ಅಪರಾಧ
ಕಾರವಾರ ಜೈಲಿನಲ್ಲಿ ರೌಡಿಗಳ ಮಾರಣಾಂತಿಕ ಹಲ್ಲೆ – ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡರು
ಕಾರವಾರ: ಕಾರವಾರ (Karwar) ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಕ್ರಮ ಕೈಗೊಂಡಿದ್ದಕ್ಕೆ ರೌಡಿಗಳು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಮಂಗಳೂರು (Mangaluru) ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರು. ಜೈಲರ್ ಅವರ ಜೊತೆ ಮಾದಕ ವಸ್ತುಗಳ ವಿಚಾರದಲ್ಲಿ ಗಲಾಟೆ ನಡೆದರೂ ಅವರು ಒಪ್ಪದ ಹಿನ್ನೆಲೆ ಈ ಹಲ್ಲೆ ನಡೆದಂತೆ ತಿಳಿದುಬಂದಿದೆ. ಹಲ್ಲೆಗೊಳಗಾದ ಜೈಲರ್ ಮತ್ತು ಸಿಬ್ಬಂದಿಯನ್ನು ತಕ್ಷಣ ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಈಗಾಗಲೇ 12ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಮಂಗಳೂರಿನ ಜೈಲಿನಿಂದ ಹೆಚ್ಚುವರಿ ಅಪರಾಧಿಗಳಾಗಿ ಗುರುತಿಸಲಾಗಿದ್ದವರು ಕಾರವಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದರು. ಕಳೆದ ಕೆಲ ದಿನಗಳಿಂದ ಕಾರವಾರ ಜೈಲಿನಲ್ಲಿ ಮಾದಕ ವಸ್ತುಗಳನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.