ನಾನು ಭಾವಿಸಿದಷ್ಟು ಧೈರ್ಯವಂತರಲ್ಲ, ನಿಮಗೂ ಭಯವಿದೆ, ಕರ್ಮ ಹಿಟ್ ಬ್ಯಾಕ್: ಹೆಚ್​ಡಿಕೆ ಟಾಂಗ್ - Muda Case | Hosa Suddi

ಬೆಂಗಳೂರು

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ, ನಿಮಗೂ ಭಯವಿದೆ, ಕರ್ಮ ಹಿಟ್ ಬ್ಯಾಕ್: ಹೆಚ್​ಡಿಕೆ ಟಾಂಗ್ – Muda Case

Published

on

ಬೆಂಗಳೂರು: ‘ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚಿಸಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ’ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಸಿದ್ದರಾಮಯ್ಯನವರೇ ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ’ ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

Karma Hit back ಎಂದರೆ ಇದೇ ಅಲ್ಲವೇ ಸಿದ್ದರಾಮಯ್ಯನವರೇ?. ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ’ ಎಂದಿದ್ದಾರೆ.

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ!. ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ’ ಎಂದು ಪ್ರಶ್ನಿಸಿದ್ದಾರೆ.

Trending

Exit mobile version