ದೇಶ
ಇರಾನ್ ಮೇಲೆ ಇಸ್ರೇಲ್–ಅಮೆರಿಕ ಜಂಟಿ ಮಿಸೈಲ್ ದಾಳಿ? ಟೆಹ್ರಾನ್‌ನಲ್ಲಿ ಸ್ಫೋಟ, ಇಸ್ರೇಲ್ ಹೈ ಅಲರ್ಟ್
ಟೆಹ್ರಾನ್: ಪರಮಾಣು ಶಸ್ತ್ರಾಸ್ತ್ರಗಳ ಒಪ್ಪಂದಕ್ಕೆ ಸಹಿ ಹಾಕದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಮಿಸೈಲ್ ದಾಳಿ ನಡೆಸಿವೆ ಎಂಬ ವರದಿಗಳು ಹೊರಬಿದ್ದಿವೆ. ರಾಜಧಾನಿ ಟೆಹ್ರಾನ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುಮಾರು 30 ಗುರಿಗಳನ್ನು ಟಾರ್ಗೆಟ್ ಮಾಡಿ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟೆಹ್ರಾನ್‌ನಲ್ಲಿ ಭಾರೀ ಸ್ಫೋಟದ ಶಬ್ಧಗಳು ಕೇಳಿಬಂದಿದ್ದು, ದಟ್ಟ ಹೊಗೆ ಆಕಾಶಕ್ಕೆ ಏರುತ್ತಿರುವ ದೃಶ್ಯಗಳು ಕಂಡುಬಂದಿವೆ. ದಾಳಿಯ ತೀವ್ರತೆ ಹಾಗೂ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ.
ಪ್ರತೀಕಾರದ ಆತಂಕ: ಇಸ್ರೇಲ್‌ನಲ್ಲಿ ಹೈ ಅಲರ್ಟ್
ಈ ದಾಳಿಗೆ ಪ್ರತೀಕಾರವಾಗಿ ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸುವ ಸಾಧ್ಯತೆ ಇರುವ ಹಿನ್ನೆಲೆ, ಇಸ್ರೇಲ್ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಪ್ರಮುಖ ನಗರಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ವಾಯುದಾಳಿ ಎಚ್ಚರಿಕೆ ಸೈರನ್‌ಗಳ ಮೂಲಕ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳ
ಇರಾನ್–ಇಸ್ರೇಲ್–ಅಮೆರಿಕ ನಡುವಿನ ಈ ಬೆಳವಣಿಗೆಗಳಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ. ಮುಂದಿನ ಬೆಳವಣಿಗೆಗಳ ಮೇಲೆ ಜಾಗತಿಕ ಸಮುದಾಯದ ಗಮನ ಕೇಂದ್ರೀಕೃತವಾಗಿದೆ.