ಅಪರಾಧ
ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ: ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಹಲವು ಕಡೆ ಶಾಕ್ ಕಾರ್ಯಾಚರಣೆ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ಇಂದು ಬೆಳಿಗ್ಗೆ ಶಾಕ್ ದಾಳಿ ನಡೆಸಿದೆ. ದಾಳಿ ಚಳ್ಳಕೆರೆ ಪಟ್ಟಣದಲ್ಲಿರುವ ಅವರ ನಾಲ್ಕು ಮನೆಗಳು ಮತ್ತು ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದಲ್ಲಿ ನಡೆದಿದ್ದು, ಅಧಿಕಾರಿಗಳು ಅನೇಕ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಈ ದಾಳಿಗೆ ಕಾರಣವಾಗಿರುವ ಆರ್ಥಿಕ ಕ್ರಿಮಿನಲ್ ಪ್ರಕರಣಗಳ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ತಂಡ ಅಚಾನಕವಾಗಿ ಕಾರ್ಯಾಚರಣೆ ನಡೆಸಿದ್ದು, ಶಾಸಕರ ಸಹೋದರರಾದ ಕೆ.ಸಿ ನಾಗರಾಜ್ ಮತ್ತು ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿ ನಡೆದಿದೆ.
ಅಧಿಕಾರಿಗಳು ಈ ವೇಳೆ ಕೆಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ದಾಳಿ ಸ್ಥಳೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಇನ್ನಷ್ಟು ವಿವರಗಳು ನಿರೀಕ್ಷೆಯಲ್ಲಿವೆ.