ಹಾವೇರಿ ಹೋರಿ ಸ್ಪರ್ಧೆ ದುರಂತ: ವೃದ್ಧನ ಸಾವು, ಇಬ್ಬರಿಗೆ ಗಂಭೀರ ಗಾಯ! | Hosa Suddi

ದೇಶ

ಹಾವೇರಿ ಹೋರಿ ಸ್ಪರ್ಧೆ ದುರಂತ: ವೃದ್ಧನ ಸಾವು, ಇಬ್ಬರಿಗೆ ಗಂಭೀರ ಗಾಯ!

Published

on

ಹಾವೇರಿ: ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ದುರಂತಕ್ಕೆ ಕಾರಣವಾಗಿದೆ. ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಡೆದ ಸ್ಪರ್ಧೆಯಲ್ಲಿ ಹೋರಿ ತಿವಿದು ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿ ಕೂಡ ಬಲಿಪಾಡ್ಯಮಿಯಂದು ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಸಾಕಷ್ಟು ಜನರು ಈ ಕಾರ್ಯಕ್ರಮ ವೀಕ್ಷಿಸಲು ಆಗಮಿಸಿದ್ದರು. ಈ ವೇಳೆ ಕೊಬ್ಬರಿ ಹೋರಿ ನಿಯಂತ್ರಣ ತಪ್ಪಿ ಪ್ರೇಕ್ಷಕರತ್ತ ಓಡಿ, ವೃದ್ಧನಿಗೆ ತಿವಿದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಹಾವೇರಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

Trending

Exit mobile version