ಬೆಂಗಳೂರು
ಬಿಜೆಪಿ ಪ್ರೊಟೆಸ್ಟ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಎಂ ಗರಂ!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಬೇಕು ಮತ್ತು ಸಿಎಂ ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲು ಮಾಧ್ಯಮದವರು ಮುಂದಾದಾಗ ಸಿಎಂ ಗದರಿದ್ದು ಹೇಳಿಕೆ ಕೊಡಲು ನಿರಾಕರಿಸಿದ್ದಾರೆ,
ಆಮೇಲೆ ಬೇಕಾದಾದ ಫೋನ್ ಮಾಡಿ ಹೇಳುತ್ತೇನು ಎಂದು ಮಾಧ್ಯಮದವರಿಗೆ ಸಿಎಂ ಹೇಳಿದ್ದಾರೆ ಸಿಎಂ ಮುಡಾ ಪ್ರಕರಣ ಸಂಬಂಧ ಇಂದು ಬಿಜೆಪಿ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಎದರು ಪ್ರತಿಭಟನೆ ನಡೆಸಲಿದೆ,
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕರು ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಎಂಎಲ್‍ಸಿಗಳು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ,
ಮುಡಾ ಪ್ರಕರಣ ಮತ್ತು ಎಸ್‍ಟಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಾಗೂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ,
ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ತಮ್ಮ ಸ್ಧಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ,