ಬೆಂಗಳೂರು ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ: ನಾಯಕರು-ನಟರು ಕ್ರೀಡಾಂಗಣದಲ್ಲಿ ಮುಖಾಮುಖಿ! | Hosa Suddi

ದೇಶ

ಬೆಂಗಳೂರು ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ: ನಾಯಕರು-ನಟರು ಕ್ರೀಡಾಂಗಣದಲ್ಲಿ ಮುಖಾಮುಖಿ!

Published

on

ಬೆಂಗಳೂರು: 9 ಡ್ರೀಮ್ಸ್ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21 ಮತ್ತು 22ರಂದು Karnataka Badminton Association ಅಂಗಣದಲ್ಲಿ ಎರಡು ದಿನಗಳ ರೋಚಕ ಟೂರ್ನಿ ನಡೆಯಲಿದೆ.

“ಲೀಡರ್ಸ್ ಪ್ಲೇ.. ಫ್ರೆಂಡ್‌ಶಿಪ್ ವಿನ್” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಮೊದಲ ಆವೃತ್ತಿಯ ಟೂರ್ನಿಯ ಲಾಂಛನವನ್ನು ಮುಖ್ಯಮಂತ್ರಿ Siddaramaiah ಈಗಾಗಲೇ ಅನಾವರಣಗೊಳಿಸಿದ್ದಾರೆ. ಜನಪ್ರತಿನಿಧಿಗಳು, ಐಎಎಸ್-ಐಪಿಎಸ್ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ವೈದ್ಯರು, ಸ್ಯಾಂಡಲ್‌ವುಡ್ ತಾರೆಯರು ಹಾಗೂ ಪತ್ರಕರ್ತರು ಒಂದೇ ವೇದಿಕೆಯಲ್ಲಿ ಕ್ರೀಡಾ ಮನೋಭಾವದಿಂದ ಸೆಣಸಲಿದ್ದಾರೆ.

ಟೂರ್ನಿಯಲ್ಲಿ ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್, ಇನ್‌ಸ್ಪೈರ್ ಚಾಲೆಂಜರ್ಸ್, ದಿ ಕೆಫೆ ದಿವ್ಯಂ, ಎಟಿಎಸ್ ಅಟ್ಯಾಕರ್ಸ್, ಪ್ರೋ ವಿನ್ ಪ್ಯಾಂಥರ್ಸ್, ಎಸ್ಥೆಟಿಕ್ ಅಟ್ಯಾಕರ್ಸ್, ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ಹಾಗೂ ಕೆಜಿಎಫ್ ಸ್ಮಾಷರ್ಸ್ ಸೇರಿದಂತೆ ಎಂಟು ತಂಡಗಳು ಕಣಕ್ಕಿಳಿಯಲಿವೆ.

ಲೀಗ್ ಮಾದರಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಎರಡು ಗುಂಪುಗಳಾಗಿ ತಂಡಗಳನ್ನು ವಿಭಜಿಸಲಾಗಿದೆ. ಪ್ರತೀ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಒಟ್ಟು 128 ಆಟಗಾರರು ಭಾಗವಹಿಸಲಿದ್ದು, ಕಳೆದ ಒಂದು ತಿಂಗಳಿನಿಂದ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ವಿನೂತನ ಮಾದರಿಯ ಈ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ನಮ್ಮ ಬೆಂಗಳೂರು ಸಾಕ್ಷಿಯಾಗಲಿದ್ದು, ಕ್ರೀಡಾ ಪ್ರೇಮಿಗಳಿಗೆ ರೋಚಕ ಕ್ಷಣಗಳನ್ನು ಉಣಬಡಿಸಲಿದೆ.

Trending

Exit mobile version