Connect with us

ಅಪರಾಧ

ಬಾಣಂತಿಯರ ಸರಣಿ ಸಾವಿಗೆ ಕಾರಣ ಬಹಿರಂಗ!

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆಯ ಬಾಣಂತಿಯರ ಸರಣಿ ಸಾವಿಗೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಎನ್ನುವ ವರದಿ ಬಹಿರಂಗವಾಗಿದೆ,
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಬಾಣಂತಿಯರ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು, ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ಈ ವರದಿ ನೀಡಿದೆ,
ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವಾಗಿದೆ, ಹೆರಿಗೆಯಾಗುವ ಗಭೀಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ ಕಳಪೆಯಾಗತ್ತು ಎಂಬ ವರದಿ ನೀಡಿದೆ ಎನ್ನಲಾಗಿದೆ,
ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ, ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ,
ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಈ ಬಗ್ಗೆ ಮಾತನಾಡಿ ವರದಿಯಲ್ಲಿ ಮೇಲ್ನೋಟಕ್ಕೆ ಐವಿ ಪ್ಲುಯೆಡ್‍ನಿಂದ ಸಮಸ್ಯ ಆಗಿದೆ ಅನ್ನೋದು ಗೊತ್ತಾಗಿದೆ, ಹೀಗಾಗಿ ಸ್ಯಾಂಪಲ್‍ಗಳನ್ನು ಲ್ಯಾಬ್ ಗೆ ಕಳುಹಿಸಲಾಗಿದೆ, ಇನ್ನೊಂದು ವಾರದಲ್ಲಿ ವರದಿ ಬರಲಿದೆ, ವರದಿ ಬಂದ ಬಳಿಕ ತಪ್ಪು ಸಾಬೀತಾದಲ್ಲಿ ಬ್ಲಾಕ್ ಲಿಸ್ಟ್ ಗೆ ಸೇರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ,

ಅಪರಾಧ

ಹಸಿ–ಒಣ ಕಸ ಬೇರ್ಪಡಿಸಲು ಸೂಚನೆ: ದಾವಣಗೆರೆಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ

ದಾವಣಗೆರೆ: ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ನೀಡಲು ತಿಳಿಸಿದ್ದ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮೆಹಬೂಬ್ ನಗರದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲ್ಲೆಗೊಳಗಾದವರು ಕರಿಬಸಪ್ಪ ಎಂಬ ಪೌರ ಕಾರ್ಮಿಕ ಹಾಗೂ ವಾಹನ ಚಾಲಕ ಎಂದು ತಿಳಿದುಬಂದಿದೆ. ಪ್ರತಿದಿನ ಮನೆಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಮಾಡುವ ವೇಳೆ ಸ್ಥಳೀಯ ನಿವಾಸಿಯೊಬ್ಬರೊಂದಿಗೆ ವಾಗ್ವಾದ ಉಂಟಾಗಿ, ಅದು ಹಲ್ಲೆಗೆ ತಿರುಗಿದೆ.

ಘಟನೆ ಹೇಗೆ ನಡೆದಿದೆ?

ಪೌರ ಕಾರ್ಮಿಕರು ಬೆಳಗ್ಗೆ ಕಸ ಸಂಗ್ರಹಣೆಗೆ ಮೆಹಬೂಬ್ ನಗರಕ್ಕೆ ತೆರಳಿದ್ದರು. ಈ ವೇಳೆ ಒಬ್ಬ ನಿವಾಸಿ ಹಸಿ ಕಸ ಮತ್ತು ಒಣ ಕಸವನ್ನು ಒಂದೇ ಬಕೆಟ್‌ನಲ್ಲಿ ನೀಡಿದ್ದಾನೆ. ಜೊತೆಗೆ ಮಗುವಿನ ಡೈಪರ್ ಕೂಡ ಸೇರಿಸಿದ್ದಾನೆ.

“ಡೈಪರ್ ಅನ್ನು ಪ್ರತ್ಯೇಕವಾಗಿ ಕೊಡಿ” ಎಂದು ಪೌರ ಕಾರ್ಮಿಕರು ತಿಳಿಸಿದಾಗ ಮಾತಿನ ಚಕಮಕಿ ಉಂಟಾಗಿದೆ. ಮಾತಿಗೆ ಮಾತು ಬೆಳೆದು ಸ್ಥಳೀಯರು ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಘಟನೆ ಖಂಡಿಸಿ ಪೌರ ಕಾರ್ಮಿಕರು ಮತ್ತು ಕಸ ಸಂಗ್ರಹಿಸುವ ವಾಹನ ಚಾಲಕರು Azad Nagar Police Station ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು. ಹಲ್ಲೆ ಮಾಡಿದವರನ್ನು ಬಂಧಿಸುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.

“ನಮ್ಮ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಕೆಲಸ ಮಾಡಲು ಭಯವಾಗುತ್ತಿದೆ. ನಮಗೆ ಭದ್ರತೆ ಒದಗಿಸಬೇಕು” ಎಂದು ಕಾರ್ಮಿಕರು ಆಗ್ರಹಿಸಿದರು.

ಮೆಹಬೂಬ್ ನಗರ, ಅಜಾದ್ ನಗರ, ಶಿವನಗರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕೆಲಸ ಮಾಡಲು ಆತಂಕವಿದೆ ಎಂದು ತಿಳಿಸಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading

ಅಪರಾಧ

KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ

ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.

ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending