ಬೆಂಗಳೂರು
ಸಿದ್ದರಾಮಯ್ಯ ಹಿಟ್ಲರ್ ಆಗಿದ್ದಾರೆ – ಶೋಭಾ ಕರಂದ್ಲಾಜೆ ಕರಂದ್ಲಾಜೆ
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ (CM Siddaramaiah) ಅವರು ಹಿಟ್ಲರ್ ಆಗಿದ್ದಾರೆ. ಸರ್ಕಾರ ನನ್ನ ವಿರುದ್ಧವೂ ಎಫ್‌ಐಆರ್ ದಾಖಲಿಸಿದೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದು ನಾಗಮಂಗಲ ಗಲಭೆ ವಿಚಾರವಾಗಿ ಎಫ್‌ಐಆರ್ ದಾಖಲಿಸಿರುವ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಿಡಿಕಾರಿದ್ದಾರೆ.
ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆ ವಿಚಾರವಾಗಿ ನನ್ನ ಮೇಲೆ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಬೇಡ, ಎಫ್‌ಐಆರ್ ಹಾಕಿದೆ, ನಾವು ಎದುರಿಸ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ ಅವರು ಹಿಟ್ಲರ್ ಆಗಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರ ಧ್ವನಿ ಅಡಗಿಸುವ, ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಗಣಪತಿಯನ್ನೂ ಬಿಡದೇ ಅವಮಾನ ಮಾಡಿದ್ರು:
ನಾಗಮಂಗಲ ಗಲಭೆ ನಡೆಯಿತು, ಗಣಪತಿ ಮೂರ್ತಿ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದರು. ಕೇರಳದಿಂದ ಬಂದವರು ಅಲ್ಲಿ ಗಲಭೆ ಮಾಡಿದ್ದರು ಅಂತೆಲ್ಲಾ ಮಾಹಿತಿ ಬಂದಿದೆ. ಅವರೆಲ್ಲ ಯಾರು? ಯಾಕೆ ಬಂದಿದ್ದರು ಎಂದು ತನಿಖೆ ಮಾಡಿ. ನಾಗಮಂಗಲ ಗಲಭೆಯನ್ನು ಮುಚ್ಚಿ ಹಾಕಲು ಸರ್ಕಾರ ಮುಂದಾಗಿದೆ. ಗಣೇಶನನ್ನೂ ಬಿಡದೇ ಪೊಲೀಸ್ ವ್ಯಾನಿನಲ್ಲಿ ಬಂಧಿಸಿ ಅವಮಾನ ಮಾಡಿದ್ದಾರೆ. ಕೋಲಾರದಲ್ಲಿ ಪ್ಯಾಲೆಸ್ತೀನ್ ಧ್ವಜದ ಪ್ರದರ್ಶನ ಆಯ್ತು. ನಿನ್ನೆ ನಂದಿನಿ ಲೇಔಟ್‌ನಲ್ಲಿ ರಾಷ್ಟ್ರಧ್ವಜದಲ್ಲಿ ಅಶೋಕ ಚಕ್ರದ ಬದಲು ಖಡ್ಗ, ಉರ್ದು ಅಕ್ಷರದಿಂದ ಬರೆದು ಅಪಮಾನ ಆಗಿದೆ. ಇದು ದೇಶದ್ರೋಹತನ, ಈ ಧೈರ್ಯ ಸಮಾಜವಿರೋಧಿಗಳಿಗೆ ಹೇಗೆ ಬಂದಿದೆ ಆಗ್ರಹಿಸಿದರು.
ರಾಜ್ಯದಲ್ಲಿ ಟಿಪ್ಪು, ಔರಂಗಜೇಬನ ವೈಭವೀಕರಣ ಆಯ್ತು, ಯಾರೂ ಕೇಳಲಿಲ್ಲ. ಹನುಮಾನ್ ಚಾಲೀಸಾ ಪಠಣ ಮಾಡಿದರೇ ಹೊಡೀತಾರೆ. ನಾನು, ಅಶೋಕ್ ಏನು ತಪ್ಪು ಮಾಡಿದ್ವಿ? ನಮ್ಮ ವಿರುದ್ಧ ಯಾಕೆ ಎಫ್‌ಐಆರ್ ಹಾಕಿದ್ದೀರಿ? ನಿಮ್ಮ ಬಗ್ಗೆ ಮಾತಾಡಿದ್ದೆ ಎಫ್‌ಐಆರ್ ಹಾಕ್ತೀರಾ? ಯಾವ ಸಂವಿಧಾನ ರಕ್ಷಣೆ ಮಾಡಲು ಹೊರಟಿದ್ದೀರಿ? ನೀವು ನೂರು ಎಫ್‌ಐಆರ್ ಹಾಕಿ, ನಾವು ಹೆದರಿ ಓಡಿ ಹೋಗುವವರಲ್ಲ. ನಿಮ್ಮ ವಕೀಲರು ಹನುಮಾನ್ ಚಾಲೀಸಾ ಕೇಸ್ ಹಾಕಿ, ಕ್ಷಮೆ ಕೇಳಿ ಅಂದಿದ್ದರು. ನಾನು ಕ್ಷಮೆ ಕೇಳಿಲ್ಲ, ಕೇಸ್ ನಡೀತಿದೆ, ಸುಪ್ರೀಂ ಕೋರ್ಟ್‌ಗೆ ಹೋಗಲಿ. ಈಗಲೂ ಎಫ್‌ಐಆರ್ ಹಾಕಿದ್ದೀರಿ, ಜನ ನಿಮಗೆ ತಕ್ಕ ಪಾಠ ಕಲಿಸ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್‌ನಿಂದ ದ್ವೇಷರಾಜಕಾರಣ:
ದ್ವೇಷದ ರಾಜಕಾರಣ ಮಾಡುತ್ತಿರುವವರು ಕಾಂಗ್ರೆಸ್‌ನವರು (Congress). ಒಂದು ಸಮುದಾಯ ಓಲೈಕೆ ಮಾಡಲು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯನ್ನೂ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಯಾವುದೋ ಒಂದು ಕಡೆ ಪಾಕ್ ಪರ ಘೋಷಣೆ ಕೂಗಿದ್ದಾರೆ. ರಾಜ್ಯದಲ್ಲೇ ಘೋಷಣೆ ಕೂಗಿದ್ದಾರೆ. ನಾನು ರಾಜ್ಯದಲ್ಲಿ ಕೂಗಿರುವ ವಿಡಿಯೋವನ್ನೇ ಟ್ವೀಟ್‌ನಲ್ಲಿ ಹಾಕಿರುವುದು. ಕರ್ನಾಟಕವನ್ನು ಬಾಂಗ್ಲಾದೇಶ ಮಾಡ್ತೀವಿ ಅನ್ನೋರ ವಿರುದ್ಧ ಕೇಸ್ ಹಾಕಿಲ್ಲ. ಇದ್ಯಾವ ನ್ಯಾಯ? ಘೋಷಣೆ ಕೂಗಿರೋದು ಹೌದು, ಇದರಲ್ಲಿ ಪ್ರಚೋದನೆ ಎಲ್ಲಿ ಬಂತು? ಎಂದರು.
ದೇಶ
ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ
ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
54 ಟಿಎಂಸಿ ನೀರು ಲಭ್ಯ
ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ಯಾಂಕರ್ ವ್ಯವಸ್ಥೆ ಸಿದ್ಧ
ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ನೀರು ವ್ಯರ್ಥ ಮಾಡಿದ್ರೆ ದಂಡ
ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.
ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಬೆಂಗಳೂರು
BENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ ವಿಶ್ರಾಂತಿ ನೀಡುವ ಶಯನೋತ್ಸವ ಸುಗಂಧ ಪರಿಮಳಯುಕ್ತ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಈ ಶಯನೋತ್ಸವವನ್ನು ತಲಘಟ್ಟಪುರದ ಮಾಜಿ ಶ್ಯಾನಭೋಗ ಟಿ.ವಿ. ನಾರಾಯಣಮೂರ್ತಿ ಅವರ ಕುಟುಂಬವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ತ.ನಾ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಉತ್ಸವ ಜರುಗಿತು. ಪ್ರಧಾನ ಅರ್ಚಕ ರಘುರಾಮ್ ಭಟ್ ಅವರು ಸಕಲ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.
ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿದರು. ಭಕ್ತರ ಜಯಘೋಷಗಳಿಂದ ದೇವಾಲಯ ಪ್ರದೇಶ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾಯಿತು.
ಈ ಸಂದರ್ಭದಲ್ಲಿ ಅಕ್ಷಯ ವಿಪ್ರ ಮಹಾಸಭಾದ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್, ಕಿರಣ್ ಕುಮಾರ್, ಎಸ್. ರಾಮರಾವ್, ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
-
ದೇಶ19 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ಬೆಂಗಳೂರು47 minutes agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ18 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ19 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ17 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ16 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ19 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ಅಪರಾಧ18 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
