ರಾಜ್ಯ
ಚಾಮುಂಡಿ ಬೆಟ್ಟದಲ್ಲಿ ಸೆ.1ರಿಂದ ಪ್ಲಾಸ್ಟಿಕ್ ಎಸೆದರೆ, ರಾತ್ರಿ ಪ್ರವೇಶಿದರೆ ದಂಡ..
ಮೈಸೂರು:ಮೈಸೂರಿನ ಚಾಮುಂಡಿಬೆಟ್ಟದ ಪರಿಸರ ಸಂರಕ್ಷಣೆಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಪ್ಲಾಸ್ಟಿಕ್ ಎಸೆದರೆ ದಂಡ :ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸೆ.1ರಿಂದ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿರುವ ಅರಣ್ಯ ಇಲಾಖೆ,ಚಾಮುಂಡಿಬೆಟ್ಟದ ಹೆಬ್ಬಾಗಿಲು ತಾವರೆಕಟ್ಟೆ ಗೇಟ್ ಬಳಿ ಬೆಳಗ್ಗೆ 6 ಗಂಟೆಯಿಂದಲೇ ಕಾರ್ಯಚರಣೆಗಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಬರುವ ವಾಹನಗಳನ್ನು ತಪಾಸಣೆ ನಡೆಸಿದರು. ಆದೇಶ ಜಾರಿಯಾದ ಮೊದಲ ದಿನವಾದ್ದರಿಂದ ಎಚ್ಚರಿಕೆ ನೀಡ ಕಳುಹಿಸಿದ್ದಾರೆ.ಜಾಗೃತಿ ಮೂಡಿಸಿ ಕಳುಹಿಸಲಾಗಿದೆ. ಆದರೆ, ನಾಳೆಯಿಂದ ದಂಡವನ್ನು ವಿಧಿಸುವ ಕಾರ್ಯಮಾಡುತ್ತೇವೆ” ಎಂದು ಅರಣ್ಯ ಇಲಾಖೆ ಅದಿಕಾರಿಗಳು ಎಂದು ತಿಳಿಸಿದರು…
ರಾತ್ರಿವೇಳೆ ಪ್ರವೇಶ ನಿಷಿದ್ದ:ಪ್ರತಿದಿನ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಸರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಆದರೆ, ಚಾಮುಂಡಿಬೆಟ್ಟದ ತಪ್ಪಲಿನ ನಿವಾಸಿಗಳಿಗೆ ಅನ್ವಯಿಸುವುದಿಲ್ಲ. ಚಾಮುಂಡಿ ಬೆಟ್ಟದ ಮುಖ್ಯದ್ವಾರ ಹೊರತುಪಡಿಸಿ ಉಳಿದ ಮೂರು ದ್ವಾರಗಳಿಗೆ ಬೀಗ ಹಾಕುವ ಹೊಸ ಪದ್ಧತಿಯನ್ನು ಜಾರಿಗೊಳಿಸಲಾಗಿದೆ.ಅರಣ್ಯ ಇಲಾಖೆಯ ಈ ನಿಯಮಗಳಿಗೆ ಸರ‍್ವಜನಿಕರು ಕೈಜೋಡಿಸಿ, ಬೆಟ್ಟದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಅರಣ್ಯ ಸಂರಕ್ಷಣಾಧಿಕಾರಿಗಳು ಕೋರಿದ್ದಾರೆ.
ಅರಣ್ಯದಲ್ಲಿ ಅಂಗಡಿಯವರು ಪ್ಲಾಸ್ಟಿಕ್ ಬೀಸಾಡಿದರೆ – 15,000 ರೂ.
ರಾತ್ರಿ ವೇಳೆ ಬೆಟ್ಟ ಪ್ರವೇಶ ನಿಷಿದ್ಧ
ಅನಧಿಕೃತ ಸಮಯದಲ್ಲಿ ಬೆಟ್ಟಕ್ಕೆ ಭೇಟಿ – 2500 ರೂ.
ಮದ್ಯಪಾನ/ ಹಾನಿಕಾರ ವಸ್ತು ಪ್ರವೇಶ – 5000 ರೂ.
ಅಕ್ರಮ ಪ್ರವೇಶ – 500 ರೂ.
ಪ್ಲಾಸ್ಟಿಕ್/ ತ್ಯಾಜ್ಯ ಬೀಸಾಡಿದರೆ – 500 ರೂ.
ಅನುಮತಿ ಇಲ್ಲದ ಜಾಗದಲ್ಲಿ ವಾಹನ ನಿಲುಗಡೆಗೆ – 1000 ರೂ.
ಇನ್ನಿತರ ಹಾನಿಕಾರಕ ಚಟುವಟಿಕೆ – 2500 ರೂ.
ವನ್ಯಪ್ರಾಣಿಗಳಿಗೆ ತೊಂದರೆ ಕೊಡುವುದು/ ಆಹಾರ ನೀಡುವುದು – 500 ರೂ.
ಬೆಂಗಳೂರು
Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!
ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.
ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.
ಖಾಲಿ ಸೈಟ್ ಸ್ವಚ್ಛವಾಗಿಡುವುದು ಕಡ್ಡಾಯ
2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.
ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.
ಕಸ ತೆರವು ಮಾಡದಿದ್ದರೆ ಭಾರಿ ದಂಡ!
ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.
ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.
- 20×30 ಸೈಟ್: ₹19,200ರಿಂದ ದಂಡ
- 30×40 ಸೈಟ್: ₹38,400ರವರೆಗೆ ದಂಡ
- ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ
ಹೀಗಾಗಿ ಖಾಲಿ ಸೈಟ್ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.
ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ
ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ಬೆಂಗಳೂರು
Bengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್‌ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಲಾಲ್‌ಬಾಗ್‌ನಲ್ಲಿ ಬೃಹತ್ ಬ್ಯಾನರ್‌ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.
ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್‌ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಶೇ.28ರಷ್ಟು ವಾರ್ಡ್‌ಗಳಲ್ಲಿ ಪಾರ್ಕ್‌ಗಳೇ ಇಲ್ಲ!
ಐಐಹೆಚ್‌ಎಸ್ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್‌ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ
ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.
- ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
- ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
- ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
- ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
- ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
- ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.
ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
-
ಬೆಂಗಳೂರು23 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ದೇಶ22 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ಬೆಂಗಳೂರು4 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ದೇಶ3 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು3 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ದೇಶ4 ಗಂಟೆಗಳು agoNepal Flood: ನೇಪಾಳದಲ್ಲಿ ಸಿಲುಕಿದ ಕನ್ನಡಿಗರೇ ಗಮನಿಸಿ; ಸರ್ಕಾರದಿಂದ Google Form ಬಿಡುಗಡೆ
-
ರಾಜ್ಯ5 ಗಂಟೆಗಳು agoB Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!
-
ಬೆಂಗಳೂರು4 ಗಂಟೆಗಳು agoAnand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
