ಮೈಸೂರು–ಹಾಸನ ತಾಲೂಕು ಕಚೇರಿಗಳಿಗೆ ಬಾಂಬ್ ಬೆದರಿಕೆ | Hosa Suddi

ದೇಶ

ಮೈಸೂರು–ಹಾಸನ ತಾಲೂಕು ಕಚೇರಿಗಳಿಗೆ ಬಾಂಬ್ ಬೆದರಿಕೆ

Published

on

ಮೈಸೂರು (Mysuru) ಜಿಲ್ಲೆಯ ಸರಗೂರು ತಾಲೂಕು ಕಚೇರಿ ಹಾಗೂ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ (Email Bomb Threat) ಬಂದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸ್‌ ಇಲಾಖೆ ಹೈ ಅಲರ್ಟ್‌ ಘೋಷಿಸಿ, ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ತೀವ್ರ ಶೋಧ ಕಾರ್ಯ ನಡೆಸುತ್ತಿದೆ.

ಸರಗೂರು ತಾಲೂಕು ಕಚೇರಿಯಲ್ಲಿ RDX ಸ್ಫೋಟಕ ಬೆದರಿಕೆ

ಸರಗೂರು ತಾಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ (RDX) ಸ್ಫೋಟಕ ಇಡಲಾಗಿದೆ. ಮಧ್ಯಾಹ್ನದ ವೇಳೆಗೆ ಸ್ಫೋಟ ಸಂಭವಿಸಲಿದೆ ಎಂಬ ಸಂದೇಶ ಅಪರಿಚಿತ ವ್ಯಕ್ತಿಯ ಇ-ಮೇಲ್‌ ವಿಳಾಸದಿಂದ ಬಂದಿದೆ. ಮಾಹಿತಿ ತಿಳಿದ ತಕ್ಷಣ ಅಧಿಕಾರಿಗಳು ಮತ್ತು ಸಾರ್ವಜನಿಕರನ್ನು ಕಚೇರಿಯಿಂದ ಹೊರಕ್ಕೆ ಕಳುಹಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಂಬ್‌ ನಿಷ್ಕ್ರಿಯ ದಳದ ಸಹಾಯದಿಂದ ಕಟ್ಟಡದ ಒಳಗೆ ಮತ್ತು ಸುತ್ತಮುತ್ತ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಅಜಿತ್ ಕುಮಾರ್‌ ಕಚೇರಿಗೂ ಇದೇ ಇ-ಮೇಲ್‌

ಆಶ್ಚರ್ಯಕರ ಸಂಗತಿ ಎಂದರೆ ಇದೇ ಇ-ಮೇಲ್‌ ವಿಳಾಸದಿಂದ ತಮಿಳು ನಟ ಅಜಿತ್‌ ಕುಮಾರ್‌ ಅವರ ಚೆನ್ನೈ ಕಚೇರಿಗೂ ಬಾಂಬ್‌ ಬೆದರಿಕೆ ಸಂದೇಶ ಬಂದಿರುವುದು ಪತ್ತೆಯಾಗಿದೆ. ಇದರಿಂದ ಪ್ರಕರಣದ ಗಂಭೀರತೆ ಮತ್ತಷ್ಟು ಹೆಚ್ಚಾಗಿದೆ.

ಆಲೂರು ತಾಲೂಕು ಕಚೇರಿಗೂ ಬಾಂಬ್ ಬೆದರಿಕೆ

ಹಾಸನ ಜಿಲ್ಲೆಯ ಆಲೂರು ತಾಲೂಕು ಕಚೇರಿಗೂ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ. ಕಚೇರಿ ಸಿಬ್ಬಂದಿ ತಕ್ಷಣ ತಹಶೀಲ್ದಾರ್‌ ಮಲ್ಲಿಕಾರ್ಜುನ ಅವರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಿಬ್ಬಂದಿಯನ್ನು ಸಂಪೂರ್ಣವಾಗಿ ಹೊರಕ್ಕೆ ಕಳುಹಿಸಿ, ಕಟ್ಟಡವನ್ನು ಖಾಲಿ ಮಾಡಲಾಗಿದೆ.

ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶ್ವಾನದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳದೊಂದಿಗೆ ಕಟ್ಟಡದ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಇದೇ ತಿಂಗಳ ಡಿಸೆಂಬರ್ 15ರಂದು ಹಾಸನದ ಜಿಲ್ಲಾಧಿಕಾರಿ ಕಚೇರಿಗೂ ಬಾಂಬ್‌ ಬೆದರಿಕೆ ಬಂದಿತ್ತು ಎಂಬುದು ಗಮನಾರ್ಹ.

Trending

Exit mobile version