ಬೆಂಗಳೂರು
ಗಾಂಧಿ ಜಯಂತಿಯಂದೇ ಪಿತೃ ಪಕ್ಷ! ಮದ್ಯ-ಮಾಂಸ ಮಾರಾಟ ಸಂಪೂರ್ಣ ನಿಷೇಧ! ಗೊಂದಲವೋ ಗೊಂದಲ!
ಈ ಬಾರಿಯ ಗಾಂಧಿ ಜಯಂತಿ ಮಾಂಸ ಪ್ರಿಯರಿಗೆ ಸಂಕಷ್ಟ ತಂದೊಡ್ಡಿದೆ, ಶ್ರಾವಣ ಮುಗಿತ್ತು, ಪಿತೃ ಪಕ್ಷಕ್ಕೆ ಭರ್ಜರಿ ಬಾಡೂಟ ಮಾಡಿ ತಮ್ಮ ಹಿರಿಯರಿಗೆ ಎಡೆ ಇಡಬೇಕು ಎಂದುಕೊಂಡಿದ್ದವರಿಗೆ ಹೊಸ ತಲೆನೋವು ಶುರುವಾಗಿದೆ, ಏಕೆಂದರೆ ಈ ವರ್ಷ ಗಾಂಧಿ ಜಯಂತಿ ಮತ್ತು ಪಿತೃ ಪಕ್ಷ ಒಂದೇ ದಿನದಂದು ಬಂದಿದೆ,
ಹೌದು, ಪಿತೃಪಕ್ಷ ಅಂದ್ರೆ ಅನೇಕ ಮಾಂಸಾಹಾರಿ ಹಿಂದೂಗಳ ಪಾಲಿಗೆ ಮಹತ್ವದ ಹಬ್ಬ ಏಕೆಂದರೆ ತಮ್ಮ ವಂಶದ ಹಿರಿಯರಿಗೆ ಇಷ್ಟವಾದ ಮಾಂಸಾಹಾರ ಖಾದ್ಯವನ್ನು ಸಿದ್ಧಪಡಿಸಿ ಎಡೆ ಇಟ್ಟು, ಹಿರಿಯರ ಆತ್ಮ ತೃಪ್ತಿ ಪಡಿಸುವ ದಿನ, ಆದ್ರೆ ಗಾಂಧಿ ಜಯಂತಿ ಆಚರಣೆ ಇದಕ್ಕೆ ತದ್ವಿರುದ್ಧವಾಗಿದೆ,
ಗಾಂಧಿ ಜಯಂತಿಯಂದು ಸರ್ಕಾರ ಮದ್ಯ-ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ, ಅಂದು ಪ್ರಾಣಿಬಲಿ-ಮಾಂಸ ಮಾರಾಟ-ಮದ್ಯ ಮಾರಾಟ ಯಾವುದಕ್ಕೂ ಅವಕಾಶವಿಲ್ಲ, ಹೀಗಾಗಿ ಈ ದಿನ ಫಜೀತಿ ತಂದಿಟ್ಟಿದೆ, ಮಾಂಸಹಾರ ಖಾದ್ಯ ಮಾಡಿ ಹಿರಿಯರಿಗೆ ಅರ್ಪಿಸದಿದ್ದರೆ ಪ್ರತೀತಿ ಮುರಿದಂತಾಗುತ್ತದೆ, ಇಲ್ಲವಾದ್ರೆ ಗಾಂಧಿ ಜಯಂತಿಗೆ ಅಪಚಾರ ಮಾಡಿದಂತಾಗುತ್ತದೆ, ಹೀಗಾಗಿ ಈ ಬಾರಿಯ ಅಕ್ಟೋಬರ್ 2 ಗೊಂದಲಕ್ಕೆ ದಾರಿ ಮಾಡಿಕೊಟ್ಟಿದೆ,
ಅಪರಾಧ
CRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್‌ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.
ಕಾರು ಚಾಲಕ ಬಂಧನ
ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.
ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್ ರೇಜ್
ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.
ದೇಶ
GBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಜಿಬಿಎ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕರಡು ಮತದಾರರ ಪಟ್ಟಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಮಾಣಿತ ಕಾರ್ಯವಿಧಾನ (SOP) ಕುರಿತು ಚರ್ಚೆ ನಡೆಯಿತು. ಅಧಿಸೂಚನಾ ವಿವರಣೆಗಳಿಗೆ ಅನುಗುಣವಾಗಿ ವಾರ್ಡ್ ಮ್ಯಾಪ್ ಗಡಿಗಳನ್ನು ಸರಿಪಡಿಸಿ ನವೀಕರಿಸಲು ಐಟಿ ವಿಭಾಗಕ್ಕೆ ನಿರ್ದೇಶನ ನೀಡಲಾಗಿದೆ. ದೀರ್ಘಾವಧಿಯಲ್ಲಿ ವ್ಯವಸ್ಥಿತ ಸರ್ವೇ ನಡೆಸುವಂತೆ ಸೂಚಿಸಲಾಗಿದೆ.
ಚುನಾವಣಾ ವಿಭಾಗ ರಚನೆ
ಪ್ರತಿ ಪಾಲಿಕೆಯಲ್ಲಿ ತಹಸೀಲ್ದಾರ್, ವ್ಯವಸ್ಥಾಪಕ, ಎಫ್‌ಡಿ, ಎಸ್‌ಡಿಎ ಹಾಗೂ ಡೇಟಾ ಎಂಟ್ರಿ ಆಪರೇಟರ್ ಒಳಗೊಂಡ ವಿಶೇಷ ಚುನಾವಣಾ ವಿಭಾಗ ರಚಿಸಲು ಸೂಚಿಸಲಾಗಿದೆ.
ವಿಭಜಿತ ವಾರ್ಡ್‌ಗಳ ವಿಶೇಷ ಪರಿಶೀಲನೆ
ವಿಭಜಿತ ವಾರ್ಡ್‌ಗಳ ಮಾಹಿತಿಯನ್ನು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಬೇಕು. ಪಾಲಿಕೆ ಆಯುಕ್ತರು ಸ್ವತಂತ್ರವಾಗಿ ಮಾಹಿತಿ ದೃಢೀಕರಿಸಬೇಕು ಎಂದು ಮಹೇಶ್ವರ್ ರಾವ್ ತಿಳಿಸಿದ್ದಾರೆ.
ನೋಡಲ್ ಅಧಿಕಾರಿಗಳ ನೇಮಕ
ಡೇಟಾ ಸಮಸ್ಯೆಗಳ ಪರಿಹಾರ ಹಾಗೂ ಜಿಬಿಎ ಚುನಾವಣಾ ವಿಭಾಗದೊಂದಿಗೆ ಸಮನ್ವಯಕ್ಕಾಗಿ ಕಂದಾಯ ವಿಭಾಗದ ಅಪರ ಆಯುಕ್ತರನ್ನು ಐದು ಪಾಲಿಕೆಗಳಲ್ಲೂ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲು ಸೂಚಿಸಲಾಗಿದೆ.
“ಕರಡು ಮತದಾರರ ಪಟ್ಟಿಯ ಪರಿಶೀಲನೆಯಲ್ಲಿ ಪಾರದರ್ಶಕತೆ, ನಿಖರತೆ ಹಾಗೂ ವಿಶ್ವಾಸಾರ್ಹತೆ ಖಚಿತಪಡಿಸಲು SOP ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ಸಭೆಯಲ್ಲಿ ವಿವಿಧ ಪಾಲಿಕೆಗಳ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೇಶ
ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ
ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
54 ಟಿಎಂಸಿ ನೀರು ಲಭ್ಯ
ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ಯಾಂಕರ್ ವ್ಯವಸ್ಥೆ ಸಿದ್ಧ
ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ನೀರು ವ್ಯರ್ಥ ಮಾಡಿದ್ರೆ ದಂಡ
ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.
ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
-
ಬೆಂಗಳೂರು1 hour agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ20 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ18 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ19 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ17 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ17 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ19 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ಅಪರಾಧ18 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
