Connect with us

ಅಪರಾಧ

ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Published

on

ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.

ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ಹೇಳಿದರು.

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ ಎಂದರು.

ಸಚಿವ ಎಂ.ಬಿ.ಪಾಟೀಲ್ ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ ಎಂದು ಹೇಳಿದರು‌.

ಅಪರಾಧ

ಹೂಡಿಕೆದಾರರ ಹಣ ದುರುಪಯೋಗ ಆರೋಪ: ಬೈಜುಸ್ ಸ್ಥಾಪಕ ಸಂಕಷ್ಟದಲ್ಲಿ

Published

on

ಸಿಂಗಾಪುರ: Byju Raveendran ಅವರಿಗೆ ಸಿಂಗಾಪುರ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. Byju’s ಸಂಸ್ಥಾಪಕರಾದ ಬೈಜು ರವೀಂದ್ರನ್ ವಿರುದ್ಧ ಕತಾರ್ ಹೋಲ್ಡಿಂಗ್ LLC ದಾಖಲಿಸಿದ್ದ ಒಪ್ಪಂದ ಉಲ್ಲಂಘನೆ ಮತ್ತು ವಂಚನೆ ಪ್ರಕರಣದಲ್ಲಿ ಈ ಮಹತ್ವದ ಆದೇಶ ಹೊರಬಿದ್ದಿದೆ.

ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ Qatar Holding LLC ಸಲ್ಲಿಸಿದ್ದ ಅರ್ಜಿಯಲ್ಲಿ, ನ್ಯಾಯಾಲಯದ ಹಲವು ಆದೇಶಗಳನ್ನು ಬೈಜು ರವೀಂದ್ರನ್ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ವಿಶೇಷವಾಗಿ ಏಪ್ರಿಲ್ 2024ರಿಂದ ತಮ್ಮ ವೈಯಕ್ತಿಕ ಹಾಗೂ ಕಂಪನಿಯ ಆಸ್ತಿ ವಿವರಗಳನ್ನು ಬಹಿರಂಗಪಡಿಸುವಂತೆ ನೀಡಿದ್ದ ಸೂಚನೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೋರ್ಟ್ ಕಠಿಣ ನಿಲುವು ತೆಗೆದುಕೊಂಡಿದೆ.

ಸಿಂಗಾಪುರ ನ್ಯಾಯಾಲಯವು, ಯಾವುದೇ ವಿಳಂಬವಿಲ್ಲದೆ ಸಂಬಂಧಿತ ಅಧಿಕಾರಿಗಳ ಮುಂದೆ ಶರಣಾಗುವಂತೆ ಬೈಜು ರವೀಂದ್ರನ್ ಅವರಿಗೆ ಸೂಚಿಸಿದೆ. ಜೊತೆಗೆ ಕಾನೂನು ವೆಚ್ಚವಾಗಿ ಸುಮಾರು 90 ಸಾವಿರ ಸಿಂಗಾಪುರ ಡಾಲರ್‌ ಪಾವತಿಸಲು ಆದೇಶಿಸಿದೆ.

ನ್ಯಾಯಾಲಯದ ಪ್ರಕಾರ, ಹೂಡಿಕೆದಾರರ ಹಣದ ದುರುಪಯೋಗ ಹಾಗೂ ಆಸ್ತಿ ಮಾಹಿತಿಯನ್ನು ಅಂತರರಾಷ್ಟ್ರೀಯ ನ್ಯಾಯಾಂಗ ಸಂಸ್ಥೆಗಳಿಂದ ಮುಚ್ಚಿಡಲು ಉದ್ದೇಶಪೂರ್ವಕ ಪ್ರಯತ್ನ ನಡೆದಿದೆ ಎನ್ನಲಾಗಿದೆ. ವಿದೇಶಿ ಹೂಡಿಕೆದಾರರು ಮತ್ತು ಸಾಲದಾತರು ಈಗಾಗಲೇ ವಿವಿಧ ದೇಶಗಳಲ್ಲಿ ಬೈಜುಸ್ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದಾರೆ.

ಇದೇ ವೇಳೆ ಭಾರತದಲ್ಲಿ Enforcement Directorate ಸಂಸ್ಥೆಯೂ ಬೈಜುಸ್ ವಿರುದ್ಧ ತನಿಖೆ ನಡೆಸುತ್ತಿದೆ. ವಿದೇಶಿ ಹೂಡಿಕೆ ಮತ್ತು ಹಣ ವರ್ಗಾವಣೆಯಲ್ಲಿ ಸುಮಾರು ₹9,000 ಕೋಟಿ ಮೌಲ್ಯದ FEMA ನಿಯಮ ಉಲ್ಲಂಘನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಂಪನಿಯ ಆದಾಯದ ಲೆಕ್ಕಪತ್ರಗಳಲ್ಲೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬೆಳವಣಿಗೆ ಭಾರತೀಯ ಎಡ್ಟೆಕ್ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಬೈಜುಸ್ ಭವಿಷ್ಯದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ.

Continue Reading

ಅಪರಾಧ

ಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ: ಕೇರಳ ರಾಜಕೀಯದಲ್ಲಿ ಭಾರೀ ಸಂಚಲನ!

Published

on

ತಿರುವನಂತಪುರಂ: Pinarayi Vijayan ಅವರ ವಿರುದ್ಧ ಕೇಳಿಬಂದಿರುವ ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬುಧವಾರ ಭಾರೀ ಕಾರ್ಯಾಚರಣೆ ನಡೆಸಿದೆ. ತಿರುವನಂತಪುರದಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸ ಸೇರಿದಂತೆ ಕೇರಳದ ವಿವಿಧ ಭಾಗಗಳಲ್ಲಿನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ನಡೆಯುತ್ತಿರುವ ಈ ತನಿಖೆ, ‘ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್’ (CMRL) ಕಂಪನಿಯಿಂದ ಪಿಣರಾಯಿ ವಿಜಯನ್ ಪುತ್ರಿ ಟಿ. ವೀನಾ ಒಡೆತನದ Exalogic Solutions Private Limited ಸಂಸ್ಥೆಗೆ ಸುಮಾರು 1.72 ಕೋಟಿ ರೂ. ಪಾವತಿಯಾಗಿರುವ ಆರೋಪಕ್ಕೆ ಸಂಬಂಧಿಸಿದೆ.

ಆರೋಪಗಳ ಪ್ರಕಾರ, 2018 ರಿಂದ 2019ರ ಅವಧಿಯಲ್ಲಿ ಸಿಎಂಆರ್‌ಎಲ್ ಕಂಪನಿಯು ಯಾವುದೇ ಸೇವೆ ಪಡೆಯದೇ ಎಕ್ಸಾಲಾಜಿಕ್ ಸೊಲ್ಯೂಷನ್ಸ್‌ಗೆ ಭಾರಿ ಮೊತ್ತ ವರ್ಗಾವಣೆ ಮಾಡಿತ್ತು ಎನ್ನಲಾಗಿದೆ. ಈ ಹಣಕಾಸು ವ್ಯವಹಾರಗಳ ಮೂಲಕ ಅಕ್ರಮ ಹಣ ಪಾವತಿ ನಡೆದಿದೆ ಎಂದು ಪತ್ರಕರ್ತ ಎಂ.ಆರ್. ಅಜಯನ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಈ ಪ್ರಕರಣದ ತನಿಖೆಯನ್ನು ರದ್ದುಪಡಿಸುವಂತೆ ಸಿಎಂಆರ್‌ಎಲ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ಅದರ ಮರುದಿನವೇ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಟಿ. ವೀನಾ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ಅನುಮೋದನೆ ನೀಡಿದೆ. ಗಂಭೀರ ವಂಚನೆ ತನಿಖಾ ಕಚೇರಿ (SFIO) ಸಲ್ಲಿಸಿರುವ 160 ಪುಟಗಳ ದೂರಿನಲ್ಲಿ ವೀನಾ, ಸಿಎಂಆರ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್ ಕರ್ತ ಸೇರಿ 25ಕ್ಕೂ ಹೆಚ್ಚು ಮಂದಿಯನ್ನು ಆರೋಪಿಗಳನ್ನಾಗಿ ಉಲ್ಲೇಖಿಸಲಾಗಿದೆ.

Continue Reading

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಟ್ಟಹಾಸ; ಪ್ಯಾರಾ ಅಥ್ಲೀಟ್ ಹಣ ಕಳವು ಪ್ರಕರಣ

Published

on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಪದ್ಮಶ್ರೀ ಪುರಸ್ಕೃತ ಪ್ಯಾರಾ ಅಥ್ಲೀಟ್ K. Y. Venkatesh ಅವರೇ ಸೈಬರ್ ಕಳ್ಳರ ಜಾಲಕ್ಕೆ ಬಲಿಯಾಗಿದ್ದಾರೆ.

ಮಲ್ಲೇಶ್ವರಂ ನಿವಾಸಿಯಾಗಿರುವ ವೆಂಕಟೇಶ್ ಅವರ ಕರ್ನಾಟಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹90 ಸಾವಿರ ಹಣ ನಿಗೂಢವಾಗಿ ಡ್ರಾ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ಅವರ ಮೊಬೈಲ್‌ಗೆ ಸರಣಿ ಒಟಿಪಿ ಸಂದೇಶಗಳು ಬಂದಿದ್ದು, ಅನುಮಾನಗೊಂಡ ಅವರು ಮರುದಿನ ಬ್ಯಾಂಕ್‌ಗೆ ತೆರಳಿ ವಿಚಾರಣೆ ನಡೆಸಿದ್ದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು “ಖಾತೆ ಸುರಕ್ಷಿತವಾಗಿದೆ” ಎಂದು ತಿಳಿಸಿದ್ದರು ಎನ್ನಲಾಗಿದೆ.

ಆದರೆ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರ ಗಮನಕ್ಕೆ ಬಾರದೇ ಖಾತೆಯಿಂದ ₹90 ಸಾವಿರ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಯಾವುದೇ ಒಟಿಪಿ ಅಥವಾ ಬ್ಯಾಂಕ್ ಮಾಹಿತಿ ಹಂಚಿಕೊಳ್ಳದೇ ಇದ್ದರೂ ಹಣ ಕಳವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೆಂಕಟೇಶ್, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೈಬರ್ ವಂಚಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಹುಟ್ಟಿನಿಂದಲೇ ಅಕೊಂಡ್ರೊಪ್ಲಾಸಿಯಾ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನೇ ಸವಾಲಾಗಿ ಸ್ವೀಕರಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ವೆಂಕಟೇಶ್, 50ಕ್ಕೂ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಈ ಘಟನೆ ಬೆಂಗಳೂರಿನಲ್ಲಿ ಸೈಬರ್ ಭದ್ರತೆ ಕುರಿತ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ.

Continue Reading

Trending