ದೇಶ
Breaking News ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸದಲ್ಲಿ ಬಾಂಬ್ ಬೆದರಿಕೆ – ತಮಿಳುನಾಡಿನಲ್ಲಿ ಭದ್ರತಾ ಎಚ್ಚರಿಕೆ
ಚೆನ್ನೈ: ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರ ಚೆನ್ನೈ ನಿವಾಸಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಒಡ್ಡಲಾಗಿದೆ. ಈ ಬಗ್ಗೆ ತಮಿಳುನಾಡಿನ ಡಿಜಿಪಿ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ತಪಾಸಣೆ ನಡೆಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಮೇಲ್ನೋಟಕ್ಕೆ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಪೊಲೀಸರು ಮತ್ತು ಬಾಂಬ್ ಪತ್ತೆ ನಿಷ್ಕ್ರಿಯ ದಳದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ತಮಿಳುನಾಡಿನಲ್ಲಿ ಖಾಸಗಿ ಟಿವಿ ಚಾನಲ್, ಸಿಎಂ ಸ್ಟಾಲಿನ ನಿವಾಸ ಮತ್ತು ಗಾಯಕ ಇಳಯರಾಜನ್ ಅವರ ಮನೆಯನ್ನು ಸಹ ಬಾಂಬ್ ಬೆದರಿಕೆ ಹಾಕಲಾಗಿದ್ದು, ಈ ಘಟನೆಗಳು ಕಿಡಿಗೇಡಿಗಳ ಸರಣಿ ಕೃತ್ಯ ಎಂದು ಊಹಿಸಲಾಗಿದೆ.
ಪ್ರಧಾನ ಪೊಲೀಸ್ ಅಧಿಕಾರಿ ಮತ್ತು ಸ್ಥಳೀಯ ಪೊಲೀಸರು ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಮತ್ತು ಸುರಕ್ಷತೆಯನ್ನು ಕಾಪಾಡುವಂತೆ ಕ್ರಮ ಕೈಗೊಂಡಿದ್ದಾರೆ. ಬೆದರಿಕೆ ನೀಡಿದ ವ್ಯಕ್ತಿಯ ವಿರುದ್ಧ ತನಿಖೆ ಮುಂದುವರೆದಿದೆ.