ದೇಶ
ತಿರುವನಂತಪುರ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ – ಚೆನ್ನೈಗೆ ತುರ್ತು ಲ್ಯಾಂಡಿಂಗ್, ಸಂಸದರು ಸೇರಿ ನೂರಾರು ಪ್ರಯಾಣಿಕರು ಪಾರ
ನವದೆಹಲಿ: ತಿರುವನಂತಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ AI2455 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮವಾಗಿ ವಿಮಾನವನ್ನು ಚೆನ್ನೈಗೆ ತಿರುಗಿಸಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಹವಾಮಾನ ವೈಪರೀತ್ಯ ಕೂಡ ಸೇರಿ ಸಮಸ್ಯೆ ಉಂಟಾಗಿದ್ದು, ‘ಏರ್‌ಬಸ್ ಎ320’ ವಿಮಾನವು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು.
ಕಾಂಗ್ರೆಸ್ ನಾಯಕ ಮತ್ತು ಸಂಸದ ಕೆ.ಸಿ. ವೇಣುಗೋಪಾಲ್ ಸೇರಿದಂತೆ ನೂರಾರು ಪ್ರಯಾಣಿಕರು ವಿಮಾನದಲ್ಲಿದ್ದರು. ಈ ಘಟನೆಯ ನಂತರ, ಕೆ.ಸಿ. ವೇಣುಗೋಪಾಲ್ ಎಕ್ಸ್‌ನಲ್ಲಿ ತಮ್ಮ ಅನುಭವ ಹಂಚಿಕೊಂಡು ವಿಮಾನಯಾನದ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಅವರು ತಿಳಿಸಿದ್ದಾರೆ:
“ಟೇಕಾಫ್‌ನ ಒಂದು ಗಂಟೆಯ ನಂತರ ಪೈಲಟ್ ತಾಂತ್ರಿಕ ದೋಷವಿದೆ ಎಂದು ತಿಳಿಸಿದ್ದಾರೆ. ವಿಮಾನವನ್ನು ಚೆನ್ನೈಗೆ ತಿರುಗಿಸಲಾಯಿತು. ಮೊದಲ ಲ್ಯಾಂಡಿಂಗ್ ಪ್ರಯತ್ನ ವಿಫಲವಾದರೂ, ಎರಡನೇ ಪ್ರಯತ್ನದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು. ಅದೃಷ್ಟದಿಂದ ಎಲ್ಲರೂ ಪಾರಾದರು.”
ಏರ್ ಇಂಡಿಯಾ ಪ್ರಕಟಣೆಯ ಪ್ರಕಾರ, ವಿಮಾನವನ್ನು ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿಸಿದ ನಂತರ ತಪಾಸಣೆ ನಡೆಸಲಾಗುತ್ತಿದೆ. ಪ್ರಯಾಣಿಕರನ್ನು ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಲಾಗಿದೆ.
ಬೆಂಗಳೂರು
Nalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
ಬೆಂಗಳೂರು: ಜೆ.ಪಿ.ನಗರದಲ್ಲಿರುವ ಪ್ರತಿಷ್ಠಿತ ನNalanda English Medium School ವಾರ್ಷಿಕೋತ್ಸವ ಹಲವು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ S.Janaki ಅವರ ವಿವಿಧ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯನ ಹಾಗೂ ನೃತ್ಯದ ಮೂಲಕ ಪ್ರಸ್ತುತಪಡಿಸಿ ಗಾನಕೋಗಿಲೆಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮಕ್ಕೆ ಮಿಸ್ ಇಂಡಿಯಾ ಕಿರೀಟ ವಿಜೇತೆ, ಕಿರುತೆರೆ ಹಾಗೂ ಚಲನಚಿತ್ರ ಕಲಾವಿದೆ ಸ್ಮೀತಾಪ್ರಭು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಶೈಕ್ಷಣಿಕ ಸಾಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅಗತ್ಯ ಎಂದು ಹೇಳಿದರು.
ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ಸ್ಮೀತಾಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನಮನ
ವಾರ್ಷಿಕೋತ್ಸವದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಎಸ್. ಜಾನಕಿ ಅವರ ವಿವಿಧ ಭಾಷೆಗಳ ಹಾಡುಗಳನ್ನು ಗಾಯನ ಮತ್ತು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಸಂಗೀತ ಹಾಗೂ ನೃತ್ಯದ ಸುಂದರ ಸಂಯೋಜನೆ ಪ್ರೇಕ್ಷಕರ ಗಮನ ಸೆಳೆಯಿತು.
ವಿದ್ಯಾರ್ಥಿಗಳ ಈ ವಿಶೇಷ ಪ್ರದರ್ಶನದ ಮೂಲಕ ಅಗಲಿದ ಹಿರಿಯ ಗಾಯಕಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಪಾಲಕರು ಹಾಗೂ ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ
ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸ್ಮೀತಾಪ್ರಭು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕುಪ್ಪುರಾಜ್, ಕಾರ್ಯದರ್ಶಿ ಶಿವಶಂಕರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ದೇಶ
Mantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
ರಾಯಚೂರು: Mantralaya ದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 355ನೇ Aaradhana Mahotsavaಕ್ಕೆ ಇಂದಿನಿಂದ (ಆ.27) ಅದ್ಧೂರಿ ಚಾಲನೆ ದೊರೆಯಲಿದೆ. ಏಳು ದಿನಗಳ ಕಾಲ ನಡೆಯಲಿರುವ ಸಪ್ತರಾತ್ರೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಇಂದು ಸಂಜೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಗೋ, ಗಜ, ಅಶ್ವ, ಧಾನ್ಯ ಹಾಗೂ ಲಕ್ಷ್ಮಿ ಪೂಜೆಯೊಂದಿಗೆ ಆರಾಧನಾ ಮಹೋತ್ಸವದ ಕಾರ್ಯಕ್ರಮಗಳು ಆರಂಭವಾಗಲಿವೆ.
ಸೆ.2ರವರೆಗೆ ಸಪ್ತರಾತ್ರೋತ್ಸವ
ಆ.27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ. ಆರಾಧನಾ ಮಹೋತ್ಸವದ ಪ್ರಮುಖ ದಿನಗಳಲ್ಲಿ ಆ.29ರಂದು ಪೂರ್ವಾರಾಧನೆ, ಆ.30ರಂದು ಮಧ್ಯಾರಾಧನೆ ಹಾಗೂ ಆ.31ರಂದು ಉತ್ತರಾರಾಧನೆ ನಡೆಯಲಿದೆ.
ಈ ಸಂದರ್ಭದಲ್ಲಿ ಮಂತ್ರಾಲಯ ಮಠದ ಆವರಣದಲ್ಲಿರುವ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನಗಳ ಕಾಲ ತೆಪ್ಪೋತ್ಸವ ಕೂಡ ಆಯೋಜಿಸಲಾಗಿದೆ. ಭಕ್ತರು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗಿದೆ.
ಸಾಧಕರಿಗೆ ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ
ಆರಾಧನಾ ಮಹೋತ್ಸವದ ಅಂಗವಾಗಿ ಆ.29ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಇನ್ನು ಆ.31ರಂದು ಆರಾಧನಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಮಹಾರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಸುರಿಸುವ ಕಾರ್ಯಕ್ರಮವೂ ನಡೆಯಲಿದ್ದು, ಭಕ್ತರಿಗೆ ವಿಶೇಷ ಆಧ್ಯಾತ್ಮಿಕ ಅನುಭವ ನೀಡುವ ನಿರೀಕ್ಷೆಯಿದೆ.
ಮಂತ್ರಾಲಯದಲ್ಲಿ ಈಗಾಗಲೇ ಆರಾಧನಾ ಮಹೋತ್ಸವದ ಸಿದ್ಧತೆಗಳು ಪೂರ್ಣಗೊಂಡಿದ್ದು, ಭಕ್ತರ ಅನುಕೂಲಕ್ಕಾಗಿ ವಿವಿಧ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಏಳು ದಿನಗಳ ಈ ವಿಶೇಷ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಲಿದ್ದಾರೆ.
ಬೆಂಗಳೂರು
Anand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
ಬೆಂಗಳೂರು: Kempegowda International Airport ದಲ್ಲಿರುವ ಆನಂದ್ ಸ್ವೀಟ್ಸ್ ಮಳಿಗೆಯಿಂದ ಖರೀದಿಸಿದ್ದ ಸಿಹಿತಿಂಡಿಯಲ್ಲಿ ಕಲ್ಲಿನಂತಿರುವ ಗಟ್ಟಿಯಾದ ವಸ್ತು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಹಿತಿಂಡಿ ಸೇವಿಸುವ ವೇಳೆ ನಾಲಿಗೆ ಹಾಗೂ ಹಲ್ಲಿಗೆ ಗಾಯವಾಗಿದೆ ಎಂದು ಆರೋಪಿಸಿರುವ ಗ್ರಾಹಕರು ಇದೀಗ ಸಂಸ್ಥೆಗೆ ಕಾನೂನು ನೋಟಿಸ್ ನೀಡಿದ್ದಾರೆ.
ಆಗಸ್ಟ್ 20ರಂದು ಸಂಜೆ 5.48ರ ಸುಮಾರಿಗೆ ಕಾರ್ತಿಕ್ ಗವಾಜಿ ಎಂಬುವವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆನಂದ್ ಸ್ವೀಟ್ಸ್ ಮಳಿಗೆಯಲ್ಲಿ ಒಟ್ಟು ₹2,050 ಮೌಲ್ಯದ ಸಿಹಿತಿಂಡಿಗಳನ್ನು ಖರೀದಿಸಿದ್ದರು. ಇದಕ್ಕಾಗಿ ಫೋನ್‌ಪೇ ಮೂಲಕ ಹಣ ಪಾವತಿಸಲಾಗಿದ್ದು, ವಹಿವಾಟಿನ ದಾಖಲೆಗಳು ತಮ್ಮ ಬಳಿ ಇರುವುದಾಗಿ ಕಾನೂನು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಸಿಹಿತಿಂಡಿಗಳನ್ನು ಉಡುಗೊರೆಯಾಗಿ ನೀಡಲಾಗಿತ್ತು ಎನ್ನಲಾಗಿದ್ದು, ಬಳಿಕ ಅವುಗಳನ್ನು ಸೇವಿಸುವ ಸಂದರ್ಭದಲ್ಲಿ ಗಟ್ಟಿಯಾದ, ಕಲ್ಲಿನಂತಿರುವ ವಸ್ತು ಪದೇಪದೇ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಸಿಹಿತಿಂಡಿ ಸೇವಿಸುತ್ತಿದ್ದ ವ್ಯಕ್ತಿಯ ನಾಲಿಗೆ ಹಾಗೂ ಹಲ್ಲಿಗೆ ಗಾಯವಾಗಿದೆ ಎಂದು ದೂರಲಾಗಿದೆ.
ಆಹಾರ ಗುಣಮಟ್ಟದ ಬಗ್ಗೆ ಪ್ರಶ್ನೆ
ಘಟನೆ ಹಿನ್ನೆಲೆಯಲ್ಲಿ ಸಿಹಿತಿಂಡಿಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ. ಉತ್ಪನ್ನದ ತಯಾರಿಕೆ, ಪ್ಯಾಕಿಂಗ್, ಗುಣಮಟ್ಟ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಸಂಸ್ಥೆ ಸ್ಪಷ್ಟನೆ ನೀಡಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.
ಕಾನೂನು ನೋಟಿಸ್‌ನಲ್ಲಿ ಸಿಹಿತಿಂಡಿಗಾಗಿ ಪಾವತಿಸಿದ ₹2,050 ಹಣವನ್ನು ಮರುಪಾವತಿಸುವುದರ ಜೊತೆಗೆ ಗಾಯಗೊಂಡ ವ್ಯಕ್ತಿಯ ವೈದ್ಯಕೀಯ ಹಾಗೂ ದಂತ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವಂತೆ ಆಗ್ರಹಿಸಲಾಗಿದೆ. ದೈಹಿಕ ನೋವು, ಮಾನಸಿಕ ಸಂಕಷ್ಟ ಹಾಗೂ ಇತರ ನಷ್ಟಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕೂಡ ಬೇಡಿಕೆ ಇಡಲಾಗಿದೆ.
ದಾಖಲೆ ಸಂರಕ್ಷಣೆಗೆ ಸೂಚನೆ
ಸಂಬಂಧಿತ ಉತ್ಪನ್ನದ ಬ್ಯಾಚ್ ಅಥವಾ ಲಾಟ್ ವಿವರ, ಗುಣಮಟ್ಟ ಪರಿಶೀಲನಾ ದಾಖಲೆಗಳು ಹಾಗೂ ಉತ್ಪನ್ನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಸಿಸಿಟಿವಿ ದೃಶ್ಯಗಳು, ಪಾವತಿ ದಾಖಲೆಗಳು, ಮಾರಾಟ ದಾಖಲೆಗಳು ಹಾಗೂ ಉತ್ಪನ್ನದ ಬ್ಯಾಚ್ ಮಾಹಿತಿಯನ್ನು ಸಂರಕ್ಷಿಸುವಂತೆಯೂ ಸೂಚಿಸಲಾಗಿದೆ.
ನೋಟಿಸ್ ಸ್ವೀಕರಿಸಿದ 48 ಗಂಟೆಗಳೊಳಗೆ ಲಿಖಿತ ಉತ್ತರ ನೀಡಬೇಕು ಎಂದು ಕಾರ್ತಿಕ್ ಗವಾಜಿ ಒತ್ತಾಯಿಸಿದ್ದಾರೆ. ಸೂಕ್ತ ಪ್ರತಿಕ್ರಿಯೆ ಅಥವಾ ಪರಿಹಾರ ದೊರೆಯದಿದ್ದರೆ ಗ್ರಾಹಕ ಆಯೋಗದ ಮೊರೆ ಹೋಗುವುದರ ಜೊತೆಗೆ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆದರೆ, ಸಿಹಿತಿಂಡಿಯಲ್ಲಿ ಪತ್ತೆಯಾಗಿದೆ ಎನ್ನಲಾದ ವಸ್ತುವಿನ ನಿಖರ ಸ್ವರೂಪ ಹಾಗೂ ಆರೋಪದ ಸತ್ಯಾಸತ್ಯತೆ ಅಧಿಕೃತ ಪರಿಶೀಲನೆಯ ಬಳಿಕವೇ ಖಚಿತವಾಗಬೇಕಿದೆ. ಈ ಕುರಿತು ಆನಂದ್ ಸ್ವೀಟ್ಸ್ ಸಂಸ್ಥೆಯ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.
-
ಬೆಂಗಳೂರು20 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ22 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ21 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ದೇಶ19 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ22 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ22 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ಕ್ರೀಡೆ22 ಗಂಟೆಗಳು agoIndia vs Panama: ವಿಶ್ವಕಪ್ ಆಡಿದ ಪನಾಮ ವಿರುದ್ಧ ಭಾರತ ಸೆಣಸು; ಪಂದ್ಯಕ್ಕೆ ದಿನಾಂಕ ಫಿಕ್ಸ್
-
ದೇಶ22 ಗಂಟೆಗಳು agoPM Narendra Modi ಥರ್ಡ್ ಪಾರ್ಟಿ ಆಡಿಟ್ ಇದ್ದರೂ ಕಳಪೆ ಕಾಮಗಾರಿ ಏಕೆ? ಅಧಿಕಾರಿಗಳಿಗೆ ಮೋದಿ ನೇರ ಪ್ರಶ್ನೆ
