ಬೆಂಗಳೂರು
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ – BJP INSISTS CM RESIGNATION
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭ್ರಷ್ಟಾಚಾರದ ಕಳಂಕ ಹೊತ್ತ ಸಿಎಂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತುರ್ತು ಮಾಧ್ಯಮಗೋಷ್ಟಿ ನಡೆಸಿದರು.
ವಾಲ್ಮೀಕಿ ನಿಗಮದ ಹಗರಣ ಆದಾಗ ಭ್ರಷ್ಟಾಚಾರ ಆಗಿಲ್ಲ ಅಂದಿದ್ರು. ಬಳಿಕ ಸದನದಲ್ಲಿ ಸಿಎಂ ಅವರೇ ಹಗರಣ ಆಗಿರೋದಾಗಿ ಒಪ್ಪಿಕೊಂಡರು. ಮುಡಾ ವಿಚಾರದಲ್ಲಿ ಕೂಡ ನಮ್ಮ ಕುಟುಂಬದ ಪಾತ್ರ ಇಲ್ಲ ಅಂದಿದ್ರು. ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ರಾಜ್ಯಪಾಲರ ಮೇಲೆಯೇ ಆರೋಪ ಮಾಡಿದ್ರು. ಈಗ ಕೋರ್ಟ್ ತೀರ್ಪು ಬಂದಿದೆ. ಈ ಹಿಂದೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಜಯೇಂದ್ರ ಒತ್ತಾಯಿಸಿದರು.
ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಇಂದು ಹೈಕೋರ್ಟ್ ತೀರ್ಪು ನೀಡಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ. ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ದೇಶ
ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ
ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
54 ಟಿಎಂಸಿ ನೀರು ಲಭ್ಯ
ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ಯಾಂಕರ್ ವ್ಯವಸ್ಥೆ ಸಿದ್ಧ
ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ನೀರು ವ್ಯರ್ಥ ಮಾಡಿದ್ರೆ ದಂಡ
ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.
ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಬೆಂಗಳೂರು
BENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ ವಿಶ್ರಾಂತಿ ನೀಡುವ ಶಯನೋತ್ಸವ ಸುಗಂಧ ಪರಿಮಳಯುಕ್ತ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಈ ಶಯನೋತ್ಸವವನ್ನು ತಲಘಟ್ಟಪುರದ ಮಾಜಿ ಶ್ಯಾನಭೋಗ ಟಿ.ವಿ. ನಾರಾಯಣಮೂರ್ತಿ ಅವರ ಕುಟುಂಬವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ತ.ನಾ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಉತ್ಸವ ಜರುಗಿತು. ಪ್ರಧಾನ ಅರ್ಚಕ ರಘುರಾಮ್ ಭಟ್ ಅವರು ಸಕಲ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.
ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿದರು. ಭಕ್ತರ ಜಯಘೋಷಗಳಿಂದ ದೇವಾಲಯ ಪ್ರದೇಶ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾಯಿತು.
ಈ ಸಂದರ್ಭದಲ್ಲಿ ಅಕ್ಷಯ ವಿಪ್ರ ಮಹಾಸಭಾದ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್, ಕಿರಣ್ ಕುಮಾರ್, ಎಸ್. ರಾಮರಾವ್, ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
-
ದೇಶ19 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ಬೆಂಗಳೂರು46 minutes agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ18 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ19 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ17 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ16 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ19 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ಅಪರಾಧ18 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
