Blog

ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಆಗೋಕೆ ಸಿಎಂ ಸಿದ್ದರಾಮಯ್ಯ ಕಾರಣ:ಕೋಳಿವಾಡ

Published

on

ಬೆಂಗಳೂರು: ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಆಗೋದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ, ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಕೇಸ್ ಮುಂದಿಟ್ಟುಕೊAಡು ಬಿಜೆಪಿ ಪ್ರಚಾರ ನಡೆಸಿತು, ಕಾಂಗ್ರೆಸ್ ಸ್ಧಾನ ಕಳೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ನೇರ ಕಾರಣ ಎಂದು ಹೇಳಿದ್ದಾರೆ ,
ಬಿಜೆಪಿ ಅಬ್ಬರದ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹಗರಣವನ್ನು ಪ್ರಸ್ತಾಪಿಸಿತು, ಇದರಿಂದ ಕಾಂಗ್ರೆಸ್ ಗೆ ವೋಟ್ ಕಡಿಮೆಯಾಗಿ ಹಿನ್ನಡೆಯಾಗಿದೆ ಎಂದು ತಿಳಿಸಿದರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಈಗಲೂ ಹೇಳುತ್ತೇನೆ, ತಮ್ಮ ಹೇಳಿಕೆಗೆ ಬದ್ಧವಾಗಿದ್ದೇನೆ, ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿಕೊಂಡಿದ್ದೇನೆ ಎಂದು ಕೋಳಿವಾಡ ಹೇಳಿದ್ದಾರೆ,
ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವಿಪಕ್ಷಗಳು ಪಟ್ಟು ಹಿಡಿದಿದೆ, ಕೆ.ಬಿ.ಕೋಳಿವಾಡ ಕೂಡ ರಾಜೀನಾಮೆ ನೀಡುವಂತೆ ಒತ್ತಾಯಿಸಿರೋದು ಕೈ ಪಾಳಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು..

Trending

Exit mobile version