Connect with us

ಬೆಂಗಳೂರು

ಕಾವೇರಿ ವಿಚಾರದಲ್ಲಿ ಸ್ಟಾಲಿನ್‌ ಉದ್ಧಟತನ; ಎಂದ ವಾಟಾಳ್

Published

on

ಕಾವೇರಿ ವಿಚಾರದಲ್ಲಿ ಸ್ಟಾಲಿನ್‌ ಉದ್ಧಟತನ; ಎಂದ ವಾಟಾಳ್
ಕಾವೇರಿ ವಿಚಾರದಲ್ಲಿ ಸ್ಟಾಲಿನ್‌ ಉದ್ಧಟತನ; ಎಂದ ವಾಟಾಳ್

ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ಬದಲ್ಲಿ ಕನ್ನಡ ಚಳವಳಿ ವಾಟಾಳ್‌ ಪಕ್ಷದಿಂದ ತಮಟೆ ಚಳವಳಿ ನಡೆಸಲಾಯಿತು. ಕನ್ನಡ ಚಳವಳಿ ವಾಟಾಳ್‌ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ತಮಿಳುನಾಡು ಕಾವೇರಿ ವಿಚಾರದಲ್ಲಿ ಉದ್ಧಟತನ ತೋರುತ್ತಿದೆ. ತಮಿಳುನಾಡಿನ ಎಲ್ಲಾ ಸಿಎಂಗಳು ಕಾವೇರಿ ವಿಚಾರದಲ್ಲಿ ತಕರಾರು ಮಾಡುತ್ತಲೇ ಬಂದಿದ್ದಾರೆ. ಇದೇ ರೀತಿ ಮುಂದುವರಿದರೆ ನೀವು ಬೆಂಗಳೂರಿನ ಎಲ್ಲಾ ತಮಿಳಿಗರನ್ನು ವಾಪಸ್‌ ಕರೆಸಿಕೊಳ್ಳಿ. ರಾಜ್ಯದಲ್ಲಿ ತಮಿಳು ಚಿತ್ರ ಬಂದ್ ಮಾಡುತ್ತೇವೆ, ಗಡಿ ಬಂದ್ ಮಾಡುತ್ತೇವೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ ಈ ಹಿಂದೆ ಕಾಡಿನ ಹುಲಿಯಂತಿದ್ದರು. ಈಗ ಬೋನಿಗೆ ಹಾಕಿರುವ ಗಿಣಿಯಂತಾಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯದ್ಯಂತ ರೈತರು ಪ್ರತಿಭಟನೆ ನಡೆಸುತ್ತಾರೆ. ರೈತರು, ಕನ್ನಡಪರ ಹೋರಾಟಗಾರರನ್ನು ಬಂಧಿಸಿದರೂ ಜಗ್ಗಲ್ಲ ಎಂದು ಕಿಡಿಕಾರಿದರು.

ದೇಶ

‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್

Published

on

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಆರೋಪಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಡಾ. ಅಶ್ವತ್ಥ ನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ನಿಯೋಗದ ಭಾಗವಾಗಿದ್ದರು.

ನಿಯೋಗವು ಸಲ್ಲಿಸಿರುವ ದೂರಿನಲ್ಲಿ, ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಾಮೂಹಿಕ ಎಸ್‌ಐಆರ್ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಾದ ಬಿಎಲ್‌ಒಗಳು, ಕೆಲವು ಕಡೆ ಮಸೀದಿಗಳು, ಚೌಲ್ಟ್ರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರನ್ನು ಒಟ್ಟುಗೂಡಿಸಿ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರ ಜೊತೆಗೆ, ಬಿಎಲ್‌ಒಗಳ ಮೇಲೆ ಸರ್ಕಾರದ ಒತ್ತಡ, ಅನರ್ಹ ಮತದಾರರನ್ನು ಸೇರಿಸಲು ಯತ್ನ, ನಕಲಿ ದಾಖಲೆಗಳ ಬಳಕೆ ಹಾಗೂ ಪ್ರತಿಪಕ್ಷಗಳ ಬೂತ್ ಲೆವೆಲ್ ಏಜೆಂಟ್‌ಗಳಿಗೆ (BLA) ಮಾಹಿತಿ ನೀಡದೇ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಆರೋಪಗಳನ್ನೂ ಬಿಜೆಪಿ-ಜೆಡಿಎಸ್ ಮಾಡಿದೆ.

ರಾಮನಗರ, ಯಶವಂತಪುರ, ಜಯನಗರ, ಇಂಡಿ, ಕುಣಿಗಲ್ ಹಾಗೂ ಪಾವಗಡ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಡೆದಿರುವ ಸಾಮೂಹಿಕ ಎಸ್‌ಐಆರ್ ಅನ್ನು ರದ್ದುಪಡಿಸಿ, ಹೊಸದಾಗಿ ನಿಯಮಾನುಸಾರ ಮರುಪರಿಷ್ಕರಣೆ ನಡೆಸಬೇಕು ಎಂದು ನಿಯೋಗ ಆಗ್ರಹಿಸಿದೆ. ಅಗತ್ಯವಿದ್ದರೆ ಹೊರರಾಜ್ಯದ ಅಧಿಕಾರಿಗಳ ಮೂಲಕ ಎಸ್‌ಐಆರ್ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗವನ್ನು ಮನವಿ ಮಾಡಿದೆ.

ಸೂಚನೆ: ಮೇಲಿನ ಆರೋಪಗಳು ಬಿಜೆಪಿ-ಜೆಡಿಎಸ್ ನಿಯೋಗವು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ದೂರಿನಲ್ಲಿರುವ ಅಂಶಗಳಾಗಿದ್ದು, ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಪ್ರಕಟವಾಗಬೇಕಿದೆ.

Continue Reading

ದೇಶ

“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್

Published

on

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿದ ಕಲ್ಲು ಗಣಿಗಾರಿಕೆ ದುರಂತದಲ್ಲಿ ಏಳು ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ರಾಜ್ಯ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಇನ್ನೂ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿರುವ ಅವರು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ತಮ್ಮ ಪತ್ರದಲ್ಲಿ, ಈ ದುರಂತ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಬೆಂಗಳೂರು ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು ಹಾಗೂ ಮುಖ್ಯಮಂತ್ರಿಗಳು ಗಾಯಾಳುಗಳ ಆರೋಗ್ಯ ವಿಚಾರಿಸಿರುವುದನ್ನು ಉಲ್ಲೇಖಿಸಿದ್ದಾರೆ. ಆದರೆ, ಘಟನೆ ನಡೆದ ಬಳಿಕ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧವಾಗಲಿ ಅಥವಾ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧವಾಗಲಿ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಏಳು ಜನರ ಜೀವ ಹೋದರೂ ಕ್ರಮವಾಗದಿದ್ದರೆ ಇನ್ನೆಷ್ಟು ಜನ ಸಾಯಬೇಕು? ಮೃತಪಟ್ಟ ಕಾರ್ಮಿಕರ ಕುಟುಂಬಗಳ ಭವಿಷ್ಯವನ್ನು ಯಾರು ನೋಡಿಕೊಳ್ಳುತ್ತಾರೆ? ಅವರ ಮಕ್ಕಳ ಶಿಕ್ಷಣ ಹಾಗೂ ಬದುಕಿನ ಹೊಣೆ ಯಾರು ಹೊರುತ್ತಾರೆ?” ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ತಮ್ಮ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ಬಳಕೆಯಿಂದ ಜನರು ನಿರಂತರವಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿರುವ ಎಸ್.ಟಿ. ಸೋಮಶೇಖರ್, ಈ ಕುರಿತು ಈ ಹಿಂದೆಯೂ ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ. ಕಲ್ಲು ಸ್ಫೋಟದ ಶಬ್ದ ಮತ್ತು ಅಕ್ರಮ ಚಟುವಟಿಕೆಗಳನ್ನು ತಕ್ಷಣ ನಿಲ್ಲಿಸಿ, ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಈ ಮನವಿ ಮಾಡುತ್ತಿರುವುದಾಗಿ ತಿಳಿಸಿರುವ ಅವರು, ದುರಂತದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Continue Reading

ದೇಶ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ

Published

on

ಬೆಂಗಳೂರು: ಚಿನ್ನ ಖರೀದಿಸಲು ಯೋಜಿಸುತ್ತಿರುವವರಿಗೆ ಸಂತಸದ ಸುದ್ದಿ. ಕಳೆದ ವಾರ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Price Today) ಇದೀಗ ಮತ್ತೆ ಇಳಿಕೆಯ ಹಾದಿಯಲ್ಲಿದ್ದು, ಜುಲೈ 6, 2026 (ಸೋಮವಾರ) ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ದಾಖಲಾಗಿದೆ.

ಇಂದಿನ ದರದ ಪ್ರಕಾರ 24 ಕ್ಯಾರೆಟ್ ಶುದ್ಧ ಚಿನ್ನದ 1 ಗ್ರಾಂ ಬೆಲೆ ₹14,662 ಆಗಿದ್ದು, ನಿನ್ನೆಗೆ ಹೋಲಿಸಿದರೆ ₹11 ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,46,620 ಆಗಿದ್ದು, ₹110 ಇಳಿಕೆ ಕಂಡಿದೆ.

22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹13,440 ಆಗಿದ್ದು, ₹10 ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,34,400 ಆಗಿದ್ದು, ₹100 ಕಡಿಮೆಯಾಗಿದೆ. ಇದೇ ವೇಳೆ 18 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹10,997 ಹಾಗೂ 10 ಗ್ರಾಂ ಬೆಲೆ ₹1,09,970 ಆಗಿದೆ.

ಬೆಂಗಳೂರು ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ ಬೆಲೆ ಇಳಿಕೆಯಾಗಿರುವುದರ ಜೊತೆಗೆ ಬೆಳ್ಳಿ ದರದಲ್ಲೂ ಗಮನಾರ್ಹ ಕುಸಿತ ದಾಖಲಾಗಿದೆ. ಒಂದು ಗ್ರಾಂ ಬೆಳ್ಳಿ ₹245ಕ್ಕೆ ಲಭ್ಯವಿದ್ದು, ಒಂದು ಕಿಲೋಗ್ರಾಂ ಬೆಳ್ಳಿ ಬೆಲೆ ₹2,45,000 ಆಗಿದೆ. ಬೆಳ್ಳಿ ದರದಲ್ಲಿ ಸುಮಾರು ₹5,000 ಇಳಿಕೆ ಕಂಡುಬಂದಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ, ಡಾಲರ್ ಮೌಲ್ಯ ಹಾಗೂ ಅಂತರರಾಷ್ಟ್ರೀಯ ಆರ್ಥಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಪ್ರತಿದಿನ ಏರಿಳಿತ ಕಂಡುಬರುತ್ತಿದೆ. ಆಭರಣ ಖರೀದಿಸುವವರು ಖರೀದಿಗೂ ಮುನ್ನ ಸ್ಥಳೀಯ ಜ್ಯುವೆಲ್ಲರಿ ಅಂಗಡಿಗಳಲ್ಲಿ ದರವನ್ನು ಮತ್ತೊಮ್ಮೆ ಪರಿಶೀಲಿಸುವುದು ಸೂಕ್ತ.

ಇಂದಿನ ಚಿನ್ನದ ದರ

ಚಿನ್ನದ ಶುದ್ಧತೆ1 ಗ್ರಾಂ10 ಗ್ರಾಂ
24 ಕ್ಯಾರೆಟ್₹14,662₹1,46,620
22 ಕ್ಯಾರೆಟ್₹13,440₹1,34,400
18 ಕ್ಯಾರೆಟ್₹10,997₹1,09,970
Continue Reading

Trending