ದೇಶ
ಇರಾನ್ನಲ್ಲಿ ಉದ್ವಿಗ್ನತೆ: ಭಾರತೀಯರಿಗೆ ತುರ್ತು ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ Iranನಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಮಹತ್ವದ ಎಚ್ಚರಿಕೆ ನೀಡಲಾಗಿದೆ. Embassy of India, Tehran ತನ್ನ ಅಧಿಕೃತ ಪ್ರಕಟಣೆಯಲ್ಲಿ ಇರಾನ್ನಲ್ಲಿರುವ ಎಲ್ಲಾ ಭಾರತೀಯರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಸೂಚಿಸಿದೆ.
ಇರಾನ್ನಲ್ಲಿರುವ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆಯನ್ನು ಬಳಸಿಕೊಂಡು ತಕ್ಷಣ ಹೊರಡಬೇಕು ಎಂದು ತಿಳಿಸಲಾಗಿದೆ. ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.5 ರಂದು ನೀಡಿದ್ದ ಸಲಹೆಯ ಮುಂದುವರಿದ ಭಾಗವಾಗಿ ಈ ಸೂಚನೆ ಹೊರಡಿಸಲಾಗಿದೆ.
ಭಾರತೀಯರು ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು. ಸ್ಥಳೀಯ ಮಾಧ್ಯಮಗಳ ಮೂಲಕ ಬೆಳವಣಿಗೆಗಳನ್ನು ಗಮನಿಸಬೇಕು. ಪಾಸ್ಪೋರ್ಟ್ ಹಾಗೂ ಪ್ರಯಾಣ ದಾಖಲೆಗಳನ್ನು ಯಾವಾಗಲೂ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ. ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್ಲೈನ್ ಪೋರ್ಟಲ್ ಮೂಲಕ ಕೂಡಲೇ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಇಂಟರ್ನೆಟ್ ಸ್ಥಗಿತ – ತುರ್ತು ಸಹಾಯವಾಣಿ ಬಿಡುಗಡೆ
ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಂಡಿರುವ ಹಿನ್ನೆಲೆ, ಅಲ್ಲಿ ಸಿಲುಕಿರುವ ಭಾರತೀಯರ ಪರವಾಗಿ ಕುಟುಂಬಸ್ಥರು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಇದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ:
📞 +989128109115
📞 +989128109109
📞 +989128109102
📞 +989932179359
📧 ಇ-ಮೇಲ್: cons.tehran@mea.gov.in