನ್ನು KNNL ನಿಂದ ಪಾವತಿಸಲು ತೀರ್ಮಾನ.
- ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ 450 ಹಾಸಿಗೆಗಳ ಆಸ್ಪತ್ರೆ ಮತ್ತು ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 198.27 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಶ್ರೀ ಜಯದೇವ ಹೃದ್ರೋಗ ವಿಜ್ಞಾನ 2 ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖೆಯ ಕಟ್ಟಡ ಕಾಮಗಾರಿಯ ರೂ. 262.20 ಕೋಟೆಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಬೆಂಗಳೂರು ನವೀಕರಿಸಬಹುದಾದ ಇಂಧನ ನಿಗಮ ನಿಯಮಿತ” ಎಂಬ ನವೀಕರಿಸಬಹುದಾದ ಇಂಧನ ಪಾರ್ಕ್ ಅನ್ನು ನಗರಾಭಿವೃದ್ಧಿ ಇಲಾಖೆಯ ವಿವಿಧ ಅಂಗಸಂಸ್ಥೆಗಳ ಜಂಟಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಅನುಮೋದನೆ
- ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ” ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 3 ವರ್ಷಗಳಿಗೆ ಹೆಚ್ಚಿಸಲು ಒಂದು ಬಾರಿಯ ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಕೆಗೆ ಒಪ್ಪಿಗೆ
ರಾಜಕೀಯ
Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.
ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?
ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.
ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.
ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?
ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.
ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.
ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
ರಾಜ್ಯ
KRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.
ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.
ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್ಗೆ ಕುಸಿದಿದೆ.
ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್ಎಸ್ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.
110 ಅಡಿ ದಾಟಿದ KRS ನೀರಿನ ಮಟ್ಟ
ಒಳಹರಿವು ಕಡಿಮೆಯಾಗಿದ್ದರೂ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.
ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.
ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.
ದೇಶ
KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.
KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?
KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.
KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
73 ಸಾವಿರ ಉದ್ಯೋಗ ಭರವಸೆ ಏನಾಯಿತು?
ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.
ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.
-
ದೇಶ13 ಗಂಟೆಗಳು agoKPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
-
ದೇಶ14 ಗಂಟೆಗಳು agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ಬೆಂಗಳೂರು15 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ರಾಜ್ಯ12 ಗಂಟೆಗಳು agoMysuru Dasara ಗಜಪಡೆ ಅರಮನೆಗೆ ಎಂಟ್ರಿ; ಜನಸಂದಣಿ ಕಂಡು ಶ್ರೀರಾಮ ಆನೆ ಗಾಬರಿ, ಬಳಿಕ ಏನಾಯ್ತು?
-
ರಾಜ್ಯ13 ಗಂಟೆಗಳು agoKRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
-
ರಾಜಕೀಯ10 ಗಂಟೆಗಳು agoYathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ
-
ದೇಶ10 ಗಂಟೆಗಳು agoIndian Army ಗೆ ಅಮೆರಿಕದ ಜಾವೆಲಿನ್ ಕ್ಷಿಪಣಿ! ಚೀನಾ-ಪಾಕ್ ಗಡಿಗೆ ಮತ್ತಷ್ಟು ಬಲ; ದೊಡ್ಡ ಘೋಷಣೆ
-
ದೇಶ16 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
