Connect with us

ರಾಜಕೀಯ

ನನ್ನ ಕಂಡ್ರೆ ಅವರಿಗೆ ಹೊಟ್ಟೆ ಉರಿ, ಅದಕ್ಕೆ ಮುಡಾ…ಮುಡಾ ಅಂತಾರೆ-ಸಿಎಂ

Published

on

ಮೈಸೂರು: ಮುಡಾ..ಮುಡಾ ಹಗರಣ ಎಂದು ಸುಳ್ಳು ಆರೋಪ ಮಾಡುವ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ವಿಜೇಯೇಂದ್ರ ಪ್ರಹ್ಲಾದ್ ಜೋಶಿಗೆ ನನ್ನ ಕಂಡರೆ ಹೊಟ್ಟೆ ಕಿಚ್ಚು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು,
ಸ್ವಕ್ಷೇತ್ರ ವರುಣಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಇಂದು ಶಂಕುಸ್ಧಾಪನೆ ನೆರವೇರಿಸಿ ಮಾತನಾಡಿದ ಸಿಎಂ ಮುಡಾ ಹಗರಣ ಅಂತಾ ಆರೋಪ ಮಾಡುತ್ತಿದ್ದಾರೆ, ನನ್ನ ಭಾಮೈದ ತೆಗೆದುಕೊಂಡ ಜಮೀನನ್ನು ತನ್ನ ತೆಂಗಿಗೆ ಕೊಟ್ಟಿದ್ದಾನೆ, ಅದಕ್ಕೆ ಸೈಟ್ ಬಂದಿದ್ದವು, ಅದನ್ನೇ ದೊಡ್ಡ ವಿವಾದ ಮಾಡಿದರು, ಅದಕ್ಕೇ ಬೇಡವೇ ಬೇಡ ಎಂದು ಮುಡಾಗೆ ಸೈಟ್ ವಾಪಸ್ ಕೊಟ್ಟಿದ್ದೇವೆ, ನಾನು ಒಬ್ಬ ಸಿಎಂ ಆಗಿ ಈಗ ಮೈಸೂರಿನಲ್ಲಿ ಮನೆ ಕಟ್ಟುತ್ತಿದ್ದೇನೆ, ಈವರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇವೆ, 40 ವರ್ಷಗಳಿಂದ ನನಗೆ ಸ್ವಂತ ಮನೆಯೂ ಇಲ್ಲ ಎಂದರು,
ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಂದ ಯಾವ ಕಾರಣಕ್ಕೂ ಧೃತಿಗೆಡಲ್ಲ, ಯಾರಿಗೂ ಜಗ್ಗಲ್ಲ- ಬಗ್ಗುವುದೂ ಇಲ್ಲ ಸತ್ಯಕ್ಕೆ ಯಾವಾಗಲೂ ಜಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಪಕ್ಷದವರು ವಿರುದ್ಧ ಸಿಎಂ ಹರಿಹಾಯ್ದರು..

ದೇಶ

ಸಿಎಂ ಬದಲಾವಣೆ ಚರ್ಚೆ ಕ್ಲೈಮ್ಯಾಕ್ಸ್; ದೆಹಲಿಯಲ್ಲಿ ಸಿದ್ದರಾಮಯ್ಯ ಮಾಸ್ಟರ್‌ಸ್ಟ್ರೋಕ್

Published

on

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ದೆಹಲಿಯ ಇಂದಿರಾ ಭವನದಲ್ಲಿ ನಡೆದ ಹೈವೋಲ್ಟೇಜ್ ಸಭೆಯಲ್ಲಿ ಮುಖ್ಯಮಂತ್ರಿ Siddaramaiah ತಮ್ಮ ಪರವಾಗಿ ಅಹಿಂದ ಅಸ್ತ್ರವನ್ನು ಪರಿಣಾಮಕಾರಿಯಾಗಿ ಪ್ರಯೋಗಿಸಿದ್ದಾರೆ ಎನ್ನಲಾಗಿದೆ.

ನಾಯಕತ್ವ ಬದಲಾವಣೆ ನಿರೀಕ್ಷೆಯೊಂದಿಗೆ ದೆಹಲಿಯಲ್ಲಿ ಸಕ್ರಿಯವಾಗಿರುವ ಉಪ ಮುಖ್ಯಮಂತ್ರಿ D. K. Shivakumar ಅವರಿಗೆ ರಾಜಕೀಯವಾಗಿ ಟಕ್ಕರ್ ನೀಡಲು ಸಿದ್ದರಾಮಯ್ಯ ಬಣ ಅಹಿಂದ ಸಮೀಕರಣವನ್ನು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷ Mallikarjun Kharge, Rahul Gandhi, K. C. Venugopal ಹಾಗೂ Randeep Singh Surjewala ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕ ಮಾತುಕತೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಹಿಂದುಳಿದ ವರ್ಗ, ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸಿದ್ದರಾಮಯ್ಯ ಅವರ ಪ್ರಭಾವ ಗಟ್ಟಿಯಾಗಿದೆ. ಒಂದು ವೇಳೆ ಈ ಹಂತದಲ್ಲಿ ನಾಯಕತ್ವ ಬದಲಾವಣೆ ಮಾಡಿದರೆ ಅಹಿಂದ ಮತಬ್ಯಾಂಕ್ ಕಾಂಗ್ರೆಸ್‌ನಿಂದ ದೂರ ಸರಿಯುವ ಸಾಧ್ಯತೆ ಇದೆ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಲಾಗಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಹೊಂದಿರುವ ವೈಯಕ್ತಿಕ ವರ್ಚಸ್ಸು ಹಾಗೂ ಅಹಿಂದ ಸಮುದಾಯದ ಬೆಂಬಲವೇ ಕಾಂಗ್ರೆಸ್‌ಗೆ ಶಕ್ತಿಯಾಗಿದೆ. ಮುಂದಿನ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಮೀಕರಣವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ.

ಇದೇ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಯೂ ನಡೆದಿದ್ದು, ಮುಂದಿನ ದಿನಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆ ಇದೆ.

Continue Reading

ದೇಶ

“ಕೊಟ್ಟ ಮಾತು ಉಳಿಸಿಕೊಳ್ಳಿ”; DCM D K Shivkumar ಸಿಂಹಗರ್ಜನೆ

Published

on

ನವದೆಹಲಿ: ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕರ್ನಾಟಕ ಕಾಂಗ್ರೆಸ್‌ನ ಹೈವೋಲ್ಟೇಜ್ ಸಭೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಉಪ ಮುಖ್ಯಮಂತ್ರಿ D. K. Shivakumar ಹೈಕಮಾಂಡ್ ನಾಯಕರ ಎದುರೇ ಖಡಕ್ ನಿಲುವು ತಾಳಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸರ್ಕಾರ ರಚನೆಯ ವೇಳೆ ನಡೆದಿದ್ದ ಅಧಿಕಾರ ಹಂಚಿಕೆ ಒಪ್ಪಂದವನ್ನು ಜಾರಿಗೆ ತರಬೇಕು ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದು, ಈ ಸಂಬಂಧ ಮೂರು ಮಹತ್ವದ ಷರತ್ತುಗಳನ್ನು ಕಾಂಗ್ರೆಸ್ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ.

ಮೊದಲ ಷರತ್ತಾಗಿ, “ಸರ್ಕಾರ ರಚನೆಯಾಗುವಾಗ ನಡೆದ ಮಾತುಕತೆಯಂತೆ ಅಧಿಕಾರ ಹಂಚಿಕೆ ಜಾರಿಯಾಗಬೇಕು. ಮುಖ್ಯಮಂತ್ರಿ Siddaramaiah ಹಾಗೂ ಹೈಕಮಾಂಡ್ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಕಾಲಮಿತಿ ಮುಗಿದಿರುವುದರಿಂದ ಇದೀಗ ನಾಯಕತ್ವ ಬದಲಾವಣೆ ಆಗಲೇಬೇಕು” ಎಂದು ಡಿಕೆಶಿ ಹೇಳಿದ್ದಾರೆ ಎನ್ನಲಾಗಿದೆ.

ಎರಡನೇ ಷರತ್ತಿನಲ್ಲಿ, ಒಂದು ವೇಳೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲು ತೀರ್ಮಾನಿಸಿದ್ದರೆ, ಅದನ್ನು ಹೈಕಮಾಂಡ್ ಹಾಗೂ ಸಿಎಂ ಜಂಟಿಯಾಗಿ ಬಹಿರಂಗವಾಗಿ ಘೋಷಿಸಬೇಕು. ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲ ಹಾಗೂ ಊಹಾಪೋಹಗಳಿಗೆ ತೆರೆ ಎಳೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೂರನೇ ಮತ್ತು ಅತ್ಯಂತ ಸ್ಫೋಟಕ ಷರತ್ತಾಗಿ, “ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ, ಉಪ ಮುಖ್ಯಮಂತ್ರಿ ಹುದ್ದೆಯೂ ಬೇಡ. ಎರಡಕ್ಕೂ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಧರ್ಮಸಂಕಟ ಉಂಟುಮಾಡಿದ್ದು, ದೆಹಲಿಯ ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ Mallikarjun Kharge, Rahul Gandhi ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದಾರೆ.

Continue Reading

ದೇಶ

2028ರವರೆಗೆ ಸಿದ್ದರಾಮಯ್ಯ ಮುಂದುವರಿಕೆ? ಡಿಕೆಶಿಗೆ ಭವಿಷ್ಯದ ಭರವಸೆ

Published

on

ನವದೆಹಲಿ: ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿ ‘ಇಂದಿರಾ ಭವನ’ದಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಹೈವೋಲ್ಟೇಜ್ ಸಭೆಯಲ್ಲಿ ಸದ್ಯಕ್ಕೆ ರಾಜ್ಯ ರಾಜಕಾರಣದಲ್ಲಿ ಯಾವುದೇ ತಕ್ಷಣದ ನಾಯಕತ್ವ ಬದಲಾವಣೆ ಇಲ್ಲದೆ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆಗಳು ದಟ್ಟವಾಗಿವೆ.

ಕಾಂಗ್ರೆಸ್ ನಾಯಕ Rahul Gandhi ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟನ್ನು ಕಾಪಾಡಿಕೊಳ್ಳುವ ಬಗ್ಗೆ ಪ್ರಮುಖ ಚರ್ಚೆ ನಡೆದಿದೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ಪಕ್ಷದ ಮುಖ್ಯ ಗುರಿ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ. ಜೊತೆಗೆ ಯಾವುದೇ ರೀತಿಯ ಬಣ ರಾಜಕೀಯ ಅಥವಾ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಹಿಸುವುದಿಲ್ಲ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ನಡುವಿನ ನಾಯಕತ್ವ ಸಮೀಕರಣದ ಕುರಿತೂ ಚರ್ಚೆ ನಡೆದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, 2028ರ ವಿಧಾನಸಭಾ ಚುನಾವಣೆಯ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಹೈಕಮಾಂಡ್ ನೀಡಿದೆ ಎಂದು ಹೇಳಲಾಗುತ್ತಿದೆ.

ಅವರೆಗೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರಿಯಲಿದ್ದು, ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಜವಾಬ್ದಾರಿಯನ್ನೂ ಅವರಿಗೆ ನೀಡಲಾಗಿದೆ. ಇದೇ ವೇಳೆ ಬಹುಕಾಲದಿಂದ ಚರ್ಚೆಯಲ್ಲಿರುವ ಸಚಿವ ಸಂಪುಟ ಪುನರ್‌ರಚನೆ ಕುರಿತು ಕೂಡ ಸಮಾಲೋಚನೆ ನಡೆದಿದ್ದು, ನಿಷ್ಠಾವಂತ ನಾಯಕರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ.

ಈ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಜಿಬಿಎ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಲಾಗಿದೆ. ಇಬ್ಬರೂ ನಾಯಕರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ರಾಹುಲ್ ಗಾಂಧಿ ಸಂದೇಶ ನೀಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ Mallikarjun Kharge ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಗೆ ಕೂಡ ತೆರೆ ಬಿದ್ದಿದ್ದು, ಅವರು ರಾಜ್ಯ ರಾಜಕೀಯಕ್ಕೆ ಮರಳುವುದಿಲ್ಲ ಎಂಬ ಸಂದೇಶ ಸಭೆಯಲ್ಲಿ ಸ್ಪಷ್ಟವಾಗಿದೆ.

Continue Reading

Trending