ಬೆಂಗಳೂರು
ಬೆಂಗಳೂರಿನಲ್ಲಿ ಆನೆ ದಾಳಿ ಶಂಕೆ: Kengeri ಬಳಿ ವ್ಯಕ್ತಿ ಸಾವು
ಬೆಂಗಳೂರು: Kengeri ಸಮೀಪದ ಆರ್.ಆರ್. ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಘಟನೆ ನಡೆದಿದೆ. ನಾಗರಾಜ್ ಅವರು ವಾಕಿಂಗ್‌ಗೆ ತೆರಳಿದ್ದ ವೇಳೆ ಆನೆ ದಾಳಿ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳದಲ್ಲಿ ಎರಡು ಕಾಂಪೌಂಡ್‌ಗಳು ಉರುಳಿಬಿದ್ದಿರುವುದು ಕಂಡುಬಂದಿದ್ದು, ಇದರಿಂದ ಸ್ಥಳೀಯರಲ್ಲಿ ಆನೆ ದಾಳಿಯ ಶಂಕೆ ಮತ್ತಷ್ಟು ಗಟ್ಟಿಯಾಗಿದೆ. ಸ್ಥಳೀಯರು ಕೂಡ ಆನೆ ದಾಳಿಯಿಂದಲೇ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳ ಪರಿಶೀಲನೆ ಮತ್ತು ತನಿಖೆ ಬಳಿಕ ವ್ಯಕ್ತಿಯ ಸಾವಿಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಬೇಕಿದೆ.