ಅಪರಾಧ

ಚಿಕ್ಕಮಗಳೂರಿನಲ್ಲಿ ಕಲ್ಲು ತೂರಾಟ ಆರೋಪ: ವಿಜಯಪುರ ಬಡಾವಣೆಯಲ್ಲಿ ಎರಡು ಕೋಮಿನ ನಡುವೆ ಉದ್ವಿಗ್ನತೆ

Published

on

ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆಯ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಮವಾರ (ಫೆ.16) ಮಧ್ಯರಾತ್ರಿ ಘಟನೆ ಬೆಳಕಿಗೆ ಬಂದಿದ್ದು, ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ.

ವಾರದಿಂದ 5-6 ಜನರ ಗುಂಪು ಮನೆಯ ಹಿಂಭಾಗಕ್ಕೆ ಬಂದು ಕಲ್ಲು ಎಸೆದು ಪರಾರಿಯಾಗುತ್ತಿತ್ತು ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ. ಕಳೆದ ಮೂರು ದಿನಗಳಿಂದ ಹೆಣ್ಣುಮಕ್ಕಳನ್ನು ಹಿಂಬಾಲಿಸುವ ಘಟನೆಗಳೂ ನಡೆದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಗಂಭೀರವಾಗುತ್ತಿದ್ದಂತೆ ಕೆಲವು ಹಿಂದೂ ಸಂಘಟನೆ ಕಾರ್ಯಕರ್ತರು ಇಬ್ಬರು ಯುವಕರನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೂಡ ನಡೆದಿದೆ.

ಬಸವನಹಳ್ಳಿ ಪೊಲೀಸ್ ಠಾಣೆ ಮುಂದೆ ಎರಡೂ ಕೋಮಿನ ನೂರಾರು ಯುವಕರು ಜಮಾಯಿಸಿದ್ದರಿಂದ ಪರಿಸ್ಥಿತಿ ತೀವ್ರಗೊಂಡಿತು. “ಕಲ್ಲು ತೂರಿದವರು ಅವರಲ್ಲ, ಹಲ್ಲೆ ಮಾಡಿದವರ ಮೇಲೂ ಕ್ರಮ ಕೈಗೊಳ್ಳಬೇಕು” ಎಂದು ಒಂದು ಕೋಮಿನ ಯುವಕರು ಆಗ್ರಹಿಸಿದರು.

ತಕ್ಷಣ ಎಚ್ಚೆತ್ತ ಪೊಲೀಸರು ಠಾಣೆ ಹಾಗೂ ಆಸ್ಪತ್ರೆ ಬಳಿ ಗುಂಪು ಸೇರದಂತೆ ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಹಲ್ಲೆಗೆ ಒಳಗಾದ ಯುವಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲ್ಲು ತೂರಾಟ ಪ್ರಕರಣದಲ್ಲಿ ಮನೆ ಮಾಲೀಕರು ಅಪ್ರಾಪ್ತ ಬಾಲಕರ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಅಪ್ರಾಪ್ತರು ಹಾಗೂ ಹಿಂದೂ ಕಾರ್ಯಕರ್ತರು, ಬಿಜೆಪಿ ಮುಖಂಡರ ವಿರುದ್ಧವೂ ಪ್ರತಿದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Trending

Exit mobile version