Connect with us

ದೇಶ

ಸಿಬಿಎಸ್‍ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

Published

on

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಫೆ.15 2025 ರಿಂದ ಆರಂಭವಾಗಲಿದೆ,
ಸಿಬಿಎಸ್‍ಇ ಅಧಿಕೃತ ವೆಬ್‍ಸೈಟ್ ನಲ್ಲಿ ನವೆಂಬರ್ 20 ರಂದು ಅಧಿಸೂಚನೆ ಹೊರಡಿಸಲಾಗಿದ್ದು, 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಡೇಟ್‍ಶೀಟ್ ಬಿಡುಗಡೆ ಮಡಲಾಗಿದೆ,
ಸಿಬಿಎಸ್‍ಇ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆ.15 ರಿಂದ ಆರಂಭವಾಗಿ ಮಾರ್ಚ್ 18 ರವರೆಗೆ ನಡೆಯಲಿದೆ, ಇನ್ನು 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಪೆಬ್ರವರಿ 15 ರಿಂದ ಆರಂಭವಾಗಿ ಏಪ್ರಿಲ್ 4 ರಂದು ಕೊನೆಗೊಳ್ಳಲಿವೆ ಎಂದು ತಿಳಿಸಿದೆ,
ಇದೇ ಮೊದಲ ಬಾರಿಗೆ ಸಿಬಿಎಸ್‍ಇ ಪರೀಕ್ಷಾ ಮಂಡಳಿಯು ಪರೀಕ್ಷೆ ಆರಂಭವಾಗುವ ಕನಿಷ್ಠ 86 ದಿನಗಳ ಮೊದಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ, ವಿದ್ಯಾರ್ಥಿಯು ಆಯ್ಕೆ ಮಾಡಿದ ಯಾವುದೇ ಎರಡು ವಿಷಯಗಳು ಒಂದೇ ದಿನಾಂಕದಂದು ಬರದಂತೆ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ, ಅಲ್ಲದೇ ವಿದ್ಯಾರ್ಥಿಗಳಿಗೆ ಪರೀಕ್ಷೆ ತಯಾರಿ ನಡೆಸಲು ಹೆಚ್ಚಿನ ಸಮಯಾವಕಾಶ ದೊರೆತಂತಾಗಿದೆ

ದೇಶ

ಲೋಕಸಭೆ-ವಿಧಾನಸಭೆ ಚುನಾವಣೆ ಒಂದೇ ದಿನ? 2029 ಗುರಿಯಾಗಿಸಿಕೊಂಡ ಕೇಂದ್ರದ ಯೋಜನೆ

Published

on

ನವದೆಹಲಿ: ದೇಶದಲ್ಲಿ ಹಲವು ವರ್ಷಗಳಿಂದ ಚರ್ಚೆಯಾಗುತ್ತಿರುವ ‘ಒಂದು ದೇಶ-ಒಂದು ಚುನಾವಣೆ’ (One Nation One Election) ವ್ಯವಸ್ಥೆಯನ್ನು 2029ರ ಲೋಕಸಭೆ ಚುನಾವಣೆ (Lok Sabha Election 2029) ವೇಳೆಗೆ ಜಾರಿಗೆ ತರಲು ಜಂಟಿ ಸಂಸದೀಯ ಸಮಿತಿ (JPC) ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಿದೆ. ಈ ಕುರಿತು ಜೆಪಿಸಿ ಅಧ್ಯಕ್ಷ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದು, ಎಲ್ಲಾ ರಾಜ್ಯಗಳು ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಾನುಮತದ ಕಾರ್ಯವಿಧಾನ ರೂಪಿಸಲು ಸಮಿತಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಮಾತನಾಡಿದ ಅವರು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಂದೇ ವೇಳೆ ನಡೆಸುವ ಸಾಧ್ಯತೆಗಳ ಬಗ್ಗೆ ತಜ್ಞರು, ನಾಗರಿಕ ಸಮಾಜ ಹಾಗೂ ವಿವಿಧ ವಲಯಗಳ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಸಮಿತಿಯ ಪ್ರಾಥಮಿಕ ಸಮಾಲೋಚನೆಗಳಲ್ಲಿ ಭಾಗವಹಿಸಿದ ಸುಮಾರು 99 ಪ್ರತಿಶತ ನಾಗರಿಕರು ಈ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ ಹಾಗೂ ಗೋವಾ ಸೇರಿದಂತೆ ಹಲವು ರಾಜ್ಯಗಳಿಗೆ ಜೆಪಿಸಿ ಭೇಟಿ ನೀಡಿ ಸಂವಿಧಾನ ತಜ್ಞರು, ಶಿಕ್ಷಣ ತಜ್ಞರು ಮತ್ತು ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದೆ. ರಾಜ್ಯ ವಿಧಾನಸಭೆಗಳ ಅವಧಿಯನ್ನು ಲೋಕಸಭೆ ಚುನಾವಣೆಯೊಂದಿಗೆ ಹೊಂದಾಣಿಕೆ ಮಾಡುವ ಕುರಿತು ಅಭಿಪ್ರಾಯ ಸಂಗ್ರಹ ನಡೆಯುತ್ತಿದೆ.

ಜೆಪಿಸಿ ಪ್ರಕಾರ, ಒಂದು ದೇಶ-ಒಂದು ಚುನಾವಣೆ ಜಾರಿಯಾದರೆ ಪದೇಪದೇ ಜಾರಿಯಾಗುವ ಮಾದರಿ ನೀತಿ ಸಂಹಿತೆ (Model Code of Conduct) ಸಮಸ್ಯೆ ಕಡಿಮೆಯಾಗಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆ. ಜೊತೆಗೆ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಪ್ರಮಾಣ ಕಡಿಮೆಯಾಗುವುದರಿಂದ ಶಿಕ್ಷಣ ಕ್ಷೇತ್ರಕ್ಕೂ ಅನುಕೂಲವಾಗಲಿದೆ. ಪ್ರತ್ಯೇಕ ಚುನಾವಣೆಗಳಿಗೆ ಆಗುವ ಸಾವಿರಾರು ಕೋಟಿ ರೂಪಾಯಿ ವೆಚ್ಚವನ್ನು ಉಳಿತಾಯ ಮಾಡಿ ಮೂಲಸೌಕರ್ಯ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಬಳಸುವ ಅವಕಾಶ ಸಿಗಲಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

Continue Reading

ದೇಶ

ಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್‌ನಲ್ಲಿ ಖಲಿಸ್ತಾನಿ ಘೋಷಣೆ

Published

on

ಮೆಲ್ಬೋರ್ನ್: ಆಸ್ಟ್ರೇಲಿಯಾ (Australia) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಂಗಿದ್ದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಖಲಿಸ್ತಾನಿ ಬೆಂಬಲಿಗನೊಬ್ಬ ಭಾರತ ವಿರೋಧಿ ಘೋಷಣೆ ಕೂಗಿದ ಘಟನೆ ಭದ್ರತಾ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆಯ ಬಳಿಕ ಸ್ಥಳೀಯ ಭದ್ರತಾ ಸಿಬ್ಬಂದಿ ಹಾಗೂ ವಿಕ್ಟೋರಿಯಾ ಪೊಲೀಸರು (Victoria Police) ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರತಿಭಟನಾಕಾರನನ್ನು ವಶಕ್ಕೆ ಪಡೆದು ಹೋಟೆಲ್ ಆವರಣದಿಂದ ಹೊರಗೆ ಕರೆದೊಯ್ದಿದ್ದಾರೆ.

ಮಾಹಿತಿಯ ಪ್ರಕಾರ, ಕೆಲ ಪ್ರತಿಭಟನಾಕಾರರು ಹೋಟೆಲ್ ಹೊರಭಾಗದಲ್ಲಿ ಖಲಿಸ್ತಾನಿ ಧ್ವಜಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಅವರಲ್ಲಿ ಒಬ್ಬ ವ್ಯಕ್ತಿ ಹೋಟೆಲ್‌ನ ಬಾಲ್ಕನಿ ಭಾಗದವರೆಗೆ ತೆರಳಿ ಕೆಲಕಾಲ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆ ಪ್ರಧಾನಿ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಭಾರತದ ಪ್ರಧಾನಿ ತಂಗಿದ್ದ ಹೋಟೆಲ್‌ ಸುತ್ತಮುತ್ತ ಕಠಿಣ ಭದ್ರತಾ ವ್ಯವಸ್ಥೆ ಜಾರಿಯಲ್ಲಿದ್ದರೂ, ಪ್ರತಿಭಟನಾಕಾರ ಹೋಟೆಲ್ ಪ್ರದೇಶದೊಳಗೆ ಪ್ರವೇಶಿಸಿರುವುದು ಗಮನ ಸೆಳೆದಿದೆ. ಘಟನೆಗೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಭದ್ರತಾ ಸಂಸ್ಥೆಗಳು ತನಿಖೆ ಆರಂಭಿಸಿದ್ದು, ಭದ್ರತಾ ಲೋಪದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ವಿದೇಶಗಳಲ್ಲಿ ಭಾರತೀಯ ರಾಯಭಾರ ಕಚೇರಿಗಳು, ಭಾರತೀಯ ನಾಯಕರು ಹಾಗೂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೆಲವು ಖಲಿಸ್ತಾನಿ ಬೆಂಬಲಿಗರು ಪ್ರತಿಭಟನೆ ನಡೆಸಿರುವ ಘಟನೆಗಳು ಹಲವು ಬಾರಿ ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ವೇಳೆ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಧಿಕೃತ ತನಿಖೆ ಮುಂದುವರಿದಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಭಟನೆಯ ಹಿಂದೆ ಯಾವುದೇ ಸಂಘಟಿತ ಭದ್ರತಾ ಉಲ್ಲಂಘನೆ ಇದೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Continue Reading

ದೇಶ

ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಹಿನ್ನಡೆ: ದೆಹಲಿ ಕೋರ್ಟ್ ಮಹತ್ವದ ತೀರ್ಪು

Published

on

ನವದೆಹಲಿ: ಬಾಲಿವುಡ್ ನಟ ಹಾಗೂ ಹಾಸ್ಯ ಕಲಾವಿದ ರಾಜ್‌ಪಾಲ್ ಯಾದವ್ (Rajpal Yadav) ವಿರುದ್ಧದ ಚೆಕ್ ಬೌನ್ಸ್ (Cheque Bounce Case) ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿರುವ ನ್ಯಾಯಾಲಯವು ಅವರಿಗೆ ಮೂರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ವರದಿಗಳ ಪ್ರಕಾರ, ರಾಜ್‌ಪಾಲ್ ಯಾದವ್ ವಿರುದ್ಧ ದಾಖಲಾಗಿದ್ದ ಏಳು ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರತಿ ಪ್ರಕರಣಕ್ಕೂ ₹1.05 ಕೋಟಿ ದಂಡದಂತೆ ಒಟ್ಟು ₹7.35 ಕೋಟಿ ಪಾವತಿಸಲು ಸೂಚಿಸಲಾಗಿದೆ. ಜೊತೆಗೆ ದೂರುದಾರರಿಗೆ ₹1,04,75,000 ಪರಿಹಾರ ನೀಡುವಂತೆ ಹಾಗೂ ಪ್ರತಿ ಪ್ರಕರಣಕ್ಕೆ ₹25,000 ರಾಜ್ಯಕ್ಕೆ ದಂಡ ಪಾವತಿಸುವಂತೆ ಆದೇಶಿಸಿರುವುದಾಗಿ ವರದಿಯಾಗಿದೆ.

ಈ ಪ್ರಕರಣದ ಹಿನ್ನೆಲೆ 2010ರಲ್ಲಿ ನಿರ್ಮಾಣಗೊಂಡ ‘ಅತಾ ಪತಾ ಲಾಪತಾ’ ಸಿನಿಮಾಗೆ ಸಂಬಂಧಿಸಿದೆ. ಈ ಚಿತ್ರ ನಿರ್ಮಾಣ ಮತ್ತು ನಿರ್ದೇಶನಕ್ಕಾಗಿ ರಾಜ್‌ಪಾಲ್ ಯಾದವ್ ಮುರಳಿ ಪ್ರಾಜೆಕ್ಟ್ಸ್ ಸಂಸ್ಥೆಯಿಂದ ₹5 ಕೋಟಿ ಸಾಲ ಪಡೆದಿದ್ದರು ಎಂದು ಹೇಳಲಾಗಿದೆ. ಸಿನಿಮಾ ವಾಣಿಜ್ಯವಾಗಿ ಯಶಸ್ಸು ಕಾಣದ ಕಾರಣ ಸಾಲ ಮರುಪಾವತಿಯಲ್ಲಿ ವಿಳಂಬವಾಗಿದ್ದು, ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು.

ಈ ಹಿಂದೆ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ರಾಜ್‌ಪಾಲ್ ಯಾದವ್ ಅವರಿಗೆ ತಾತ್ಕಾಲಿಕ ಜಾಮೀನು ದೊರೆತಿತ್ತು. ಇತ್ತೀಚೆಗೆ ಬಿಡುಗಡೆಯಾದ ‘ವೆಲ್ಕಮ್ ಟು ಜಂಗಲ್’ ಚಿತ್ರದಲ್ಲಿಯೂ ಅವರು ಅಭಿನಯಿಸಿದ್ದರು.

ಗಮನಿಸಿ: ಈ ಸುದ್ದಿ ವಿವಿಧ ಮಾಧ್ಯಮ ವರದಿಗಳ ಆಧಾರಿತವಾಗಿದೆ. ಪ್ರಕರಣದ ಕುರಿತು ಸಂಬಂಧಿತ ನ್ಯಾಯಾಲಯದ ಅಧಿಕೃತ ಆದೇಶ ಹಾಗೂ ದಾಖಲೆಗಳ ಆಧಾರದ ಮೇಲೆ ಮುಂದಿನ ಮಾಹಿತಿ ಪ್ರಕಟವಾಗುವ ಸಾಧ್ಯತೆ ಇದೆ.

Continue Reading

Trending