ಬೆಂಗಳೂರು
ನಾನು ನಿಮ್ಮಷ್ಟು ಬುದ್ಧವಂತನಲ್ಲ, ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ ಖರ್ಗೆ

ಬೆಂಗಳೂರು: ಡಿಎಂಕೆ ಮುಖಂಡ ದಯಾನಿಧಿ ಸ್ಟಾಲಿನ್ ಅವರ ಸನಾತನ ಧವರ್i ಕೊನೆಗಾಣಿಸುವ ಹೇಳಿಕೆಂiÀiನ್ನು ಪ್ರಯಾಂಕ್ ಖರ್ಗೆಗೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ, ಅವರ ತಲೆ ಕತ್ತರಿಸುತ್ತೀರಾ? ಎಂದು ಸವಾಲೆಸೆದಿದ್ದಾರೆ,
ಮೈಕ್ರೊ ಬ್ಲಾಗಿಂಗ್ ಎಕ್ಸ್‍ನಲ್ಲಿ ಸಂತೋಷ್ ಟ್ವೀಟ್‍ಗೆ ಪ್ರತಿಕ್ರಯೆ ನೀಡಿರುವ ಖರ್ಗೆ ದಯವಿಲ್ಲದ ಧರ್ಮ ಯಾವುದಯ್ಯಾ, ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೊಡಲಸಂಗಯ್ಯನಂತಲ್ಲಕೊಲ್ಲನಯ್ಯ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ್ದಾರೆ,
ಬಿ ಎಲ್ ಸಂತೋಷ್ ಅವರೇ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ, ಆ ಸೋಂಕುಗಳು ಈಗಲೂ ಮುಂದುವರಿದಿದ್ದು, ಮನುಷ್ಯರ ನಡುವೆ ತಾರತಾಮ್ಯ ಸೃಷ್ಟಿಸಿವೆ, ಮನುಷ್ಯರು ಎಂಬ ಘನತೆಯನ್ನು ನೀಡಲು ಕೆಲವರಿಗೆ ನಿರಾಕರಿಸಿವೆ ಎಂದಿದ್ದಾರೆ,
ನಾನು ನಿಮ್ಮಷ್ಟು ಬುದ್ಧವಂತನಲ್ಲ, ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ, ಇಂಥ ಸಮಾಜವನ್ನು ಸೃಷ್ಟಿಸಿದವರು ಯಾರು, ಒಬ್ಬರು ಮತ್ತೊಬ್ಬರಿಗಿಂತ ನೀತಿವಂತರು ಎಂದು ಮಾಡಿದವರು ಯಾರು, ಜಾತಿ ಆಧಾರದಲ್ಲಿ ಸಮಾಜವನ್ನು ವಿಭಜಿಸಿದವರು ಯಾರು? ಒಂದಷ್ಟು ಜನರಿಗೆ ಏಕೆ ಅಸ್ಪøಶ್ಯರು? ಈಗಲು ಕೆಲ ದೇವಾಲಯಗಳಿಗೆ ಕೆಲವರಿಗೆ ಏಕೆ ಪ್ರವೇಶವಿಲ್ಲ, ಮಹಿಳೆಯರು ಕೀಳುಭಾವದಲ್ಲೇ ಬದುಕುವಂತೆ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಅಸಮಾನತೆ ಹಾಗೂ ದಬ್ಬಾಳಿಕೆಯ ಇರುವ ಜಾತಿ ಆಧಾರಿತ ಸಾಮಾಜಿಕ ರಚನೆಯನ್ನು ತಂದವರು ಯಾರು ಎಂದು ಪ್ರಶ್ನೆಗಳನ್ನು ಖರ್ಗೆ ಮುಂದಿಟ್ಟಿದ್ದಾರೆ,
ಸಮಾನ ಹಕ್ಕು ಮತ್ತು ಘನತೆಯ ಬದುಕನ್ನು ಪ್ರತಿಯೊಬ್ಬ ಮನುಷ್ಯರಿಗೂ ನೀಡುವ ಸೋಂಕನ್ನು ಗುಣಪಡಿಸಬೇಕಿದೆ, ಇವೆಲ್ಲದಕ್ಕೂ ಔಷಧ ನಮ್ಮ ಸಂವಿಧಾನದಲ್ಲಿದೆ, ಅದರೆ ನೀವುಗಳು ಅದನ್ನು ವಿರೋಧಿಸುತ್ತಿದ್ದೀರಿ, ನೀವೂ ಕರ್ನಾಟಕದವರೇ, ಬಸವಣ್ಣನವರು ಸಾರಿದ ಮಾನವತೆಯ ಸಾರವನ್ನು ಎಲ್ಲೆಡೆ ಹರಡು, ಅದರಿಂದ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ ಎಂದು ಖರ್ಗೆ ಹೇಳಿದ್ದಾರೆ,
ಅಪರಾಧ
Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.
ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು
ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.
ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.
ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:
- ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
- ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
- ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
- ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
- “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.
ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಬಿಎಂಪಿ
ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.
ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.
ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
“ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.
ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು9 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ