Connect with us

ಬೆಂಗಳೂರು

ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಕಳಂಕವಿಲ್ಲದ ಒಬ್ಬ ಬಿಜೆಪಿಗನ ತೋರಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು – CM Siddaramaiah

Published

on

ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಗೌರವದಿಂದ ರಾಜ್ಯಕ್ಕೆ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮವಿಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗೀದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಹೇಳಿದ್ದಾರೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೆ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು ಎಂದು ಸಿಎಂ ಮಾಧ್ಯಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲ ವಾಷಿಂಗ್ ಮಷಿನ್​​ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಬ್ಬಾಶ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ. ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮಷಿನ್​​ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ? ಎಂದು ಸಿಎಂ ಕೇಳಿದ್ದಾರೆ.

ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್​ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದೆಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣ ಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?. ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧವಿದ್ದರೆ ನಾನು ಸದಾ ಸಿದ್ಧ ಎಂದು ಸಿಎಂ ಸವಾಲು ಹಾಕಿದ್ದಾರೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜ್ಯ

KRS ಡ್ಯಾಂಗೆ ಭಾರೀ ಶಾಕ್‌! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?

Published

on

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.

ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.

ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.

ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.

110 ಅಡಿ ದಾಟಿದ KRS ನೀರಿನ ಮಟ್ಟ

ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.

ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.

Continue Reading

ದೇಶ

KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ

Published

on

By

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?

KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

73 ಸಾವಿರ ಉದ್ಯೋಗ ಭರವಸೆ ಏನಾಯಿತು?

ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.

Continue Reading

Trending