ಪೋಕ್ಸೊ ಸಂತ್ರಸ್ತೆಯ ಗುರುತು ಬಹಿರಂಗ: ಶ್ರೀರಾಮುಲು ವಿರುದ್ಧ ಎಫ್‌ಐಆರ್ | Hosa Suddi

ಅಪರಾಧ

ಪೋಕ್ಸೊ ಸಂತ್ರಸ್ತೆಯ ಗುರುತು ಬಹಿರಂಗ: ಶ್ರೀರಾಮುಲು ವಿರುದ್ಧ ಎಫ್‌ಐಆರ್

Published

on

ಬಳ್ಳಾರಿ: ಪೋಕ್ಸೊ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಪೋಕ್ಸೊ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ದಾಖಲಿಸಲಾಗಿದೆ.

ಬಳ್ಳಾರಿಯಲ್ಲಿ ಜ.1ರಂದು ನಡೆದ ಘರ್ಷಣೆ ಹಾಗೂ ಕೊಲೆ ಘಟನೆ ಖಂಡಿಸಿ, ಜ.17ರಂದು ಬಿಜೆಪಿ ವತಿಯಿಂದ ಎಪಿಎಂಸಿ ಪ್ರಾಂಗಣದಲ್ಲಿ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಭಾಷಣ ಮಾಡುವ ಭರದಲ್ಲಿ ಬಿ. ಶ್ರೀರಾಮುಲು ಅವರು ಪೋಕ್ಸೊ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜ.18ರಂದು ಪ್ರಕರಣ ದಾಖಲಾಗಿದೆ.

ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷೆಗೆ ತಡೆ

ಶಾಸಕ ಭರತ್ ರೆಡ್ಡಿ ವಿರುದ್ಧ ಟೀಕಿಸುವ ಸಂದರ್ಭದಲ್ಲಿ, ಯುವಕರನ್ನು ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ ಶ್ರೀರಾಮುಲು, ನಗರದ ಶಾಲೆಯೊಂದರ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ, ಆಕೆಯ ಹೆಸರು, ಶಾಲೆ, ತರಗತಿ ಹಾಗೂ ಜಾತಿಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್ ನೀಡಿದ ದೂರಿನ ಆಧಾರದಲ್ಲಿ, ಮಹಿಳಾ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯ ಕಲಂ 23(1), 23(2) ಹಾಗೂ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 74 ಅಡಿಯಲ್ಲಿ ಕೇಸು ದಾಖಲಿಸಿದ್ದಾರೆ.

ಪೋಕ್ಸೊ ಸಂತ್ರಸ್ತರ ಗುರುತು ಬಹಿರಂಗಪಡಿಸುವುದು ಕಾನೂನುಬಾಹಿರವಾಗಿದ್ದು, ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Trending

Exit mobile version