ದೇಶ
ಕರ್ನಾಟಕ ಫಿಲ್ಮ್ ಚೇಂಬರ್‌ನಲ್ಲಿ ರಾಜಕೀಯ ಬಿಸಿ: ಡಿಸೆಂಬರ್‌ನಲ್ಲಿ ಚುನಾವಣೆ ಹವಾ!
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆಯ ದಿನಾಂಕ ಇದೀಗ ಫೈನಲ್ ಆಗಿರುವ ಸುದ್ದಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ಬಾರಿ ಕೂಡ ಚುನಾವಣೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಅಕ್ಟೋಬರ್ 30ರಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯ ಕುರಿತು ಚರ್ಚೆ ನಡೆಯಿತು. ಅಧ್ಯಕ್ಷ, ಉಪಾಧ್ಯಕ್ಷ, ವಿತರಕ ವಲಯ, ಪ್ರದರ್ಶಕ ವಲಯ, ಕಾರ್ಯದರ್ಶಿ ಹಾಗೂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಬಾರಿ ನಿರ್ಮಾಪಕರ ಸಂಘದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲು ಅವಕಾಶವಿದ್ದು, ಸಾರಾ ಗೋವಿಂದು ಸೇರಿದಂತೆ ಹಲವು ನಿರ್ಮಾಪಕರು ಸ್ಪರ್ಧೆಗೆ ಸಜ್ಜಾಗಿದ್ದಾರೆ.
ಕಳೆದ ವರ್ಷದ ಚುನಾವಣೆಯು ಡಿಸೆಂಬರ್ 14ರಂದು ನಡೆದಿತ್ತು. ಪ್ರದರ್ಶಕರ ವಲಯದಿಂದ ಎಂ. ನರಸಿಂಹಲು ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬಾರಿ ಚುನಾವಣೆ ಡಿಸೆಂಬರ್ 20, 2025ರಂದು ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಂಡಳಿಯೊಳಗೆ ಈಗಾಗಲೇ ಚುನಾವಣಾ ಚಟುವಟಿಕೆಗಳು ಚುರುಕಾಗುತ್ತಿವೆ.