ರಾಜ್ಯ
ಮತ್ತೆ ಕಂಜನ್ ಆನೆ ಮೇಲೆ ದಾಳಿ ಮಾಡಿದ ಧನಂಜಯ; ಮಾವುತರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಮೈಸೂರು: ಈ ಹಿಂದೆ ದಸರಾ ವೇಳೆ ಮೈಸೂರು ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಧನಂಜಯ ಮತ್ತು ಕಂಜನ್ ಆನೆಗಳು ಮತ್ತೆ ಸಂಘರ್ಷದ ವಿಚಾರವಾಗಿ ಸುದ್ದಿಗೆ ಗ್ರಾಸವಾಗಿದೆ.
ಈ ಬಾರಿಯೂ ಧನಂಜಯ ಆನೆ ಮತ್ತೆ ಕಂಜನ್ ಆನೆ ಮೇಲೆ ದಾಳಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಥಳದಲ್ಲಿದ್ದ ಮಾವುತರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಪ್ರಸ್ತುತ ಕೊಡಗಿನ ದುಬಾರೆ ಆನೆ ಶಿಬಿರದಲ್ಲಿರುವ ಧನಂಜಯ ಮತ್ತು ಕಂಜನ್ ಆನೆಗಳು ನಿನ್ನೆ ಪರಸ್ಪರ ಕಾದಾಡಿಕೊಂಡಿವೆ.
ಸ್ಥಳೀಯರ ಪ್ರಕಾರ ಕಂಜನ್ ಆನೆ ಸುಮ್ಮನೆ ನಿಂತಿದ್ದ ವೇಳೆ ಏಕಾಏಕಿ ಧನಂಜಯ ಆನೆ ಕಂಜನ್ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ಆನೆ ಕೊಂಚ ಮುಂದೆ ಓಡಿದ್ದು ಆಗಲೂ ಬಿಡದ ಧನಂಜಯ ಆನೆ ಆದರ ಹಿಂಭಾಗದ ಮೇಲೆ ದಾಳಿ ಮಾಡಿದೆ.
ಈ ವೇಳೆ ಸ್ಥಳದಲ್ಲೇ ಇದ್ದ ಮಾವುತರು ಧನಂಜಯ ಆನೆಯನ್ನು ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದು ಬಳಿಕ ಆನೆಗಳು ತಮ್ಮ ತಮ್ಮ ಜಾಗದಲ್ಲಿ ಬಂದು ನಿಂತಿವೆ. ಇನ್ನು ಘಟನೆಯಲ್ಲಿ ಕಂಜನ್ ಆನೆಗೆ ಯಾವುದೇ ಗಂಭೀರ ಪೆಟ್ಟುಗಳಾಗಿಲ್ಲ ಎಂದು ಮಾವುತರು ಸ್ಪಷ್ಟಪಡಿಸಿದ್ದಾರೆ.
ಈ ಕಾದಾಟದ ಬಳಿಕ ಎರಡೂ ಆನೆಗಳನ್ನು ವೈದ್ಯರು ಪರೀಕ್ಷೆ ನಡೆಸಿದ್ದು ಎರಡೂ ಆನೆಗಳು ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಕಂಜನ್ ಆನೆ ಮೇಲೆ ಸತತ ದಾಳಿ
ಇನ್ನು ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ದಸರಾ ಸಂದರ್ಭದಲ್ಲೂ ಧನಂಜಯ ಆನೆ ಕಂಜನ್ ಮೇಲೆ ದಾಳಿ ಮಾಡಿತ್ತು. ಮೈಸೂರು ಅರಮನೆ ಆವರಣದಲ್ಲೇ ಕಂಜನ್ ಆನೆಯನ್ನು ಅಟ್ಟಾಡಿಸಿದ್ದ ಧನಂಜಯ ಆನೆ ದಾಳಿ ಮಾಡಿತ್ತು. ಈ ವೇಳೆ ರಸ್ತೆಗೆ ಓಡಿ ಹೋಗಿದ್ದ ಕಂಜನ್ ಆನೆಯನ್ನು ಬಳಿಕ ಅರಮನೆ ಆವರಣಕ್ಕೆ ಮಾವುತರು ಕರೆತಂದಿದ್ದರು.
ರಾಜ್ಯ
Government Office ಗಳಿಗೆ ಡಿಸಿ ದಿಢೀರ್ ಭೇಟಿ; ತಡವಾಗಿ ಬಂದ ಅಧಿಕಾರಿಗಳ ವಿರುದ್ಧ ಕಠಿಣ ಸೂಚನೆ
ಬೆಂಗಳೂರು ಗ್ರಾಮಾಂತರ: Government Office ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯಕ್ಕೆ ಹಾಜರಾಗುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸೋಮವಾರ ಬೆಳಗ್ಗೆ ವಿವಿಧ ಇಲಾಖೆಗಳಿಗೆ ದಿಢೀರ್ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದರು. ಬೆಳಗ್ಗೆ 10.30ರಿಂದ 11 ಗಂಟೆಯೊಳಗೆ ನಡೆದ ಈ ಪರಿಶೀಲನೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕ ಮೂಡಿಸಿತು.
ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ, ಭೂ ದಾಖಲೆ, ಆರೋಗ್ಯ, ಕೃಷಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಹಲವು ಕಚೇರಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸಮಯಕ್ಕೆ ಕಚೇರಿಗೆ ಬಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಿದರು.
ರಾಜ್ಯ ಸರ್ಕಾರ ಇತ್ತೀಚೆಗೆ ಸರ್ಕಾರಿ ನೌಕರರಿಗೆ ‘ಕರ್ತವ್ಯ’ ಡಿಜಿಟಲ್ ಹಾಜರಾತಿ ಆಪ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಿದೆ. ಇದರಂತೆ ಬೆಳಗ್ಗೆ 10 ಗಂಟೆಗೆ ಲಾಗಿನ್ ಹಾಗೂ ಸಂಜೆ 5.30ಕ್ಕೆ ಲಾಗ್‌ಔಟ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಪ್‌ನಲ್ಲಿ ಹಾಜರಾತಿ ದಾಖಲಿಸಿದ್ದಾರೆಯೇ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ ಹಾಗೂ ಫೀಲ್ಡ್ ವರ್ಕ್‌ಗೆ ತೆರಳಿದ್ದರೆ ಅದರ ವಿವರವನ್ನು ಆಪ್‌ನಲ್ಲಿ ದಾಖಲಿಸಿದ್ದಾರೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಪರಿಶೀಲನೆ ವೇಳೆ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳ ಕುರ್ಚಿಗಳು ಖಾಲಿ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು, ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಈ ಅನಿರೀಕ್ಷಿತ ಭೇಟಿ ಸಿಬ್ಬಂದಿಯನ್ನು ಅಚ್ಚರಿಗೆ ದೂಡಿದ್ದು, ಇಂತಹ ಪರಿಶೀಲನೆಗಳು ನಿರಂತರವಾಗಿ ನಡೆದರೆ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚುವುದರ ಜೊತೆಗೆ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಆಗಲಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಬೆಂಗಳೂರು
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು
ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.
ರಾಜ್ಯಪಾಲರ ಆದೇಶದಂತೆ, ತನಿಖೆ ಪೂರ್ಣಗೊಂಡು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಿತಾಸಕ್ತಿ ಸಂಘರ್ಷವನ್ನು ಘೋಷಿಸದೇ ಇದ್ದಿರುವುದು, ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿಯದಿರುವುದು ಹಾಗೂ ಮೀಸಲಾತಿ ಸೌಲಭ್ಯ ಪಡೆಯಲು ತಪ್ಪು ಮಾಹಿತಿ ನೀಡಿರುವ ಆರೋಪಗಳು ತನಿಖೆಗೆ ಕಾರಣವಾಗಿವೆ. ಪ್ರಕರಣದಲ್ಲಿ ಅವರ ಪುತ್ರಿಯೊಬ್ಬರು ವಾರ್ಷಿಕ ಆದಾಯವನ್ನು ಕೇವಲ ₹40,000 ಎಂದು ನಮೂದಿಸಿದ ಆದಾಯ ಪ್ರಮಾಣಪತ್ರ ಸಲ್ಲಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ‘ಕ್ರೀಮಿ ಲೇಯರ್’ ವಿನಾಯಿತಿ ಪಡೆಯಲು ಯತ್ನಿಸಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಸಂಬಂಧ ಕೆಪಿಎಸ್‌ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಆದಾಯ ಪ್ರಮಾಣಪತ್ರ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಬೆಳವಣಿಗೆಯಿಂದ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮತ್ತು ಆಡಳಿತ ವ್ಯವಸ್ಥೆಯ ಪಾರದರ್ಶಕತೆ ಕುರಿತು ಹೊಸ ಚರ್ಚೆ ಆರಂಭವಾಗಿದ್ದು, ತನಿಖೆಯ ಅಂತಿಮ ವರದಿಯತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.
ಅಪರಾಧ
Telangana ‘ಇದು ನನ್ನ ಆಯ್ಕೆ’ ಎಂದ ಎಸ್‌ಐಗೆ ದುಬಾರಿ ಆಯಿತು; ಡಿಜಿಪಿಯಿಂದ ಅಮಾನತು ಸೂಚನೆ
ಹೈದರಾಬಾದ್: Telangana ದ ರಂಗಾರೆಡ್ಡಿ ಜಿಲ್ಲೆಯಲ್ಲಿ ಆರು ವರ್ಷದ ಮೊಮ್ಮಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲನೆ ಮಾಡಲು ಅವಕಾಶ ನೀಡಿದ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ (SI) ವಿರುದ್ಧ ಪ್ರಕರಣ ದಾಖಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ಅಮಾನತು ಮಾಡಲು ಆದೇಶ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ವರದಿಗಳ ಪ್ರಕಾರ, ಸಬ್-ಇನ್‌ಸ್ಪೆಕ್ಟರ್ ಪೂಜಾರಿ ತಿರುಪತಿ ಅವರು ತಮ್ಮ ಆರು ವರ್ಷದ ಮೊಮ್ಮಗಳನ್ನು ನಗರದ ಜನನಿಬಿಡ ರಸ್ತೆಯಲ್ಲಿ ಕಾರಿನ ಸ್ಟೀರಿಂಗ್ ಹಿಂದೆ ಕುಳ್ಳಿರಿಸಿ ಚಾಲನೆ ಮಾಡಲು ಅವಕಾಶ ನೀಡಿದ್ದರು. ವಾಹನ ನಿಧಾನವಾಗಿ ಚಲಿಸುತ್ತಿದ್ದರೂ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿ ವಾಹನಗಳ ಸಾಲು ನಿರ್ಮಾಣವಾಗಿತ್ತು.
ಸ್ಥಳೀಯರು ಈ ಅಪಾಯಕಾರಿ ಕ್ರಮವನ್ನು ಪ್ರಶ್ನಿಸಿದಾಗ, “ಇದು ನನ್ನ ಆಯ್ಕೆ, ಪ್ರಶ್ನೆ ಮಾಡಲು ನೀವು ಯಾರು?” ಎಂದು ಅಧಿಕಾರಿ ಪ್ರತಿಕ್ರಿಯಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಪೊಲೀಸ್ ಇಲಾಖೆಯ ವಿರುದ್ಧ ಟೀಕೆ ವ್ಯಕ್ತಪಡಿಸಿ, ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಆಗ್ರಹಿಸಿದರು.
ಘಟನೆಯ ಬಳಿಕ ನರ್ಸಿಂಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 125 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 180 ಮತ್ತು 184ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಇದು ಆಟೋಮ್ಯಾಟಿಕ್ ಕಾರಾಗಿದ್ದರಿಂದ ವಾಹನ ತನ್ನ ನಿಯಂತ್ರಣದಲ್ಲೇ ಇತ್ತು ಎಂದು ಎಸ್‌ಐ ಹೇಳಿದ್ದು, ಮೊಮ್ಮಗಳನ್ನು ವಿಶ್ವದ ಅತಿ ಕಿರಿಯ ಚಾಲಕಿ ಎಂಬ ಗಿನ್ನೆಸ್ ವಿಶ್ವ ದಾಖಲೆ ಪ್ರಯತ್ನಕ್ಕೆ ಸಿದ್ಧಪಡಿಸುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ತೆಲಂಗಾಣ ಡಿಜಿಪಿ ಸಿ.ವಿ. ಆನಂದ್, ಸೈಬರಾಬಾದ್ ಪೊಲೀಸ್ ಆಯುಕ್ತರಿಗೆ ಆರೋಪಿತ ಎಸ್‌ಐ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ಆರಂಭಿಸುವಂತೆ ಸೂಚಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಕ್ರಮವನ್ನು ಇಲಾಖೆ ಕೈಗೊಳ್ಳಲಿದೆ.
-
ಬೆಂಗಳೂರು22 ಗಂಟೆಗಳು agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ದೇಶ22 ಗಂಟೆಗಳು agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ದೇಶ22 ಗಂಟೆಗಳು agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ದೇಶ23 ಗಂಟೆಗಳು agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ಕ್ರೀಡೆ23 ಗಂಟೆಗಳು agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
-
ಬೆಂಗಳೂರು22 ಗಂಟೆಗಳು agoShakthi Scheme ಬಳಿಕ BMTC ಸೇವೆ ಹೇಗಿದೆ? ಬಸ್ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
-
ರಾಜ್ಯ23 ಗಂಟೆಗಳು agoCabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?
-
ಕ್ರೀಡೆ6 ಗಂಟೆಗಳು agoEngland ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್? ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆ
