ಅಪರಾಧ
ಭದ್ರಾವತಿಯಲ್ಲಿ ಈದ್ ಮೆರವಣಿಗೆಯ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ? ವೈರಲ್ ವಿಡಿಯೋ ತನಿಖೆಗೆ ಎಸ್‌ಪಿ ಆದೇಶ
ಶಿವಮೊಗ್ಗ:
ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೇಳಿಬಂದಿರುವ ವಿಡಿಯೋ ಸೋಮವಾರ ರಾತ್ರಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಇಲಾಖೆ ತಕ್ಷಣವೇ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಆರಂಭಿಸಲಾಗಿದೆ.
ಈ ಘಟನೆ ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ವಿ.ವಿ. ಪ್ರಾಯೋಗಿಕ ಪರೀಕ್ಷೆಗಾಗಿ ವಿಡಿಯೋವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಶಿವಮೊಗ್ಗ ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. 12 ಸೆಕೆಂಡಿನ ವೈರಲ್ ವಿಡಿಯೋ ಪರಿಶೀಲನೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಈ ವಿಡಿಯೋದಲ್ಲಿ ಯಾರಿದ್ದರು ಅವರ ಗುರುತಿಸಲು ಮತ್ತು ಪತ್ತೆ ಹಚ್ಚಲು ಪ್ರತ್ಯೇಕ ತಂಡ ಕೆಲಸ ಮಾಡುತ್ತಿದೆ,” ಎಂದು ತಿಳಿಸಿದ್ದಾರೆ.
ಅವರ ಪ್ರಕಾರ, ಮೆರವಣಿಗೆಯ ಸಂಪೂರ್ಣ ವಿಡಿಯೋ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಈಗಾಗಲೇ ಮೂರು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖಾ ತಂಡಗಳನ್ನು ರಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.