ಬೆಂಗಳೂರು
ಕಾಂಗ್ರೆಸ್ ಪಾಳ್ಯಯದಲ್ಲಿ ಕಾಣಿಸಿಕೊಂಡ ಸೈನಿಕ-ತಡರಾತ್ರಿ ಡಿಕೆಶಿ ಜೊತೆ ಸಿಪಿವೈ ಚರ್ಚೆ!
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಕಣದ ಅಭ್ಯರ್ಥಿಗಳ ಹೆಸರು ಬುಧವಾರ ಘೋಷಣೆಯಾಗಲಿದೆ, ಇದೇ ವೇಳೆ ಮಾಜಿ ಬಿಜೆಪಿ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್ ಮಂಗಳವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ, ಅಲ್ಲಿಗೆ ಸಿಪಿವೈ ಅವರು ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿದ್ದಗೊಳ್ಳುತ್ತಿರುವುದು ಖಚಿತವಾಗಿದೆ,
ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದ ಬಳಿಕ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕೆಂದು ಜೆಡಿಎಸ್ ಒತ್ತಾಯಿಸಿತ್ತು, ಅದರೆ ಬಿಜೆಪಿ ಪಕ್ಷದ ಎಲ್ಲಾ ಮುಖಂಡರೂ ಸಹ ಸಿ.ಪಿ.ಯೋಗೇಶ್ವರ್ ಪರವಾಗಿ ಬ್ಯಾಟಿಂಗ್ ನಡೆಸಿದ್ದರು, ಬಿಜೆಪಿಯಲ್ಲಿ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸುತ್ತಿದಂತೆಯೇ ಕಾಂಗ್ರೆಸ್ ಪಕ್ಷದತ್ತ ಸಿಪಿವೈ ಮುಖ ಮಾಡಿದ್ದರು, ಇದಕ್ಕೆ ಪೂರಕವೆಂಬಂತೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ಎಂದು ಹೇಳಿಕೆ ನೀಡಿದ್ದರೆ, ಡಿಸಿಎಂ ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಒಳ್ಳೆಯ ಕೆಲಸ ಮಾಡಿದ್ದಾರೆಂದು ಸಿಪಿಐ ಸ್ವಾಗತದ ಸುಳಿವು ನೀಡಿದ್ದರು,
ಇವೆಲ್ಲಾ ಬೆಳವಣಿಗೆಯ ನಡುವೆ ಸಿಪಿವೈ ಮಂಗಳವಾರ ಸಮಾಜವಾದಿ ಪಕ್ಷದಿಂದ ಬಿ.ಫಾರಂ ಪಡೆದು ಅಚ್ಚರಿ ಮೂಡಿಸಿದ್ದರು,
ಮಂಗಳವಾರ ಕಾಂಗ್ರೆಸ್ ನಾಯಕರು ತಮ್ಮ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿ ಸಿಪಿವೈ ಕಾಂಗ್ರೆಸ್ ಸೇರ್ಪಡೆಗೆ ಅನುಮತಿ ಪಡೆದಿದ್ದಾರೆನ್ನಲಾಗಿದ್ದು, ತಡರಾತ್ರಿ ಸಿಪಿವೈ ಹಾಗೂ ಡಿಕೆಶಿ ಮುಂದಿನ ನಡೆಗಳ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಚರ್ಚೆ ನಡೆಸಿದ್ದಾರೆ,
ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಗಳಿವೆ..
ಅಪರಾಧ
ಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಟ್ಟಹಾಸ; ಪ್ಯಾರಾ ಅಥ್ಲೀಟ್ ಹಣ ಕಳವು ಪ್ರಕರಣ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಪದ್ಮಶ್ರೀ ಪುರಸ್ಕೃತ ಪ್ಯಾರಾ ಅಥ್ಲೀಟ್ K. Y. Venkatesh ಅವರೇ ಸೈಬರ್ ಕಳ್ಳರ ಜಾಲಕ್ಕೆ ಬಲಿಯಾಗಿದ್ದಾರೆ.
ಮಲ್ಲೇಶ್ವರಂ ನಿವಾಸಿಯಾಗಿರುವ ವೆಂಕಟೇಶ್ ಅವರ ಕರ್ನಾಟಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹90 ಸಾವಿರ ಹಣ ನಿಗೂಢವಾಗಿ ಡ್ರಾ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ಅವರ ಮೊಬೈಲ್‌ಗೆ ಸರಣಿ ಒಟಿಪಿ ಸಂದೇಶಗಳು ಬಂದಿದ್ದು, ಅನುಮಾನಗೊಂಡ ಅವರು ಮರುದಿನ ಬ್ಯಾಂಕ್‌ಗೆ ತೆರಳಿ ವಿಚಾರಣೆ ನಡೆಸಿದ್ದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು “ಖಾತೆ ಸುರಕ್ಷಿತವಾಗಿದೆ” ಎಂದು ತಿಳಿಸಿದ್ದರು ಎನ್ನಲಾಗಿದೆ.
ಆದರೆ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರ ಗಮನಕ್ಕೆ ಬಾರದೇ ಖಾತೆಯಿಂದ ₹90 ಸಾವಿರ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಯಾವುದೇ ಒಟಿಪಿ ಅಥವಾ ಬ್ಯಾಂಕ್ ಮಾಹಿತಿ ಹಂಚಿಕೊಳ್ಳದೇ ಇದ್ದರೂ ಹಣ ಕಳವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೆಂಕಟೇಶ್, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೈಬರ್ ವಂಚಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಹುಟ್ಟಿನಿಂದಲೇ ಅಕೊಂಡ್ರೊಪ್ಲಾಸಿಯಾ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನೇ ಸವಾಲಾಗಿ ಸ್ವೀಕರಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ವೆಂಕಟೇಶ್, 50ಕ್ಕೂ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಈ ಘಟನೆ ಬೆಂಗಳೂರಿನಲ್ಲಿ ಸೈಬರ್ ಭದ್ರತೆ ಕುರಿತ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ.
ದೇಶ
“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ
ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್‌ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.
ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.
ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.
ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ದೇಶ
ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್ ಶೇರಿಂಗ್ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.
ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.
-
ದೇಶ4 hours agoದೆಹಲಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಕನ್ನಡ ಭವನದಲ್ಲಿ ಸಚಿವರ ಉಪಹಾರ ಸಭೆ
-
ದೇಶ5 hours ago‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ
-
ದೇಶ6 hours agoಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
-
ದೇಶ1 hour agoಹಕಿಂಪೂರ್ ಗಡಿಯಲ್ಲಿ ಭಾರಿ ಜನಸಮೂಹ; BSF ಅನುಮತಿಗಾಗಿ ಕಾದಿರುವ ಬಾಂಗ್ಲಾ ನಿವಾಸಿಗಳು
-
ದೇಶ4 hours agoಇಂದಿರಾ ಭವನದಲ್ಲಿ ಮೂರು ಸುತ್ತಿನ ಸಭೆ; ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ತೀವ್ರ
-
ಆರೋಗ್ಯ4 hours agoWHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್
-
ದೇಶ5 hours agoಸಿದ್ದರಾಮಯ್ಯ ರಾಜೀನಾಮೆ ಊಹಾಪೋಹಕ್ಕೆ ಹೊಸ ತಿರುವು; ಡಿಕೆಶಿಗೆ ಮತ್ತೆ ನಿರಾಸೆಯೇ?
-
ದೇಶ1 hour ago“ಗೋಹತ್ಯೆ ನಿಲ್ಲಿಸಿ, ಗೋವಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿ”; ಇಕ್ಬಾಲ್ ಅನ್ಸಾರಿ ಮನವಿ
